ವಿಶ್ವದಲ್ಲಿ ತಲೆ ಎತ್ತಿ ನಿಂತ ಸ್ವಾಭಿಮಾನದ ದಿನ: ಕೆ.ಜೆ. ಜಾರ್ಜ್‌

KannadaprabhaNewsNetwork |  
Published : Jan 27, 2024, 01:17 AM IST
ಚಿಕ್ಕಮಗಳೂರಿನ ಜಿಲ್ಲಾ ಆಟದ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್‌ ಅವರು ಧ್ವಜಾರೋಹಣ ನೆರವೇರಿಸಿ ಗೌರವ ಸಲ್ಲಿಸಿದರು. ಡಿಸಿ ಮೀನಾ ನಾಗರಾಜ್‌, ಎಸ್ಪಿ ಡಾ. ವಿಕ್ರಂ ಅಮಟೆ ಇದ್ದರು. | Kannada Prabha

ಸಾರಾಂಶ

ನಮ್ಮ ಭಾರತ ಗಣರಾಜ್ಯವಾಗಿ ‘ರೂಪಾಂತರ’ಗೊಂಡು ವಿಶ್ವದ ಭೂಪಟದಲ್ಲಿ ಭರತ ಭೂಮಿಯಾಗಿ ತಲೆ ಎತ್ತಿ ನಿಂತ ಸ್ವಾಭಿಮಾನದ ದಿನ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್‌ ಹೇಳಿದರು.

ಗಣರಾಜ್ಯೋತ್ಸವ ಕೇವಲ ಸಂಭ್ರಮದ ದಿನ ಮಾತ್ರವಲ್ಲ । ಪ್ರತಿ ಭಾರತೀಯನ ಪಾಲಿಗೂ ಆತ್ಮಾವಲೋಕನದ ದಿನ, ಜಿಲ್ಲಾ ಆಟದ ಮೈದಾನದಲ್ಲಿ ಗಣ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ,

