ದೇಶಕ್ಕಾಗಿ ಜವಾಹರ್‌ ಲಾಲ್‌ ನೆಹರು ಕೊಡುಗೆ ಸ್ಮರಣೀಯ: ಡಾ.ಅಂಶುಮಂತ್‌

KannadaprabhaNewsNetwork |  
Published : May 29, 2026, 01:45 AM IST
ನರಸಿಂಹರಾಜಪುರ ಪಟ್ಟಣದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ನಡೆದ ನೆಹರು ಅವರು 62 ನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ  ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಹಾಗೂ ಇತರ ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು. | Kannada Prabha

ಸಾರಾಂಶ

ದೇಶದ ಪ್ರಥಮ ಪ್ರಧಾನಿ ಜವಹಾರ್ ಲಾಲ್ ನೆಹರೂ ದೇಶಕ್ಕೆ ಕೊಟ್ಟ ಕೊಡುಗೆ ಸ್ಮರಣೀಯವಾಗಿದೆ ಎಂದು ಶಿವಮೊಗ್ಗ ಕಾಡಾ ನಿಗಮದ ಅಧ್ಯಕ್ಷ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ತಿಳಿಸಿದರು.

ಕನ್ನಡಪ್ರಭ ವಾರ್ತೆ ನರಸಿಂಹರಾಜಪುರ

ದೇಶದ ಪ್ರಥಮ ಪ್ರಧಾನಿ ಜವಹಾರ್ ಲಾಲ್ ನೆಹರೂ ದೇಶಕ್ಕೆ ಕೊಟ್ಟ ಕೊಡುಗೆ ಸ್ಮರಣೀಯವಾಗಿದೆ ಎಂದು ಶಿವಮೊಗ್ಗ ಕಾಡಾ ನಿಗಮದ ಅಧ್ಯಕ್ಷ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ತಿಳಿಸಿದರು.

ತಾಲೂಕಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಜವಾಹರ ಲಾಲ್ ನೆಹರು 62ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿ. ದೇಶಕ್ಕೆ ನೆಹರು ಕೊಡುಗೆ ಅಪಾರ. ದೇಶ ಸಂಕಷ್ಟ ಎದುರಿಸುತ್ತಿದ್ದ ಸಂದರ್ಭದಲ್ಲಿ ಡ್ಯಾಂಗಳ ನಿರ್ಮಾಣ ಮಾಡಿದರೆ ರೈತರಿಗೆ ಅನುಕೂಲವಾಗುತ್ತದೆ ಎಂದು ಮುಂದಾಲೋಚನೆ ಮಾಡಿ ಸಾವಿರಾರು ಡ್ಯಾಂ ನಿರ್ಮಿಸಿ ಅನುಕೂಲ ಮಾಡಿಕೊಟ್ಟರು. ನೂರಾರು ವಿವಿಗಳನ್ನು ದೇಶದ ಉದ್ದಗಲಕ್ಕೂ ಸ್ಥಾಪಿಸಿದ ಕೀರ್ತಿ ನೆಹರುರವರಿಗೆ ಸೇರುತ್ತದೆ. ಆದರೆ, ಇಂದಿನ ಕೇಂದ್ರದ ಬಿಜೆಪಿ ಸರ್ಕಾರ ವಿವಿಗಳಿಗೆ ಸಿಗಬೇಕಾದ ಸೌಲಭ್ಯ ಕಡಿತಗೊಳಿಸುವ ಮೂಲಕ ಯುವ ಜನರಿಗೆ ದ್ರೋಹ ಬಗೆಯುತ್ತಿದೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷ ಹಾಗೂ ನೆಹರು ಅವರನ್ನು ಟೀಕಿಸುವ ಕೆಲಸ ಬಿಜೆಪಿ ಮಾಡುತ್ತ ಬರುತ್ತಿದೆ. ನೆಹರು ವಿಚಾರಧಾರೆ, ಅವರ ಸಿದ್ಧಾಂತವನ್ನು ಜನರ ಮನಸ್ಸಿಗೆ ಮುಟ್ಟಿಸುವ ಕಾರ್ಯವಾಗಬೇಕಿದೆ. ಇಲ್ಲವಾದಲ್ಲಿ ಬಿಜೆಪಿ ಅಪಪ್ರಚಾರ ವನ್ನೇ ಜನರು ನಂಬುವ ಸ್ಥಿತಿ ನಿರ್ಮಾಣವಾಗುತ್ತದೆ. ನೆಹರು ಅವರು ಪ್ರಧಾನಿಯಾಗಿ ನೀಡಿದ ಜನಪರ ಕಾಳಜಿ ಕಾರ್ಯಕ್ರಮಗಳು ಇಂದಿಗೂ ಅನುಕರಣೀಯ ಎಂದರು.

