ಜನತಾ ದರ್ಶನ ಜನಪ್ರತಿನಿಧಿಗಳ ನೇರ ಸಂಪರ್ಕಕ್ಕೆ ರಹದಾರಿ

KannadaprabhaNewsNetwork |  
Published : Jun 17, 2026, 02:30 AM IST
ಹಾನಗಲ್ ನಗರದಲ್ಲಿ ಶಾಸಕ ಶ್ರೀನಿವಾಸ ಮಾನೆ ಜನತಾದರ್ಶನ ನಡೆಸಿದರು. | Kannada Prabha

ಸಾರಾಂಶ

ಜನತಾ ದರ್ಶನವು ಜನಪ್ರತಿನಿಧಿ ಮತ್ತು ಸಾರ್ವಜನಿಕರ ನಡುವಿನ ನೇರ ಸಂಪರ್ಕಕ್ಕೆ ಪರಿಣಾಮಕಾರಿ ವೇದಿಕೆಯಾಗಿದ್ದು, ಪ್ರತಿ ವಾರ ಜನತಾದರ್ಶನ ನಡೆಸಿ ಸಮಸ್ಯೆಗಳಿಗೆ ಸ್ಪಂದಿಸಿ ತ್ವರಿತ ಪರಿಹಾರ ಒದಗಿಸಲು ಗಮನ ನೀಡಲಾಗಿದೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.

ಹಾನಗಲ್ಲ: ಜನತಾ ದರ್ಶನವು ಜನಪ್ರತಿನಿಧಿ ಮತ್ತು ಸಾರ್ವಜನಿಕರ ನಡುವಿನ ನೇರ ಸಂಪರ್ಕಕ್ಕೆ ಪರಿಣಾಮಕಾರಿ ವೇದಿಕೆಯಾಗಿದ್ದು, ಪ್ರತಿ ವಾರ ಜನತಾದರ್ಶನ ನಡೆಸಿ ಸಮಸ್ಯೆಗಳಿಗೆ ಸ್ಪಂದಿಸಿ ತ್ವರಿತ ಪರಿಹಾರ ಒದಗಿಸಲು ಗಮನ ನೀಡಲಾಗಿದೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.

ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಸ್ಪಂದಿಸುವ ಉದ್ದೇಶದಿಂದ ಶಾಸಕ ಶ್ರೀನಿವಾಸ ಮಾನೆ ಅವರು ಇಲ್ಲಿ ಸೋಮವಾರ ಆಯೋಜಿಸಿದ್ದ ಜನತಾದರ್ಶನ ಕಾರ್ಯಕ್ರಮದ ನಂತರ ಮಾತನಾಡಿದರು. ಕ್ಷೇತ್ರದ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ನೂರಾರು ಜನರು ತಮ್ಮ ಅಹವಾಲುಗಳನ್ನು ಶಾಸಕರ ಮುಂದಿಟ್ಟರು. ಕುಡಿಯುವ ನೀರಿನ ಸಮಸ್ಯೆ, ರಸ್ತೆ ಅಭಿವೃದ್ಧಿ, ಚರಂಡಿ ವ್ಯವಸ್ಥೆ, ವಿದ್ಯುತ್ ಸಮಸ್ಯೆ, ವಸತಿ ಯೋಜನೆ, ಪಿಂಚಣಿ ಸೌಲಭ್ಯ ಸೇರಿದಂತೆ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರು ಮನವಿ ಸಲ್ಲಿಸಿದರು. ಪ್ರತಿಯೊಂದು ಅಹವಾಲನ್ನು ಗಮನವಿಟ್ಟು ಆಲಿಸಿದ ಶಾಸಕ ಮಾನೆ, ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ತ್ವರಿತ ಕ್ರಮ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದು ನನ್ನ ಮೊದಲ ಆದ್ಯತೆ. ಜನರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ಬರಬಾರದು. ಜನತಾ ದರ್ಶನದ ಮೂಲಕ ಜನರ ಮನೆ ಬಾಗಿಲಿಗೆ ಆಡಳಿತ ತಲುಪಿಸುವ ಕೆಲಸ ಪ್ರತಿ ವಾರವೂ ಮಾಡಲಾಗುತ್ತಿದೆ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬ್ಲಡ್ ಡೋನರ್ಸ್ ಕಾರವಾರ ತಂಡದ ದಶಮಾನೋತ್ಸವ
ವಿದ್ಯಾರ್ಥಿ ಸಾವು: ಸಮರ್ಪಕ ತನಿಖೆಗೆ ಆಗ್ರಹಿಸಿ 18ರಂದು ಪ್ರತಿಭಟನೆ