ದೊಡ್ಡಬಳ್ಳಾಪುರ: ಆರ್.ಎಲ್.ಜಾಲಪ್ಪನವರ ವ್ಯಕ್ತಿತ್ವ ನೇರ-ನಿಷ್ಠುರ ಮತ್ತು ಹೃದಯವಂತಿಕೆಯಿಂದ ಕೂಡಿತ್ತು. ಬಹಳ ಸ್ವಾಭಿಮಾನಿ ಆಗಿದ್ದ ಜಾಲಪ್ಪನವರು ನನ್ನ ರಾಜಕೀಯ ಏಳಿಗೆಗೆ ಕಾರಣಕರ್ತರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಜಾಲಪ್ಪನವರಿಗೆ ಸಮಯ ಪ್ರಜ್ಞೆ ಇತ್ತು. ಒಬ್ಬ ದಕ್ಷ ಆಡಳಿತಗಾರರಾಗಿದ್ದ ಜಾಲಪ್ಪ ಅವರು ನಿರ್ವಹಿಸಿದ ಎಲ್ಲಾ ಖಾತೆಗಳಲ್ಲೂ ತಮ್ಮದೇ ಆದ ಹೆಜ್ಜೆ ಗುರುತುಗಳನ್ನು ದಾಖಲಿಸಿದ್ದು ಮಾತ್ರವಲ್ಲ, ರೈತರಿಗೆ, ಕೃಷಿಗೆ ಅತ್ಯಂತ ಮಹತ್ವದ ಕೊಡುಗೆ ನೀಡಿದ್ದರು. ನಾನು ಮೊದಲ ಬಾರಿ ಸಚಿವನಾಗಲು ರಾಚಯ್ಯನವರಷ್ಟೇ ಜಾಲಪ್ಪನವರೂ ಕಾರಣ ಎಂದು ಸ್ಮರಿಸಿದರು.
ಹಿಂದುಳಿದವರ ಏಳಿಗೆಗೆ ದೂರದೃಷ್ಠಿ:ಜಾಲಪ್ಪನವರಿಗೆ ಹಿಂದುಳಿದವರ ಏಳಿಗೆಯ ವಿಚಾರದಲ್ಲಿ ದೂರದೃಷ್ಟಿ ಇತ್ತು. ಹೀಗಾಗಿ ಆಗಲೇ ವೈದ್ಯಕೀಯ ಕಾಲೇಜು ಸ್ಥಾಪಿಸಿದ್ದರು. ಮೊದಲಿಗೆ 150 ವಿದ್ಯಾರ್ಥಿಗಳಿಂದ ಆರಂಭವಾದ ಸಂಸ್ಥೆ ಈಗ 9 ಸಾವಿರದಷ್ಟು ವಿದ್ಯಾರ್ಥಿಗಳು ನಾನಾ ವಿಭಾಗಗಳಲ್ಲಿ ಓದುತ್ತಿರುವುದು ಶ್ಲಾಘನೀಯ ಎಂದರು.
ನನ್ನನ್ನು ಮುಖ್ಯಮಂತ್ರಿ ಮಾಡಲೇಬೇಕು ಎಂದು ಜಾಲಪ್ಪನವರು ದೇವೇಗೌಡರ ಎದುರು ಹಠ ಹಿಡಿದು ಆಗ್ರಹ ಪೂರ್ವಕವಾಗಿ ಒತ್ತಾಯಿಸಿದ್ದರು. ನಾನು ಮತ್ತೆ ಜೆ.ಎಚ್.ಪಟೇಲರು ಇಬ್ಬರ ನಡುವೆ ಮುಖ್ಯಮಂತ್ರಿ ಯಾರಾಗಬೇಕು ಎನ್ನುವ ಚರ್ಚೆ ನಡೆಯುತ್ತಿದ್ದಾಗ ನನ್ನ ಪರವಾಗಿ ಗಟ್ಟಿಯಾಗಿ ನಿಂತು ದೇವೇಗೌಡರಿಗೆ ನನ್ನನ್ನೇ ಸಿಎಂ ಮಾಡಬೇಕು ಎಂದು ಒತ್ತಾಯಿಸಿದ್ದರು ಎಂದು ತಿಳಿಸಿದರು.
ನನ್ನ ಏಳಿಗೆಯಲ್ಲಿ ಜಾಲಪ್ಪ ಪಾತ್ರ ಹಿರಿದು:
ವಿವಿಧ ಕಟ್ಟಡಗಳ ಉದ್ಘಾಟನೆ, ಶಿಲಾನ್ಯಾಸ:
ಜಾಲಪ್ಪ ಪುರಸ್ಕಾರ ಪ್ರದಾನ:
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪ್ರಧಾನ ಆಯುಕ್ತ ಪಿ.ಜಿ.ಆರ್.ಸಿಂಧ್ಯ, ಮಾಜಿ ಸ್ಪೀಕರ್ ರಮೇಶ್‌ಕುಮಾರ್, ಮಾಜಿ ಸಭಾಪತಿ ವಿ.ಆರ್.ಸುದರ್ಶನ್, ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜ್, ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ, ಗೌರಿಬಿದನೂರು ಶಾಸಕ ಪುಟ್ಟಸ್ವಾಮಿ ಗೌಡ, ಮಾಜಿ ಸಚಿವೆ ರಾಣಿ ಸತೀಶ್, ಎಐಸಿಸಿ ಸದಸ್ಯ ಎಂ.ಸಿ.ವೇಣುಗೋಪಾಲ್, ಕೆಎಸ್‌ಆರ್‌ಟಿಸಿ ಮಾಜಿ ಅಧ್ಯಕ್ಷ ಟಿ.ಪ್ರಭಾಕರ್, ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ಆರ್ಯ ಈಡಿಗರ ಸಂಘದ ಅಧ್ಯಕ್ಷ ಎಂ.ತಿಮ್ಮೇಗೌಡ, ಎಸ್‌ಡಿಯುಇಟಿ ಉಪಾಧ್ಯಕ್ಷ ಜೆ.ರಾಜೇಂದ್ರ, ಕಾರ್ಯದರ್ಶಿ ಕೆ.ಜಿ.ಹನುಮಂತರಾಜು ಸೇರಿದಂತೆ ಟ್ರಸ್ಟಿಗಳು ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರದಲ್ಲಿ ನಡೆದ ಆರ್.ಎಲ್.ಜಾಲಪ್ಪ ಜನ್ಮಶತಮಾನೋತ್ಸವ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.
19ಕೆಡಿಬಿಪಿ2-ಕನ್ನಡಪ್ರಭ ವರದಿಗಾರ ಪ್ರೊ.ರವಿಕಿರಣ್ ಬರೆದಿರುವ ಜಾಲಪ್ಪ ಜೀವನ ಪಥ ಪುಸ್ತಕವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆ ಮಾಡಿದರು.
19ಕೆಡಿಬಿಪಿ3-ದೊಡ್ಡಬಳ್ಳಾಪುರದಲ್ಲಿ ನಡೆದ ಜಾಲಪ್ಪ ಜನ್ಮಶತಮಾನೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಭಿನಂದಿಸಲಾಯಿತು.