ಜಂಬೂ ಸವಾರಿ ಮೆರವಣಿಗೆ : ಆನೆಗಳ ತಾಲೀಮಿಗೆ ಚಾಲನೆ

KannadaprabhaNewsNetwork |  
Published : Oct 14, 2026, 01:15 AM IST
್ಿ್ಿ್ಿ | Kannada Prabha

ಸಾರಾಂಶ

ಉಪಮುಖ್ಯಮಂತ್ರಿ ಡಾ: ಜಿ. ಪರಮೇಶ್ವರ್ ಅವರ ಪತ್ನಿ ಕನ್ನಿಕಾಪರಮೇಶ್ವರಿ ಅವರು ಆನೆಗಳಿಗೆ ಪೂಜೆ ಸಲ್ಲಿಸುವ ಮೂಲಕ ತಾಲೀಮಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ವಿ. ಅಶ್ವಿಜ, ಅರಣ್ಯ ಸಂರಕ್ಷಣಾಧಿಕಾರಿ ಡಾ: ಸಂತೋಷ್ ಕುಮಾರ್, ತಹಸೀಲ್ದಾರ್ ರಾಜೇಶ್ವರಿ ಸೇರಿದಂತೆ ವಿವಿಧ ಅಧಿಕಾರಿ/ಸಿಬ್ಬಂದಿ ಹಾಜರಿದ್ದರು.

ಕನ್ನಡಪ್ರಭ ವಾರ್ತೆ, ತುಮಕೂರು

ದಸರಾ ಮಹೋತ್ಸವದ ಅಂಗವಾಗಿ ಅಕ್ಟೋಬರ್ 21 ರಂದು ನಡೆಯಲಿರುವ ಅದ್ಧೂರಿ ಜಂಬೂ ಸವಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿರುವ ಆನೆಗಳ ತಾಲೀಮಿಗೆ ಮಂಗಳವಾರ ನಗರದಲ್ಲಿ ಚಾಲನೆ ನೀಡಲಾಯಿತು.

ಈ ಬಾರಿ ಜಂಬೂ ಸವಾರಿಯಲ್ಲಿ 3 ಆನೆಗಳು ಪಾಲ್ಗೊಳ್ಳಲಿದ್ದು, ಅಂಬಾರಿ ಹೊರಲಿರುವ ಮಡಿಕೇರಿ ದುಬಾರೆ ಆನೆ ಶಿಬಿರದ 35 ವರ್ಷದ ಲಕ್ಷ್ಮಣನೊಂದಿಗೆ ತುಮಕೂರಿನ ಕರಿಬಸವೇಶ್ವರ ಮಠದ 32 ವರ್ಷದ ಲಕ್ಷ್ಮಿ ಹಾಗೂ ತಿಪಟೂರು ತಾಲೂಕು ನೊಣವಿನಕೆರೆ ಕಾಡು ಸಿದ್ದೇಶ್ವರ ಮಠದ 26 ವರ್ಷದ ಲಕ್ಷ್ಮಿ ಹೆಜ್ಜೆ ಹಾಕಲಿವೆ.

ಉಪಮುಖ್ಯಮಂತ್ರಿ ಡಾ: ಜಿ. ಪರಮೇಶ್ವರ್ ಅವರ ಪತ್ನಿ ಕನ್ನಿಕಾಪರಮೇಶ್ವರಿ ಅವರು ಆನೆಗಳಿಗೆ ಪೂಜೆ ಸಲ್ಲಿಸುವ ಮೂಲಕ ತಾಲೀಮಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ವಿ. ಅಶ್ವಿಜ, ಅರಣ್ಯ ಸಂರಕ್ಷಣಾಧಿಕಾರಿ ಡಾ: ಸಂತೋಷ್ ಕುಮಾರ್, ತಹಸೀಲ್ದಾರ್ ರಾಜೇಶ್ವರಿ ಸೇರಿದಂತೆ ವಿವಿಧ ಅಧಿಕಾರಿ/ಸಿಬ್ಬಂದಿ ಹಾಜರಿದ್ದರು.

