ಉಡುಪಿ: ಉಡುಪಿ ತಾಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಆಶ್ರಯದಲ್ಲಿ ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ನಿತ್ಯಾನಂದ ವಿ. ಗಾಂವಕರ್, ವಿದ್ಯಾರ್ಥಿಗಳಿಗೆ ಮಾದಕ ವ್ಯಸನ ವಿರೋಧಿ ಮತ್ತು ಸ್ವಾಸ್ಯ ಸಂಕಲ್ಪದ ಪ್ರತಿಜ್ಞಾವಿಧಿ ಬೋಧಿಸಿದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಕೀರ್ತಿ ಎಸ್. ಇವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ಹೊಸ ತಲೆಮಾರಿನ ಯುವಕ ಯುವತಿಯರು ಹೆಚ್ಚಾಗಿ ಮಾದಕ ವ್ಯಸನಗಳಿಗೆ ಬಲಿಯಾಗುತ್ತಿದ್ದು, ಸಮಾಜದಿಂದ ವಿಮುಖವಾಗಿ ಸಾಗುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದರು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಒಕ್ಕೂಟದ ವಲಯ್ಯಾಧ್ಯಕ್ಷ ಶ್ರೀಕೃಷ್ಣ ಉಪಸ್ಥಿತರಿದ್ದರು. ಕಾಲೇಜಿನ ಮಾದಕ ದ್ರವ್ಯ ತಡೆ ಘಟಕದ ನೋಡಲ್ ಅಧಿಕಾರಿ ಡಾ. ರೋಷನ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ತಾಲೂಕಿನ ಜ್ಞಾನವಿಕಾಸ ಸಮನ್ವಯಾಧಿಕಾರಿ ಪೂರ್ಣಿಮಾ ವಂದಿಸಿದರು. ಕಾರ್ಯಕ್ರಮದಲ್ಲಿ ಕೆಳಾರ್ಕಲ್ ಬೆಟ್ಟು ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಉಮಾ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.