ದೇಶ ಸ್ವಾವಲಂಭಿಯಾಗುವಲ್ಲಿ ಜವಹರಲಾಲ್ ನೆಹರು ಕೊಡುಗೆ ಅಪಾರ

KannadaprabhaNewsNetwork |  
Published : May 29, 2026, 02:00 AM IST
ಪೋಟೋ27ಎಚ್‌ಎಸ್‌ಡಿ2: ಚಿತ್ರದುರ್ಗ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ದೇಶದ ಮಾಜಿ ಪ್ರಧಾನ ಮಂತ್ರಿ ಜವಹರಲಾಲ್ ನೆಹರು ರವರ ಪುಣ್ಯ ಸ್ಮರಣೆ  ಕಾರ್ಯಕ್ರಮ ನಡೆಸಲಾಯಿತು. | Kannada Prabha

ಸಾರಾಂಶ

ಚಿತ್ರದುರ್ಗ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ದೇಶದ ಮಾಜಿ ಪ್ರಧಾನಮಂತ್ರಿ ಜವಹರಲಾಲ್ ನೆಹರು ರವರ ಪುಣ್ಯ ಸ್ಮರಣೆ ಕಾರ್ಯಕ್ರಮ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ದೇಶ ಸ್ವಾವಲಂಭಿಯಾಗುವಲ್ಲಿ ಜವಹರಲಾಲ್ ನೆಹರು ರವರ ಕೊಡುಗೆ ಬಹಳ ಎಂದು ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್‌

ಪಕ್ಷದ ಅಧ್ಯಕ್ಷರಾದ ಎಂ.ಕೆ.ತಾಜ್ ಪೀರ್ ತಿಳಿಸಿದರು.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ದೇಶದ ಮಾಜಿಪ್ರಧಾನ ಮಂತ್ರಿ ಜವಹರಲಾಲ್ ನೆಹರು ರವರ ಪುಣ್ಯಸ್ಮರಣೆಯ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ದೇಶದ ಪ್ರಥಮ ಪ್ರಧಾನಮಂತ್ರಿಯಾಗಿ ದೇಶದಲ್ಲಿ ಬಡತನ ನಿರ್ಮೂಲನೆ, ನಿರುದ್ಯೋಗ ನಿವಾರಣೆ, ನೀರಾವರಿ ಯೋಜನೆಗಳನ್ನು ನೀಡುವ ಮೂಲಕ ದೇಶವನ್ನು ಸುಧಾರಣೆ ಮಾಡಿದರು. ಪಂಚವಾರ್ಷಿಕ ಯೋಜನೆ ಸೇರಿದಂತೆ 20 ಅಂಶಗಳನ್ನು ಜಾರಿ ಮಾಡುವುದರ ಮೂಲಕ ಜನರಿಗೆ ವಿವಿಧ ರೀತಿಯ ಸೌಲಭ್ಯಗಳನ್ನು ನೀಡಲಾಯಿತು ಎಂದರು.

ತಮ್ಮ ಅಧಿಕಾರದ ಅವಧಿಯಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲದಂತೆ ಆಡಳಿತವನ್ನು ನಡೆಸಿ ಈಗ ನಾವುಗಳು ನೆಮ್ಮದಿಯ ಬದುಕನ್ನು ನಡೆಸಲು ಕಾರಣರಾಗಿದ್ದಾರೆ ಮುಂದಿನ ದಿನದಲ್ಲಿ ನಮ್ಮ ಪಕ್ಷದ ನಾಯಕರುಗಳ ಜನ್ಮ ದಿನ ಹಾಗೂ ಪುಣ್ಯಸ್ಮರಣೆಯನ್ನು ಕಚೇರಿಯಲ್ಲಿ ಆಚರಣೆ ಮಾಡಿ ತದ ನಂತರ ಯಾವುದಾದರೊಂದು ಶಾಲೆ ಅಥವಾ ವಾರ್ಡ್‌ಗಳಲ್ಲಿ ಆಚರಣೆಯನ್ನು ಮಾಡುವುದರ ಮೂಲಕ ಇಂದಿನ ಯುವ ಜನಾಂಗಕ್ಕೆ ದೇಶಕ್ಕೆ ಕಾಂಗ್ರೆಸ್ ನೀಡಿದ ಕೂಡುಗೆಯನ್ನು ತಿಳಿಸುವಂತ ಕಾರ್ಯವನ್ನು ಮಾಡಲಾಗುವುದು ಎಂದರು. ಕಾರ್ಯಾಧ್ಯಕ್ಷ ಹಾಲಸ್ವಾಮಿ, ಯುವ ಕಾಂಗ್ರೆಸ್‍ನ ಜಿಲ್ಲಾಧ್ಯಕ್ಷ ಉಲ್ಲಾಸ್ ಕಾರೇಹಳ್ಳಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಡಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಸಂಪತ್ ಕುಮಾರ್, ಮೈಲಾರಪ್ಪ, ಓಬಿಸಿ ಅಧ್ಯಕ್ಷ ಎನ್.ಡಿ.ಕುಮಾರ್,

ಉಪಾಧ್ಯಕ್ಷ ರವಿಕುಮಾರ್, ಗ್ಯಾರೆಂಟಿ ಜಿಲ್ಲಾಧ್ಯಕ್ಷ ಶಿವಣ್ಣ, ತಾಲ್ಲೂಕು ಅಧ್ಯಕ್ಷ ಪ್ರಕಾಶ್, ಅಲ್ಲಾಭಕ್ಷಿ, ಲಕ್ಷ್ಮೀಕಾಂತ, ಮಧುಗೌಢ,

ಇಮಾಂಸಾಬ್, ಎಸ್.ಟಿ.ಘಟಕದ ಅಧ್ಯಕ್ಷ ಮಂಜುನಾಥ್, ರಫಿ, ರಾಮ ಪ್ರಕಾಶ್ ನಾಯ್ಕ ಸೇರಿದಂತೆ ಇತರರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹನಿಟ್ರ್ಯಾಪ್, ಕಿಡ್ನ್ಯಾಪ್ ಪ್ರಕರಣ; 8 ಆರೋಪಿಗಳು ಅರೆಸ್ಟ್
ಎಲ್ಲ ಪ್ರಾಣಿಗಳಿಗೂ ಹಿಂಸೆಯಿಲ್ಲದೇಬದುಕುವ ಹಕು ಹೊಂದಿವೆ: ಕೋರ್ಟ್‌