ಜಂಬೂ ಸವಾರಿ ಮೆರವಣಿಗೆ ಸಾಗಲಿರುವ ನಗರದ ಬಿ.ಜಿ.ಎಸ್. ವೃತ್ತ-ಚರ್ಚ್ ಸರ್ಕಲ್-ಡಿ.ಸಿ. ಕಚೇರಿ-ಅಮಾನಿಕೆರೆ ರಸ್ತೆ-ಶಿವಕುಮಾರ ಸ್ವಾಮೀಜಿ ಸರ್ಕಲ್-ಜೂನಿಯರ್ ಕಾಲೇಜು ಮೈದಾನದ ರಸ್ತೆ ಮಾರ್ಗದಲ್ಲಿ ಆನೆಗಳಿಗೆ ತಾಲೀಮು ನಡೆಸಲಾಯಿತು.

-------------

ದಸರಾ ಉತ್ಸವ : ಇಂದಿನ ಕಾರ್ಯಕ್ರಮಗಳುತುಮಕೂರು: ದಸರಾ ಉತ್ಸವ ಪ್ರಯುಕ್ತ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಪ್ರತಿಷ್ಠಾಪಿಸಿರುವ ಚಾಮುಂಡೇಶ್ವರಿ ದೇವಿಗೆ ನಾಲ್ಕನೇ ದಿನ (ಅಕ್ಟೋಬರ್ 14)ವಾದ ಬುಧವಾರ ಬೆಳಗ್ಗೆ ಕೂಷ್ಮಾಂಡ ಅಲಂಕಾರ ಮಾಡಲಾಗುವುದು. ಉತ್ಸವದ ಅಂಗವಾಗಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದ ಅಮರಶಿಲ್ಪಿ ಜಕಣಾಚಾರಿ ಸಾಂಸ್ಕೃತಿಕ ವೈಭವ ಮಹಾವೇದಿಕೆಯಲ್ಲಿ ಸಂಜೆ 4 ಗಂಟೆಗೆ ತುಮಕೂರಿನ ಶ್ರೀ ಸತ್ಯಸಾಯಿ ಇಂಟರ್ ನ್ಯಾಷನಲ್ ಶಾಲೆ ವಿದ್ಯಾರ್ಥಿಗಳಿಂದ ನವರಾತ್ರಿ ನೃತ್ಯ ವೈಭವ, ಗಾಂಧಿನಗರ ಸೇಂಟ್ ಮೆರೀಸ್ ಶಾಲೆ ವಿದ್ಯಾರ್ಥಿಗಳಿಂದ ನವ ದುರ್ಗೆಯರ ನೃತ್ಯ, ಉತ್ತರ ಬಡಾವಣೆ ಜಿ.ಎಂ.ಎಚ್.ಪಿ.ಎಸ್. ಶಾಲೆಯ ವಿದ್ಯಾರ್ಥಿಗಳಿಂದ ಜಾನಪದ ನೃತ್ಯ, ಶೇಷಾದ್ರಿಪುರಂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಂದ ಭರತನಾಟ್ಯ; ಸಂಜೆ 6.30 ಗಂಟೆಗೆ ಚಿಕ್ಕನಾಯಕನಹಳ್ಳಿ ನಟನಂ ಕಲಾತಂಡದಿಂದ ದಶಾವತಾರ ಹಾಗೂ ಅಷ್ಟಲಕ್ಷ್ಮೀ ವೈಭವ-ನೃತ್ಯ ರೂಪಕ, ಬನಶಂಕರಿ ಮಹಿಳಾ ಭಜನಾ ತಂಡದಿಂದ ಜಾನಪದ ಗೀತೆ ಹಾಗೂ ದಾಸರಪದ; ರಾತ್ರಿ 8.30 ಗಂಟೆಗೆ ಬೆಂಗಳೂರಿನ ಆಲ್ ಓಕೆ ತಂಡದಿಂದ ಸಂಗೀತ ಸಂಜೆ ಕಾರ್ಯಕ್ರಮಗಳು ನಡೆಯಲಿವೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಡಾ.ಬಿಮೋಲ್ ವಿರುದ್ಧ ಬಿಜೆಪಿ ಹೋರಾಟ
ಎನ್‌ಡಿಎ ಅಭ್ಯರ್ಥಿ ರಂಗನಾಥ್ ಬೆಂಬಲಿಸಲು ಇ.ಕೃಷ್ಣಪ್ಪ ಕರೆ