ಜನೌಷಧಿ ಕೇಂದ್ರ ಸ್ಥಗಿತ: ಬಿಜೆಪಿಯಿಂದ ಪ್ರತಿಭಟನೆ

KannadaprabhaNewsNetwork |  
Published : May 31, 2025, 01:35 AM IST
ಕಾರಟಗಿಯಲ್ಲಿ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಕೇಂದ್ರ ಸ್ಥಗಿತಗೊಳಿಸಿದ ನಿರ್ಧಾರ ಖಂಡಿಸಿ ಪ್ರತಿಭಟನೆ ನಡೆಸಿದರು. ‌ | Kannada Prabha

ಸಾರಾಂಶ

ಜನೌಷಧಿ ಕೇಂದ್ರ ಸ್ಥಗಿತದಿಂದ ಸಾರ್ವಜನಿಕರು ಸಮಸ್ಯೆ ಅನುಭವಿಸಿವಂತಾಗಿದೆ

ಕಾರಟಗಿ: ಸರ್ಕಾರಿ ಆಸ್ಪತ್ರೆಗಳಲ್ಲಿನ ಜನೌಷಧಿ ಕೇಂದ್ರಗಳನ್ನು ರಾಜ್ಯ ಸರ್ಕಾರ ಸ್ಥಗಿತಗೊಳಿಸಿದ ನಿರ್ಧಾರ ಖಂಡಿಸಿ ಇಲ್ಲಿನ ಸಮುದಾಯ ಆಸ್ಪತ್ರೆಯ ಮುಂದೆ ಬಿಜೆಪಿ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.

ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರು ಪೋಸ್ಟರ್‌ ಹಿಡಿದು ಪ್ರತಿಭಟನೆ ನಡೆಸಿದರು.

ಜನೌಷಧಿ ಕೇಂದ್ರ ಸ್ಥಗಿತದಿಂದ ಸಾರ್ವಜನಿಕರು ಸಮಸ್ಯೆ ಅನುಭವಿಸಿವಂತಾಗಿದೆ. ತಾಲೂಕಾಸ್ಪತ್ರೆಗಳಲ್ಲಿ ಎಲ್ಲ ಬಗೆಯ ಔಷಧಗಳು ದೊರೆಯುವುದಿಲ್ಲ. ಹೀಗಾಗಿ ಬೇರೆಡೆ ಔಷಧಿ ಖರೀದಿಸಬೇಕಾದ ಅನಿವಾರ್ಯತೆ ರೋಗಿಗಳಿಗಿದೆ. ಕೇಂದ್ರ ಸರ್ಕಾರದ ಯೋಜನೆಗಳನ್ನು ಸ್ಥಗಿತಗೊಳಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ. ಜನರ ಆರೋಗ್ಯದ ವಿಚಾರದಲ್ಲಿ ಯಾರು ಸಹ ರಾಜಕಾರಣ ಮಾಡಬಾರದು. ಬಡ ಹಾಗೂ ಮಧ್ಯಮ ವರ್ಗದ ಜನರ ಅನುಕೂಲಕ್ಕೆ ಕೇಂದ್ರ ಸರ್ಕಾರ ಜನೌಷಧ ಕೇಂದ್ರ ಸ್ಥಾಪಿಸಿದೆ. ಬಹಳ ಕಡಿಮೆ ದರದಲ್ಲಿ ಔಷಧ ವಿತರಿಸುತ್ತಿದೆ. ಆದರೆ, ರಾಜ್ಯ ಸರ್ಕಾರ ದುಡುಕಿನ ನಿರ್ಧಾರ ಕೈಗೊಂಡಿರುವುದು ಸಾಭೀತಾಗಿದೆ. ಬಡವರ ವಿರೋಧಿ ಸರ್ಕಾರ ಎಂದು ಪ್ರತಿಭಟನಾಕಾರರು ಧಿಕ್ಕಾರ ಕೂಗಿದರು.

ಬಿಜೆಪಿ ಮಂಡಲ ಅಧ್ಯಕ್ಷ ಮಂಜುನಾಥ್ ಮಸ್ಕಿ, ಬಸವರಾಜ ಎತ್ತಿನಮನಿ, ಶ್ರೀಧರ್‌ ಸುಂಕದ, ಶರಣಪ್ಪ ದೇವರಮನಿ, ಆನಂದ ಕುಲಕರ್ಣಿ, ಆನಂದ್ ಎಂ, ದೇವರಾಜ ನಾಯಕ, ಶರಣಪ್ಪ ಶಿವಪೂಜಿ, ತಿಪ್ಪಣ್ಣ ಮರ್ಲಾನಹಳ್ಳಿ, ಶರಣಪ್ಪ ಕಲಕೇರಿ, ಶಶಿ ಮ್ಯಾದರ್ ಸೇರಿ ಇತರರಿದ್ದರು‌.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

400 ಕೋಟಿ ರು. ದರೋಡೆ ಪ್ರಮುಖ ಆರೋಪಿ ಬಂಧನ
ಕಾಂಗ್ರೆಸ್‌ನವರಿಗೆ ಬಜೆಟ್ ಅರ್ಥವಾಗಲ್ಲ: ಜೋಶಿ ಚಾಟಿ