ಜನೌಷಧಿ ಕೇಂದ್ರ ಮುಚ್ಚಲು ಆದೇಶ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

KannadaprabhaNewsNetwork |  
Published : May 31, 2025, 12:15 AM IST
ಜನೌಷಧಿ ಕೇಂದ್ರ ಮುಚ್ಚಲುಹೊರಟ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿತು. | Kannada Prabha

ಸಾರಾಂಶ

ಜನೌಷಧಿ ಕೇಂದ್ರಗಳನ್ನು ಮುಚ್ಚುವಂತೆ ಆದೇಶಿಸಿರುವ ಕರ್ನಾಟಕ ಸರ್ಕಾರದ ತೀರ್ಮಾನವನ್ನು ವಿರೋಧಿಸಿ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದ ಮುಂದೆ ಭಾರತೀಯ ಜನತಾ ಪಕ್ಷದ ವತಿಯಿಂದ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಸಿದ್ದಾಪುರ

ಜನೌಷಧಿ ಕೇಂದ್ರಗಳನ್ನು ಮುಚ್ಚುವಂತೆ ಆದೇಶಿಸಿರುವ ಕರ್ನಾಟಕ ಸರ್ಕಾರದ ತೀರ್ಮಾನವನ್ನು ವಿರೋಧಿಸಿ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದ ಮುಂದೆ ಭಾರತೀಯ ಜನತಾ ಪಕ್ಷದ ವತಿಯಿಂದ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಾಯಿತು.ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ ಮಾತನಾಡಿ, ಪ್ರಧಾನ ಮಂತ್ರಿಗಳು ಬಡಜನರಿಗೆ ಅನುಕೂಲವಾಗಲು ಜಾರಿಗೆ ತಂದಿರುವ ಜನೌಷಧಿ ಕೇಂದ್ರವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮುಚ್ಚಲು ಮುಂದಾಗಿರುವ ಕ್ರಮ ಸರಿಯಲ್ಲ. ಈ ಯೋಜನೆಯಿಂದ ಸಾಕಷ್ಟು ಬಡಜನರಿಗೆ ಉಪಯೋಗವಾಗುತ್ತಿದೆ. ಬಡ ಜನರ ಪರ ಎಂದು ಸುಳ್ಳು ಹೇಳುತ್ತಾ ರಾಜ್ಯದ ಜನರನ್ನು ಮೋಸ ಮಾಡುತಿರುವ ರಾಜ್ಯ ಸರ್ಕಾರದ ಬಡ ಜನ ವಿರೋಧಿ ನೀತಿ ಇದಾಗಿದೆ. ಯಾವುದೇ ಕಾರಣಕ್ಕೂ ಜನೌಷಧಿ ಕೇಂದ್ರವನ್ನು ಮುಚ್ಚಲು ಬಿಡುವುದಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

ಜಿಲ್ಲಾ ಕಾರ್ಯದರ್ಶಿ ವಿ.ಕೆ. ಲೋಕೇಶ್ ಮಾತನಾಡಿ, ಜನವಿರೋಧಿ ಆಡಳಿತ ನಡೆಸುತ್ತಿರುವ ರಾಜ್ಯದ ಸಿದ್ದರಾಮಯ್ಯ ಸರ್ಕಾರ, ಬಡವರ ಆರೋಗ್ಯದ ಮೇಲೂ ಸವಾರಿ ಮಾಡುತ್ತಿದೆ. ದೇಶದ ಜನಪ್ರಿಯ ಜನೌಷಧಿ ಕೇಂದ್ರಗಳನ್ನು ರಾಜ್ಯದಲ್ಲಿ ಮುಚ್ಚುವಂತೆ ಆದೇಶ ಹೊರಡಿಸಿರುವುದು ಸಿದ್ದರಾಮಯ್ಯನವರ ದುರಾಡಳಿತಕ್ಕೆ ಸಾಕ್ಷಿಯಾಗಿದೆ ಎಂದರು.

ಮಾಜಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಪ್ರತಿಭಟನೆಯಲ್ಲಿ ವಿರಾಜಪೇಟೆ ಮಂಡಲ ಅಧ್ಯಕ್ಷ ಸುವಿನ್ ಗಣಪತಿ, ರಾಜ್ಯ ಕೃಷಿ ಮೋರ್ಚಾ ಕಾರ್ಯಕಾರಿಣಿ ಸದಸ್ಯೆ ಯಮುನಾ ಚಂಗಪ್ಪ, ಸಿದ್ದಾಪುರ ಶಕ್ತಿಕೇಂದ್ರದ ಪ್ರಮುಖರಾದ ರೂಪೇಶ್‌, ಉಪ ಪ್ರಮುಖ್ ದಿಜಿತ್ ಒಬಿಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನೋದ್ ಪೂಜಾರಿ,ಪಕ್ಷದ ಮುಖಂಡರಾದ ಅನಿಲ್ ಶೆಟ್ಟಿ, ಸೂದನ ಸತೀಶ್, , ಚೇತನ್, ರತಿ ಅಚಪ್ಪ ದರ್ಶನ್, ಹರಿದಾಸ್‌, ಆನಂದ ರೀನಾ ತುಳಸಿ ಸೇರಿದಂತೆ ಇತರರು ಇದ್ದರು.ಈ ಸಂದರ್ಭ ಬಿಜೆಪಿ ಜ, ಸಿದ್ದಾಪುರ ಶಕ್ತಿಕೇಂದ್ರದ ಪ್ರಮುಖರಾದ ರೂಪೇಶ್, ಉಪ ಪ್ರಮುಖ್ ದಿಜಿತ್, ಹಿಂದುಳಿದ ವರ್ಗಗಳ ಅನಿಲ್ ಶೆಟ್ಟಿ, ಹರಿದಾಸ್, ರೀನಾ ತುಳಸಿ ಮತ್ತು ಇತರರಿದ್ದರು.

PREV

Recommended Stories

ರಾಜ್ಯದಲ್ಲಿ 3 ದಿನ ಭಾರೀ ಮಳೆ: 15 ಜಿಲ್ಲೆಗೆ ಯೆಲ್ಲೋ ಅಲರ್ಟ್‌
ವರ್ಗಾವಣೆ ಬಳಿಕ ಪೊಲೀಸರು ವರದಿ ಮಾಡಿಕೊಳ್ಳದಿದ್ದರೆ ಸಂಬಳ ಕಟ್‌ : ವೈದ್ಯಕೀಯ ರಜೆಗೆ ಬ್ರೇಕ್