ಕನ್ನಡಪ್ರಭ ವಾರ್ತೆ ಹಾಸನ
ಈ ಸಾಧನೆಯ ಗೌರವಾರ್ಥವಾಗಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ, ಶಾಲಾ ಶಿಕ್ಷಣ ಇಲಾಖೆಯ ವಿಭಾಗೀಯ ಕಾರ್ಯದರ್ಶಿ ಕೆ.ಎಸ್. ಪ್ರಕಾಶ್ ಅವರು ಜಮೀಲಾ ಅವರಿಗೆ ಪ್ರಮಾಣಪತ್ರವನ್ನು ವಿತರಿಸಿ ಅಭಿನಂದಿಸಿದರು. ಕಾರ್ಯಕ್ರಮದಲ್ಲಿ ಜಮೀಲಾ ಅವರ ಚಿತ್ರಕಲಾ ಗುರು ಎಚ್. ಎಂ. ರಮೇಶ್ ಉಪಸ್ಥಿತರಿದ್ದು, ವಿದ್ಯಾರ್ಥಿನಿಯ ಪರಿಶ್ರಮ, ಶಿಸ್ತಿನ ಕಲಿಕೆ ಹಾಗೂ ಕಲಾತ್ಮಕ ನೈಪುಣ್ಯವನ್ನು ಶ್ಲಾಘಿಸಿದರು.
ಶಿಕ್ಷಣ ಇಲಾಖೆಯ ಅಧಿಕಾರಿಗಳು ಜಮೀಲಾ ಅವರ ಭವಿಷ್ಯಕ್ಕೆ ಶುಭ ಹಾರೈಸುತ್ತಾ, ರಾಜ್ಯಮಟ್ಟದಲ್ಲಿಯೂ ಇದೇ ರೀತಿಯ ಸಾಧನೆ ನಿರೀಕ್ಷಿಸುವುದಾಗಿ ತಿಳಿಸಿದರು. ಶಾಲಾ ಶಿಕ್ಷಕರು ಹಾಗೂ ಸಹಪಾಠಿಗಳು ಜಮೀಲಾ ಅವರಿಗೆ ಅಭಿನಂದನೆಗಳನ್ನು ತಿಳಿಸಿ, ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆ ಆಗಿರುವುದಕ್ಕೆ ಪ್ರೋತ್ಸಾಹ ನೀಡಿದರು.