ಕನ್ನಡಪ್ರಭ ವಾರ್ತೆ ಮಳವಳ್ಳಿ
ಗಗನಚುಕ್ಕಿ ಜಲಪಾತೋತ್ಸವದ ಲೋಗೋವನ್ನು ಬಿಡುಗಡೆ ಮಾಡಿದ ನಂತರ ಲಕ್ಷದ್ವೀಪ್ ಹೋಟೆಲ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು, ಗಗನದಿಂದ ಧುಮ್ಮಿಕ್ಕಿ ಹರಿಯುವ ಕಾವೇರಿ ನದಿ ನಡುವೆ ನೈಸರ್ಗಿಕ ಸೊಬಗಿನ ಸೌಂದರ್ಯವನ್ನು ಪ್ರವಾಸಿಗರು ಕಣ್ತುಂಬಿಕೊಳ್ಳುವ ಜೊತೆಗೆ ಗಗನಚುಕ್ಕಿ ಜಲಪಾತ ಪ್ರವಾಸಿ ತಾಣವನ್ನು ವಿಶ್ವ ಮಟ್ಟದಲ್ಲಿ ಪ್ರಚಾರ ಪಡಿಸಲು ಜಲಪಾತೋತ್ಸವವನ್ನು ಎರಡು ದಿನಗಳ ಕಾಲ ಆಚರಿಸಲಾಗುತ್ತಿದೆ ಎಂದರು.
ಪ್ರವಾಸಿಗರನ್ನು ಆಕರ್ಷಣೆ ಮಾಡಲು ಹಾಗೂ ಪ್ರವಾಸೋಧ್ಯಮ ಅಭಿವೃದ್ಧಿ ಪಡಿಸಲು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಯುವ ಪೀಳಿಗೆ ಆಕರ್ಷಣೆಗೆ ಒಳಗಾಗಿ ಹೆಚ್ಚಿನ ಪ್ರಮಾಣದಲ್ಲಿ ಜಲಪಾತೋತ್ಸವಕ್ಕೆ ಆಗಮಿಸುವುದರಿಂದ ಪ್ರವಾಸಿತಾಣದ ಬಗ್ಗೆ ನಾಡಿನಾದ್ಯಂತ ಹೆಚ್ಚು ಪ್ರಚಾರಗೊಳ್ಳಲಿದೆ ಎಂದರು.ಸಿಎಂರಿಂದ ಉದ್ಘಾಟನೆ:
ಪ್ರವಾಸಿ ತಾಣದ ಅಭಿವೃದ್ಧಿ:
ಬೃಹತ್ ಪ್ರವಾಸಿ ಆಕರ್ಷಣಿಯ ಕೇಂದ್ರವಾಗಿಸಲು ಕೇಂದ್ರ ಸರ್ಕಾರದ ಸಹಕಾರದಲ್ಲಿ ಯೋಜನೆ ಸಿದ್ಧಪಡಿಸಲಾಗಿದೆ.
ಜಲಪಾತೋತ್ಸವದ ವೇಳೆ ಪ್ರವಾಸೋಧ್ಯಮ ಸಚಿವರಿಗೆ ಪ್ರವಾಸಿ ತಾಣದ ಅಭಿವೃದ್ಧಿಗೆ ಬೇಕಾದ ಅನುದಾನಕ್ಕೆ ಮನವಿ ಸಲ್ಲಿಸಲಾಗುವುದು. ಅಭಿವೃದ್ಧಿ ಯೋಜನೆಯಿಂದ ಗಗನಚುಕ್ಕಿ ಪ್ರಸಿದ್ದ ಪ್ರೇಕ್ಷಣೀಯ ಸ್ಥಳವಾದರೆ ಹಲವು ಸ್ಥಳೀಯರಿಗೆ ಉದ್ಯೋಗ ದೊರೆಯಲಿದೆ ಎಂದರು.
