ಕನ್ನಡಪ್ರಭ ವಾರ್ತೆ ಭಾರತೀನಗರ
ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳೊಂದಿಗೆ ರೋಟರಿ ಸಂಸ್ಥೆ ಪದಾಧಿಕಾರಿಗಳು ಪೋಲಿಯೋ ಮುಕ್ತ ಭಾರತವನ್ನಾಗಿ ಮಾಡಬೇಕೆಂದು ಘೋಷಣೆ ಕೂಗಿ ಜಾಥಾ ನಡೆಸಿದರು.
ಈ ವೇಳೆ ರೋಟರಿ ಮಾಜಿ ಅಧ್ಯಕ್ಷ ಬಿ.ವಿ.ಮಧುಸೂಧನ್, ಶಿವರಾಮೇಗೌಡ, ನಂದೀಶ್, ಆರೋಗ್ಯ ಇಲಾಖೆಯ ರಾಧ, ಶಿವರಾಜು, ಮುಖ್ಯಶಿಕ್ಷಕಿ ಸುನೀತ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.ನಾಳೆ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರ ವಿತರಣೆಮದ್ದೂರು: ಪಟ್ಟಣದ ಎಚ್.ಕೆ.ವೀರಣ್ಣಗೌಡ ಪದವಿ ಕಾಲೇಜಿನಲ್ಲಿ ಅ.26 ರಂದು ಪದವಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮಳವಳ್ಳಿ: ಪಟ್ಟಣದಲ್ಲಿ ನ.1ರಂದು ನಡೆಯಲಿರುವ ಕನ್ನಡ ರಾಜೋತ್ಸವ ಆಚರಣೆ ಸಂಬಂಧ ತಾಪಂ ಸಭಾಂಗಣದಲ್ಲಿ ಅ.28ರಂದು ಪೂರ್ವಭಾವಿ ಸಭೆ ಕರೆಯಲಾಗಿದೆ. ಸೋಮವಾರ ಬೆಳಗ್ಗೆ 11ಗಂಟೆಗೆ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ನಡೆಯುವ ಸಭೆಗೆ ಎಲ್ಲ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಜರಾಗಿ ಸಲಹೆ-ಸೂಚನೆಗಳನ್ನು ನೀಡಬೇಕು ಎಂದು ಪ್ರಭಾರ ತಹಸೀಲ್ದಾರ್ ಬಿ.ವಿ.ಕುಮಾರ್ ತಿಳಿಸಿದ್ದಾರೆ.