ತಾಲೂಕು ಬಗರ್‌ಹುಕುಂ ಸಮಿತಿ ಅಧ್ಯಕ್ಷ ಈ.ಸಿ.ಜೋಯಿ ಮಾತನಾಡಿ, ದೇಶ ಕಂಡ ಮಹಾನ್ ವ್ಯಕ್ತಿಗಳಲ್ಲಿ ಜವಹರಲಾಲ್ ನೆಹರುರವರು ಒಬ್ಬರಾಗಿದ್ದಾರೆ. ದೇಶದ ಮೊದಲನೇ ಪ್ರಧಾನಮಂತ್ರಿಯಾಗಿ, ಕಾಂಗ್ರೆಸ್ ಪಕ್ಷದ ಮೊದಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ನೆಹರು ವಿದೇಶದಲ್ಲಿ ಉನ್ನತ ವ್ಯಾಸಂಗ ಮಾಡಿ ಭಾರತಕ್ಕೆ ಮರಳಿ ವಕೀಲ ವೃತ್ತಿಯನ್ನು ಮಾಡುತ್ತಾ ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ನೆಹರು ಪ್ರಮುಖ ಪಾತ್ರವಹಿಸಿದ್ದಾರೆ ಎಂದರು.

ಕೆಡಿಪಿ ನಾಮ ನಿರ್ದೇಶಿತ ಸದಸ್ಯ ಕೆ.ವಿ.ಸಾಜು ಮಾತನಾಡಿ, ನೆಹರು ಅ‍ರು ರಾಜಕೀಯ ವಲಯದಲ್ಲಿ ತಮ್ಮದೇ ಆದ ಕ್ರಾಂತಿಯನ್ನು ಮಾಡಿದವರು . ನಮ್ಮ ದೇಶದಲ್ಲಿ ಉನ್ನತ ಶಿಕ್ಷಣ ದೊರೆಯುವಂತೆ ಮಾಡಿದ ಕೀರ್ತಿ ನೆಹರುರು ಅವರಿಗೆ ಸಲ್ಲುತ್ತದೆ. ಮಕ್ಕಳ ಬಗ್ಗೆ ಅಪಾರ ಪ್ರೀತಿಯನ್ನು ಹೊಂದಿದ್ದರು. ಆದ್ದರಿಂದಲೇ ನ.14ನ್ನು ಮಕ್ಕಳ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಜವಹರಲಾಲ್ ನೆಹರು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಎಸ್.ಡಿ.ರಾಜೇಂದ್ರ, ಶ್ರೀಧಪಾನಿ, ಸುನೀಲ್‌ಕುಮಾರ್, ಜುಬೇದಾ, ಬೆನ್ನಿ, ಇಂದಿರಾನಗರಘು, ಬಿಳಾಲು ಮನೆ ಉಪೇಂದ್ರ, ಎಚ್.ಎಂ.ಶಿವಣ್ಣ, ಮಂಜು,ಮಾಳೂರುದಿಣ್ಣೆ ರಮೇಶ್,ಮಹೇಶ್, ಸತ್ಯನಾರಾಯಣ, ಜಾನ್ಸನ್ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತಾಳ್ಮೆ, ಸಮಯಪ್ರಜ್ಞೆ ಇಲ್ಲದಿದ್ದರೆ ಯಾವ ಸಾಧನೆಯೂ ಅಸಾಧ್ಯ: ಬಿ.ಸಿ.ಶಿವಕುಮಾರ್‌
ದೇಶ, ಜನರ ಹಿತಕ್ಕಾಗಿ ಮೋದಿ ರಾಜೀನಾಮೆಗೆ ಒತ್ತಾಯ