ಜಲಪಾತೋತ್ಸವಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಲಕ್ಷಾಂತರ ಮಂದಿ ಆಗಮಿಸುವ ನಿರೀಕ್ಷೆ ಹೊಂದಲಾಗಿದೆ. ತಾಲೂಕಿನ ಮಲ್ಲಿಕ್ಯಾತನಹಳ್ಳಿ ಬಳಿ ಪಾರ್ಕಿಂಗ್ ವ್ಯವಸ್ಥೆ, ಕುಡಿಯುವ ನೀರು, ಶೌಚಾಲಯ, ಸಾರಿಗೆ ಹಾಗೂ ಉಚಿತವಾಗಿ ಊಟದ ವ್ಯವಸ್ಥೆ ಮಾಡಲಾಗಿದೆ. ಪ್ರವಾಸಿಗರಿಗೆ ಯಾವುದೇ ತೊಂದರೆಯಾಗಂತೆ ಮುನ್ನೆಚ್ಚರಿಕೆ ಕ್ರಮವನ್ನು ವಹಿಸಲಾಗಿದೆ ಎಂದರು.
ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ, ಪ್ರಸಕ್ತ ವರ್ಷ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಕೆ.ಆರ್.ಎಸ್ ಅಣೆಕಟ್ಟೆ ತುಂಬಿ ಮುಖ್ಯಮಂತ್ರಿಗಳು ಬಾಗಿನ ಅರ್ಪಿಸಿದ್ದಾರೆ. ಕಾವೇರಿ ನೀರಿನಿಂದ ಗಗನಚುಕ್ಕಿ ಮತ್ತು ಬರಚುಕ್ಕಿ ಜಲಪಾತಗಳಿಗೆ ಜೀವ ಕಲೆ ಬಂದಿದೆ ಎಂದರು.
ಸೆ.14ರಂದು ಬೆಳಗ್ಗೆ 11ಗಂಟೆಗೆ ಸ್ಥಳೀಯ ಕಲಾವಿದರಿಂದ ಸಂಸ್ಕೃತಿಕ ಕಾರ್ಯಕ್ರಮ, ಸಂಜೆ 4.30ಕ್ಕೆ ಕಾಮಿಡಿ ಕಿಲಾಡಿಗಳು ಕಲಾವಿದರಿಂದ ಮನರಂಜನೆ, ನಂತರ ಅಧಿಕೃತವಾಗಿ ಕಾರ್ಯಕ್ರಮ ಉದ್ಘಾಟನೆಯಾಗಲಿದೆ. ಸಂಜೆ 7ರಿಂದ ಮಣಿಕಾಂತ್ ಕದ್ರಿ, ಚಂದನ್‌ಶೆಟ್ಟಿ, ಹಂಸಿಕಾ ಅಯ್ಯರ್, ತಂಡದವರಿಂದ ನೃತ್ಯ, ಮತ್ತು ಸಂಗೀತ ಸಂಜೆ. ಸೆ.15ರಂದು ಸರಿಗಮಪ ತಂಡದದಿಂದ ಸಂಗೀತ, ಗಿಚ್ಚಿ ಗಿಲಿಗಿಲಿ ತಂಡದಿಂದ ಹಾಸ್ಯ ಹಾಗೂ ರವಿ ಬಸ್ರೂರ್ ಮತ್ತು ತಂಡದಿಂದ ಸಂಗೀತ ರಸಸಂಜೆ ಕಾರ್ಯಕ್ರಮ ನಡೆಯಲಿದೆ ಎಂದರು.
ಖ್ಯಾತ ಸಂಗೀತ ಸಂಯೋಜಕ ರವಿ ಬಸ್ರೂರು ಅವರು ಇದೇ ಮೊದಲ ಬಾರಿಗೆ ಲೈವ್ ಆಗಿ ಸೆ.15ರಂದು ಕಾರ್ಯಕ್ರಮ ನೀಡುತ್ತಿದ್ದಾರೆ. ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿ ಯಶಸ್ವಿಗೊಳಿಸಬೇಕೆಂದು ಕೋರಿದರು.ಸುದ್ದಿಗೋಷ್ಠಿಯಲ್ಲಿ ಜಿಪಂ ಸಿಇಒ ಶೇಖ್ ತನ್ವೀರ್ ಆಸೀಫ್, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಉಪವಿಭಾಗಾಧಿಕಾರಿ ಶಿವಮೂರ್ತಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.