- ಕಾಂಗ್ರೆಸ್ ಮುಖಂಡ ಡಿ.ಬಸವರಾಜ್ ಸ್ಮರಣೆ । ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನೆಹರು 137ನೇ ಜನ್ಮ ದಿನಾಚರಣೆ
ಕನ್ನಡಪ್ರಭ ವಾರ್ತೆ ದಾವಣಗೆರೆ
ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರೊಂದಿಗೆ ಮಾಜಿ ಪ್ರಧಾನಿ ಜವಾಹರ ಲಾಲ್ ನೆಹರು ಅವರು ಹೆಗಲಿಗೆ ಹೆಗಲು ಕೊಟ್ಟು ಸತ್ಯ, ಧರ್ಮ, ಅಹಿಂಸೆ ಮಾರ್ಗದಲ್ಲಿ ಅತ್ಯಂತ ಯಶಸ್ವಿಯಾಗಿ ದುಡಿದು ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಟ್ಟರು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ್ ಹೇಳಿದರು.ಶನಿವಾರ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಏರ್ಪಡಿಸಿದ್ದ ನೆಹರು ಅವರ 137ನೇ ಜನ್ಮ ದಿನಾಚರಣೆಯಲ್ಲಿ ನೆಹರು ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ಜಿಲ್ಲಾ ಕಾಂಗ್ರೆಸ್ ಎಸ್ಸಿ ವಿಭಾಗದ ಅಧ್ಯಕ್ಷ ಬಿ.ಎಚ್. ವೀರಭದ್ರಪ್ಪ ಮಾತನಾಡಿ, ದೇಶದ ಅಭಿವೃದ್ಧಿಗೆ ಶ್ರಮಿಸಿದ ಪಂಡಿತ್ ನೆಹರು ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವಮಾನಿಸುವುದನ್ನು ತೀವ್ರವಾಗಿ ಖಂಡಿಸಿದರು. ನೆಹರು ಅಧಿಕಾರಕ್ಕೆ ಬಂದಾಗ ಬ್ರಿಟಿಷರ ಆಡಳಿತದಿಂದಾಗಿ ಭಾರತ ಬಡವಾಗಿತ್ತು. ರಾಷ್ಟ್ರವನ್ನು ಕಟ್ಟುವ ಕೆಲಸಕ್ಕೆ ಕೈ ಹಾಕಿದ ನೆಹರುರವರು ಪಂಚ ವಾರ್ಷಿಕ ಯೋಜನೆಗಳನ್ನು ಜಾರಿಗೊಳಿಸಿದರು ಎಂದರು.
ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಎಸ್.ಮಲ್ಲಿಕಾರ್ಜುನ, ಪುಟ್ಬಾಲ್ ಗಿರೀಶ್, ಎಲ್ಎಂಎಚ್ ಸಾಗರ್, ದಾಕ್ಷಣಮ್ಮ, ಕವಿತಾ ಚಂದ್ರಶೇಖರ, ರಾಜೇಶ್ವರಿ, ರಾಕೇಶ್, ಹನುಮಂತಪ್ಪ ಇತರರು ಹಾಜರಿದ್ದರು. ಇದೇ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಬುಕ್ಸ್ ವಿತರಿಸಲಾಯಿತು.
-14ಕೆಡಿವಿಜಿ36: ದಾವಣಗೆರೆಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ನೆಹರು ಜನ್ಮ ದಿನಾಚರಣೆ ಆಚರಿಸಲಾಯಿತು.