ಕನ್ನಡಪ್ರಭ ವಾರ್ತೆ ಸಿಂಧನೂರು
ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದ, ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಕಾಯ್ದೆ ಜಾರಿ ಮಾಡಬೇಕು. ರಾಜ್ಯದಲ್ಲಿ ಜಾರಿಗೊಳಿಸಿರುವ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ಖಾಸಗೀಕರಣ ಹಾಗೂ ಕೃಷಿ ಪಂಪ್‌ಸೆಟ್‌ಗೆ ಉಚಿತ ವಿದ್ಯುತ್ ರದ್ದುಪಡಿಸುವ ವಿದ್ಯುತ್ ತಿದ್ದುಪಡಿ ಮಸೂದೆ ಹಿಂಪಡೆಯಬೇಕು. ಕೃಷಿ ಸಬ್ಸಿಡಿ ಕಡಿತಗೊಳಿಸಿರುವುದನ್ನು ವಾಪಸ್ ಪಡೆಯಬೇಕು. ಸಾಲ ನೀಡಿದ ಬ್ಯಾಂಕ್‌ಗಳು ರೈತರ ಆಸ್ತಿಗಳನ್ನು ಜಪ್ತಿ ಮಾಡುವುದನ್ನು ತಕ್ಷಣ ನಿಲ್ಲಿಸಬೇಕು. ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು. ದೆಹಲಿ ಹೋರಾಟದಲ್ಲಿ ರೈತರ ಮೇಲೆ ಹಾಕಿರುವ ಸುಳ್ಳು ಕೇಸ್ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ ಜ.26 ರಂದು ಟ್ರ್ಯಾಕ್ಟರ್ ಪರೇಡ್ ಚಳವಳಿ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ರೈತ ಸಂಘದ ಸಂಚಾಲಕ ಅಮೀನ್ ಪಾಷಾ ದಿದ್ದಿಗಿ ಮುಖಂಡರಾದ ಬಸವಂತರಾಯಗೌಡ ಕಲ್ಲೂರು, ಡಿ.ಎಚ್.ಕಂಬಳಿ, ರಮೇಶ ಪಾಟೀಲ್ ಬೇರಿಗಿ, ಚಿಟ್ಟಿಬಾಬು ಬೂದಿವಾಳ ಕ್ಯಾಂಪ್, ರಾಮಯ್ಯ ಜವಳಗೇರಾ, ಎಸ್.ದೇವೇಂದ್ರಗೌಡ, ನಾಗರಾಜ್ ಪೂಜಾರ್ ಇದ್ದರು.