ಬಿಜೆಪಿ- ಜೆಡಿಎಸ್‌ ಹೊಂದಾಣಿಕೆ ಅನ್ನ ಹಳಸಿತ್ತು-ನಾಯಿ ಹಸಿದಿತ್ತು ಎನ್ನುವಂತಾಗಿದೆ- ಸಿಎಂ ವ್ಯಂಗ್ಯ

KannadaprabhaNewsNetwork |  
Published : Apr 14, 2024, 01:47 AM IST
70 | Kannada Prabha

ಸಾರಾಂಶ

ಪ್ರಧಾನಿ ಮೋದಿಯವರೇ ಒಂದಲ್ಲಾ ಎರಡಲ್ಲಾ ಹತ್ತತ್ತು ವರ್ಷ ಪ್ರಧಾನಿ ಆಗಿದ್ರೂ ಒಂದೇ ಒಂದು ಭರವಸೆಯನ್ನೂ ಈಡೇರಿಸಲಿಲ್ವಲ್ಲಾ ಸ್ವಾಮಿ ಯಾಕೆ? ಇದು ನ್ಯಾಯನಾ ಸ್ವಾಮಿ? ನಿಮ್ಮನ್ನು ನಂಬಿದವರಿಗೆ ದ್ರೋಹ ಬಗೆದದ್ದು ಸರಿನಾ ಸ್ವಾಮಿ

ಕನ್ನಡಪ್ರಭ ವಾರ್ತೆ ಪಿರಿಯಾಪಟ್ಟಣ

ಬಿಜೆಪಿ ಮತ್ತು ಜೆಡಿಎಸ್‌ ಹೊಂದಾಣಿಕೆ ಅನ್ನ ಹಳಸಿತ್ತು- ನಾಯಿ ಹಸಿದಿತ್ತು ಎನ್ನುವಂತಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ

ಪಿರಿಯಾಪಟ್ಟಣದಲ್ಲಿ ನಡೆದ ಜನಧ್ವನಿ-2 ಸಮಾವೇಶದಲ್ಲಿ ಮಾತನಾಡಿದರು. ಸೆಕ್ಯುಲರ್ ಹೆಸರಿಟ್ಟುಕೊಂಡು ಬಿಜೆಪಿ ಜತೆ ಬೆರೆತಿರುವ ಜೆಡಿಎಸ್‌ ಗೆ ಮಾನ ಮರ್ಯಾದೆ ಇದೆಯಾ? ಕೇವಲ ಕುಟುಂಬದ ಹಿತಾಸಕ್ತಿಗಾಗಿ ಯಾರ ಜತೆಗೆ ಬೇಕಾದರೂ ಹೋಗಲು ಜೆಡಿಎಸ್ ರೆಡಿ ಆಗಿ ಬಿಡ್ತದೆ. ಯಾವುದೇ ಸಿದ್ಧಾಂತ ಇಲ್ಲ, ಜನಪರವಾದ ಬದ್ಧತೆ ಇಲ್ಲ ಎಂದು ಅವರು ಟೀಕಿಸಿದರು.

ಪ್ರಧಾನಿ ಮೋದಿಯವರೇ ಒಂದಲ್ಲಾ ಎರಡಲ್ಲಾ ಹತ್ತತ್ತು ವರ್ಷ ಪ್ರಧಾನಿ ಆಗಿದ್ರೂ ಒಂದೇ ಒಂದು ಭರವಸೆಯನ್ನೂ ಈಡೇರಿಸಲಿಲ್ವಲ್ಲಾ ಸ್ವಾಮಿ ಯಾಕೆ? ಇದು ನ್ಯಾಯನಾ ಸ್ವಾಮಿ? ನಿಮ್ಮನ್ನು ನಂಬಿದವರಿಗೆ ದ್ರೋಹ ಬಗೆದದ್ದು ಸರಿನಾ ಸ್ವಾಮಿ ಎಂದು ತಮ್ಮದೇ ಶೈಲಿಯಲ್ಲಿ ಪ್ರಶ್ನಿಸಿದರು. ನೀವು ಕೊಟ್ಟ ಮಾತನ್ನಂತೂ ಉಳಿಸಿಕೊಳ್ಳಲಿಲ್ಲ. ಹೋಗ್ಲಿ, ಈ ದೇಶದ ರೈತರು, ಕಾರ್ಮಿಕರು, ಮಹಿಳೆಯರು, ಶ್ರಮಿಕರು, ಸಣ್ಣ-ಮಧ್ಯಮ ಉದ್ಯಮಿಗಳಿಗೆ, ಯುವ

ಜನರ ಭವಿಷ್ಯಕ್ಕೆ ಒಂದೇ ಒಂದು, ಬರೀ ಒಂದೇ ಒಂದು ಕಾರ್ಯಕ್ರಮವನ್ನೂ ಸಮರ್ಪಕವಾಗಿ ಜಾರಿ ಮಾಡಲಿಲ್ವಲ್ಲಾ ಈ ಚಂದಕ್ಕೆ ಹತ್ತತ್ತು ವರ್ಷ ಪ್ರಧಾನಿಯಾಗಬೇಕಿತ್ತಾ ಮೋದಿಯವರೇ? ಪ್ರಧಾನಿಯಾಗಿ ಸುಳ್ ಹೇಳ್ಕಂಡು ತಿರುಗಿದ್ರೆ ಭಾರತೀಯರಿಗೆ ನಂಬಿಸಿ ಮೋಸ ಮಾಡಿದಂಗಲ್ವಾ ಸ್ವಾಮಿ ಎಂದು ಪ್ರಶ್ನಿಸಿದರು. ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರಾದ ಕೆ. ವೆಂಕಟೇಶ್, ಸತೀಶ್ ಜಾರಕಿಹೊಳಿ, ಕೆಪಿಸಿಸಿ ಕಾರ್ಯಾಧ್ಯಕ್ಷ ತನ್ವೀರ್ ಸೇಠ್, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಡಾ.ಬಿ.ಜೆ. ವಿಜಯ್ ಕುಮಾರ್ ಮೊದಲಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೇಲಿ ಕನ್ನಡಕ್ಕೆ ಅನ್ಯಾಯ: ಪರೀಕ್ಷೆ ಬಹಿಷ್ಕಾರ ನಿರ್ಧಾರ?
ಭತ್ತದ ನಾಡಿನಿಂದ ಅಕ್ಕಿಯ ರಫ್ತು ಬಂದ್