ಮದ್ದೂರು: ತಾಲೂಕು ದಂಡಾಧಿಕಾರಿಗಳ ಕಚೇರಿಯ ಶಾಸಕರ ಕಚೇರಿಯಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಯಿತು. ಸಾರ್ವಜನಿಕರಿಗೆ ಭೇಟಿ ಅವಕಾಶ ನೀಡಲಾಗಿದೆ. ಅವರ ಕುಂದು-ಕೊರತೆಗಳು ಮತ್ತು ವಿವಿಧ ಸಮಸ್ಯೆಗಳನ್ನು ಆಲಿಸಿ ಅಹವಾಲು ಸ್ವೀಕರಿಸಲಾಯಿತು.
ಸಾರ್ವಜನಿಕರು ಹಾಗೂ ರೈತರಿಂದ ಬಂದ ಕೆಲ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಲಾಯಿತು. ಉಳಿದ ಸಮಸ್ಯೆಗಳನ್ನು ತುರ್ತಾಗಿ ಬಗೆಹರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.ಶಾಸಕ ಕೆ.ಎಂ.ಉದಯ್ ಅವರು ಮಾತನಾಡಿ, ಅಧಿಕಾರಿಗಳು ಸಮಸ್ಯೆ ಪರಿಹಾರದಲ್ಲಿ ಕಾಲಹರಣ ಮಾಡದೇ ತಕ್ಷಣದ ಸ್ಪಂದನೆ ನೀಡಬೇಕು ಎಂದು ಸೂಚಿಸಿದರು.
ಕಾರ್ಯಕ್ರಮದಲ್ಲಿ ತಾಲೂಕು ದಂಡಾಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಕಂದಾಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.ಸಕಾಲಕ್ಕೆ ಗ್ರಾಪಂ ಸದಸ್ಯ ಸ್ಥಾನಗಳ ಚುನಾವಣೆ ನಡೆಸಬೇಕು: ಗ್ರಾಪಂ ಒಕ್ಕೂಟ ಆಗ್ರಹಕನ್ನಡಪ್ರಭ ವಾರ್ತೆ ಮಂಡ್ಯ
ರಾಜ್ಯದಲ್ಲಿ ಗ್ರಾಪಂ ಸದಸ್ಯರ ಅವಧಿ ಮುಂದಿನ ವರ್ಷ ಫೆಬ್ರವರಿಗೆ ಮುಗಿಯಲಿದೆ. ಸರ್ಕಾರ ಸಕಾಲಕ್ಕೆ ಗ್ರಾಪಂ ಸದಸ್ಯ ಸ್ಥಾನಗಳ ಚುನಾವಣೆ ನಡೆಸಲು ಮುಂದಾಗಬೇಕು ಎಂದು ಕರ್ನಾಟಕ ಗ್ರಾಪಂ ಸದಸ್ಯರ ಮಹಾ ಒಕ್ಕೂಟದ ರಾಜ್ಯ ಸಂಚಾಲಕ ಉಪ್ಪಾರಕನಹಳ್ಳಿ ನಾಗೇಶ್ ಒತ್ತಾಯಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಪಂ ಚುನಾವಣೆಯನ್ನು ಸರ್ಕಾರವೇ ನಡೆಸಬೇಕು. ಈಗಾಗಲೇ ಚುನಾವಣೆ ಪ್ರಕ್ರಿಯೆ ಪ್ರಾರಂಭವಾಗಬೇಕಿತ್ತು. ಡಿಸೆಂಬರ್ ಮಾಹೆಯೊಳಗೆ ಚುನಾವಣೆ ನಡೆಯಬೇಕಾಗಿತ್ತು ಎಂದರು.
ಸರ್ಕಾರದಿಂದ ಮೀಸಲಾತಿ ಪ್ರಕಟವಾಗಿಲ್ಲ. ಈ ಸಂಬಂಧ ಹಲವು ಗೊಂದಲಗಳು ಸೃಷ್ಠಿಯಾಗಿದೆ. ಆದ್ದರಿಂದ ಒಕ್ಕೂಟದಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪತ್ರಿಕಾಗೋಷ್ಠಿ ಮೂಲಕ ಒತ್ತಾಯ ಮಾಡಲಾಗುತ್ತಿದೆ ಎಂದರು.ಚುನಾವಣಾ ಆಯೋಗವು ಸರ್ಕಾರ ಇನ್ನೂ ಮೀಸಲಾತಿ ಪ್ರಕಟ ಮಾಡಿಲ್ಲ ಎಂದು ಸುದ್ದಿಗೋಷ್ಠಿ ಮೂಲಕ ತಿಳಿಸಿದೆ. ಡಿಸೆಂಬರ್‌ನಲ್ಲಿ ಚುನಾವಣೆ ನಡೆಸುವುದೇ ಆದರೆ, 45 ದಿನಗಳ ಹಿಂದೆಯೇ ಮೀಸಲಾತಿ ಪ್ರಕಟಿಸಬೇಕಿತ್ತು. ಕ್ಷೇತ್ರಗಳ ವಿಂಗಡನೆ ಮಾಡುವುದು. ಪಕ್ಷದ ಮೂಲಕ ಚುನಾವಣೆ ನಡೆಸುವ ಸಂಬಂಧ ಚರ್ಚೆ ಪ್ರಾರಂಭವಾಗಿದ್ದು. ನಿಗದಿತ ಸಮಯಕ್ಕೆ ಚುನಾವಣೆ ನಡೆಯದಿರುವುದು ಆತಂಕ ಮೂಡಿಸಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ತಾಪಂ, ಜಿಪಂ ಚುನಾವಣೆಯೂ ನಿಗದಿ ಸಮಯಕ್ಕೆ ನಡೆದಂತಾಗಿದೆ. ಆದ ಕಾರಣ ನ್ಯಾಯಾಲಯದ ಮೂಲಕ ಹೋರಾಟ ನಡೆಸುವ ಘಟನೆಯು ಸಂಭವಿಸಿದೆ. ಗ್ರಾಪಂ ಚುನಾವಣೆ ನಿಗದಿತ ಸಮಯಕ್ಕೆ ನಡೆಸದೇ ಹೋದಲ್ಲಿ ಗ್ರಾಪಂ ಸದಸ್ಯರು ಹೋರಾಟದ ಹಾದಿ ಹಿಡಿಯಲಿದ್ದಾರೆ. ಅಗತ್ಯ ಬಿದ್ದಲ್ಲಿ ನ್ಯಾಯಾಲಯದಲ್ಲಿ ಹೋರಾಟ ಮಾಡುವ ಜೊತೆಗೆ, ಜನಾಭಿಪ್ರಾಯ ಸಂಗ್ರಹವನ್ನು ಮಾಡಲಾಗುವುದು ಎಂದು ಎಚ್ಚರಿಸಿದರು.ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಜಿಧ್ಯಕ್ಷ ಬಿ.ಎಸ್.ಪ್ರದೀಪ್, ಗೌರವಾಧ್ಯಕ್ಷ ಬಿ.ಎಂ.ಮಹೇಶ್, ಪ್ರಧಾನ ಕಾರ್ಯದರ್ಶಿ ಕೆಂಪೇಗೌಡ, ಉಪಾಧ್ಯಕ್ಷೆ ಸುವರ್ಣಾವತಿ, ಮಾಧ್ಯಮ ಸಲಹೆಗಾರ ಎಂ.ಚಾಮರಾಜು ಇದ್ದರು.