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುನಮ್ಮ ಭಾರತ ಗಣರಾಜ್ಯವಾಗಿ ‘ರೂಪಾಂತರ’ಗೊಂಡು ವಿಶ್ವದ ಭೂಪಟದಲ್ಲಿ ಭರತ ಭೂಮಿಯಾಗಿ ತಲೆ ಎತ್ತಿ ನಿಂತ ಸ್ವಾಭಿಮಾನದ ದಿನ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್‌ ಹೇಳಿದರು.ಜಿಲ್ಲಾ ಆಟದ ಮೈದಾನದಲ್ಲಿ ಶುಕ್ರವಾರ ನಡೆದ ಗಣ ರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಭಾರತದ ಪ್ರಜೆಗಳಿಗೆ ಶಾಸನಗಳನ್ನು ರೂಪಿಸುವ ಶಾಸಕಾಂಗ, ಪ್ರಜೆಗಳಿಗೆ ನ್ಯಾಯ ನೀಡುವ ನ್ಯಾಯಾಂಗ, ಪ್ರಜೆಗಳಿಗಾಗಿ ಕರ್ತವ್ಯ ನಿರ್ವಹಿಸುವ ಕಾರ್ಯಾಂಗಗಳಿಗೆ ನೀತಿ ನಿಯಮಗಳನ್ನು ಲಿಖಿತ ರೂಪದಲ್ಲಿ ಒಪ್ಪಿ ಭಾರತೀಯ ಪ್ರಜೆಗಳು ತಮಗೆ ತಾವೇ ಪ್ರಭುಗಳು ಎಂದು ಸಾರಿದ ಪವಿತ್ರ ದಿನ ಇದಾಗಿದೆ ಎಂದರು.ನಮ್ಮ ಭಾರತ ಸ್ವಾತಂತ್ರ್ಯ ಭಾರತ ಎಂದು ಹೆಮ್ಮೆ ಪಡಲು, ಗಣರಾಜ್ಯವಾಗಿ ರೂಪುಗೊಳ್ಳಲು ಆಗಿರುವ ತ್ಯಾಗ, ಬಲಿದಾನ ಗಳಿಗೆ ಲೆಕ್ಕವೇ ಇಲ್ಲ. ನಮ್ಮ ಪೂರ್ವಜರು ನಮ್ಮ ಭವಿಷ್ಯಕ್ಕಾಗಿ ತಮ್ಮ ರಕ್ತ, ಬೆವರು ಹರಿಸಿ ಸ್ಥಾಪಿಸಿದ ಭಾರತದ ಪವಿತ್ರ ನೆಲದಲ್ಲಿ ಭಾರತೀಯ ಪ್ರಜೆಗಳಾದ ನಾವು ಸ್ವಾತಂತ್ರ್ಯಅನುಭವಿಸುತ್ತಿದ್ದೇವೆ ಎಂದು ಹೇಳಿದರು.ಡಾ.ಬಿ.ಆರ್. ಅಂಬೇಡ್ಕರ್ ನೇತೃತ್ವದ ಸಮಿತಿಯ ಅತಿದೊಡ್ಡ ಸಾಧನೆ. ಹಲವು ದೇಶಗಳ ಸಂವಿಧಾನವನ್ನು ಅಧ್ಯಯನ ಮಾಡಿ ಅವುಗಳಲ್ಲಿರುವ ಉತ್ತಮ ಅಂಶಗಳನ್ನು ನಮ್ಮ ದೇಶದ ಸಂವಿಧಾನದಲ್ಲಿ ಅಳವಡಿಸಿದ್ದಾರೆ. ಈ ಸಂವಿಧಾನ ಭಾರತವನ್ನು ಒಂದು ಪ್ರಬಲ ಪ್ರಜಾಪ್ರಭುತ್ವ ರಾಷ್ಟ್ರವಾಗಿಸಲು ಮತ್ತು ಎಲ್ಲಾ ನಾಗರಿಕರಿಗೆ ಸಮಾನ ಹಕ್ಕುಗಳು ಮತ್ತು ಅವಕಾಶ ಒದಗಿಸಲು ಸಹಾಯ ಮಾಡಿದೆ ಎಂದರು.ಗಣರಾಜ್ಯೋತ್ಸವ ಸಂಭ್ರಮದ ದಿನ ಮಾತ್ರವಲ್ಲ, ಪ್ರತಿ ಭಾರತೀಯನ ಪಾಲಿಗೂ ಆತ್ಮಾವಲೋಕನದ ದಿನ ಹಾಗೂ ಸಂಕಲ್ಪದ ಸುದಿನವೂ ಹೌದು. ಭೂತಕಾಲದ ಪರಂಪರೆ, ವರ್ತಮಾನದ ಸಮಸ್ಯೆ- ಸಂಕಟ ಮತ್ತು ಭವಿಷ್ಯತ್ತಿನ ಬಗ್ಗೆ ಯೋಚಿಸಬೇಕಾಗಿದೆ ಎಂದ ಅವರು, ಪರಂಪರೆ ಹೆಜ್ಜೆಗಳನ್ನು ಅನುಸರಿಸಿ ನಡೆಯುವುದು ನಾಗರಿಕರ ಆದ್ಯ ಕರ್ತವ್ಯ. ದೇಶದ ಘನತೆ, ಸಾರ್ವಭೌಮತೆ ಎತ್ತಿ ಹಿಡಿಯುವುದು ಸರ್ವರ ಹೊಣೆಗಾರಿಕೆ. ಅದನ್ನು ನಾವು ಮೊದಲು ಮನಗಾಣ ಬೇಕು. ನಮ್ಮೆಲ್ಲರ ಮನೆ ಮನಗಳಲ್ಲಿ ದೇಶಭಕ್ತಿ ನಂದಾದೀಪ ಹಚ್ಚುವ ಕೆಲಸ ಈಗಲಾದರೂ ತ್ವರಿತವಾಗಿ ಆಗಬೇಕಿದೆ ಎಂದು ಹೇಳಿದರು. ಭಾರತದ ವೈಶಿಷ್ಟ್ಯಗಳು ನೂರಾರು. ಶಾಂತಿ ನಮ್ಮ ಮಂತ್ರ, ಸಹನೆ ನಮ್ಮ ಶಕ್ತಿ, ಸೌಹಾರ್ದತೆ ನಮ್ಮ ಹುಟ್ಟು ಗುಣ, ಕೂಡಿ ಬಾಳುವುದು ನಮ್ಮ ಪರಂಪರೆ, ಅನೇಕತೆಯಲ್ಲಿ ಏಕತೆ ನಮ್ಮ ವಿಶೇಷ, ಸಮನ್ವಯತೆ ನಮ್ಮ ಸಹಜತೆ, ಸರ್ವ ಧರ್ಮ ಸಮಭಾವ ನಮ್ಮ ಶ್ರೇಷ್ಠತೆ, ಎಲ್ಲರೊಳಗೊಂದಾಗುವುದು ನಮ್ಮತನ, ಸಕಲ ಜೀವಾತ್ಮಗಳನ್ನು ಪ್ರೀತಿಸುವುದು ನಮ್ಮ ಔದಾರ್ಯ ಎಂದರು.ಕಾರ್ಯಕ್ರಮದಲ್ಲಿ ಶಾಸಕರಾದ ಟಿ.ಡಿ. ರಾಜೇಗೌಡ, ಎಚ್‌.ಡಿ. ತಮ್ಮಯ್ಯ, ನಗರಸಭಾಧ್ಯಕ್ಷ ವರಸಿದ್ದಿ ವೇಣುಗೋಪಾಲ್‌, ಜಿಲ್ಲಾಧಿಕಾರಿ ಮೀನಾ ನಾಗರಾಜ್‌, ಜಿಲ್ಲಾ ರಕ್ಷಣಾಧಿಕಾರಿ ಡಾ. ವಿಕ್ರಂ ಅಮಟೆ, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಗೋಪಾಲಕೃಷ್ಣ ಉಪಸ್ಥಿತರಿದ್ದರು. 26 ಕೆಸಿಕೆಎಂ 1ಚಿಕ್ಕಮಗಳೂರಿನ ಜಿಲ್ಲಾ ಆಟದ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್‌ ಧ್ವಜಾರೋಹಣ ನೆರವೇರಿಸಿ ಗೌರವ ಸಲ್ಲಿಸಿದರು. ಡಿಸಿ ಮೀನಾ ನಾಗರಾಜ್‌, ಎಸ್ಪಿ ಡಾ. ವಿಕ್ರಂ ಅಮಟೆ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಗು ಸಾವಿನ ಶಾಕ್‌ನಿಂದ ತಾಯಿಯೂ ಆತ್ಮ*ತ್ಯೆ
ಗ್ಯಾಸ್‌ಗಾಗಿ ಆಟೋ ಚಾಲಕರ ಯುದ್ಧ! - ಬಂಕ್‌ಗಳ ಮುಂದೆ ರಾತ್ರಿ ಇಡೀ ಜಾಗರಣೆ