ಶ್ರೀನಗರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜಮ್ಮು ಕಾಶ್ಮೀರದ ಸರ್ಕಾರಿ ನೌಕರರು ಉದ್ದೇಶಿಸಿರುವ ಪ್ರತಿಭಟನೆಗೆ ಸರ್ಕಾರ ನಿರ್ಬಂಧ ಹೇರಿದೆ. ಸರ್ಕಾರಿ ನೌಕರರ ಒಕ್ಕೂಟದ ಜೊತೆಗೆ ನಡೆಸಿದ ಸಂಧಾನ ಮಾತುಕತೆ ಯಶಸ್ವಿಯಾಗಿ ನಡೆದಿದ್ದು, ಬೇಡಿಕೆಗಳನ್ನು ಆದ್ಯತೆಯ ಮೇರೆಗೆ ಈಡೇರಿಸುವುದಾಗಿ ಭರವಸೆ ನೀಡಲಾಗಿದೆ. ಆದಾಗ್ಯೂ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಸರ್ಕಾರಿ ನೌಕರರ ವಿರುದ್ಧ ಕಾನೂನು ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದೆ. ಈ ನಡುವೆ ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಖ್ ಅಬ್ದುಲ್ಲಾ ಅವರು ‘ಪ್ರತಿಭಟನೆಯನ್ನು ಹತ್ತಿಕ್ಕುವ ಮೂಲಕ ಜಮ್ಮು ಆಡಳಿತ ಸಾಂವಿಧಾನಿಕ ಹಕ್ಕನ್ನು ನಿಗ್ರಹಿಸುತ್ತಿದೆ ಎಂದು ಕಿಡಿಕಾರಿದ್ದಾರೆ.