ಕನ್ನಡಪ್ರಭ ವಾರ್ತೆ ಹಾಸನ
ನಗರದ ಹೇಮಾವತಿ ಪ್ರತಿಮೆ ಬಳಿ ಡಿಸೆಂಬರ್ ೧೦ರಿಂದ ನಡೆಯುತ್ತಿರುವ ಕಾಡಾನೆ ಹಾವಳಿ ಶಾಶ್ವತ ಪರಿಹಾರಕ್ಕಾಗಿ ನಿರಂತರ ಹೋರಾಟದ ನಾಲ್ಕನೇ ದಿವಸದಂದು ರವಿ ನಾಕಲಗೂಡು ಭಾಗವಹಿಸಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಾಡಾನೆ ಹಾವಳಿ ಹೆಚ್ಚಾಗಿರುವ ಮಲೆನಾಡು ಭಾಗದಲ್ಲಿ ರೈತರು ಕೂಲಿ ಕಾರ್ಮಿಕರು ರೈತರು ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಆದ್ದರಿಂದ ಜಾತ್ಯತೀತ ಹಾಗೂ ಪಕ್ಷಾತೀತವಾಗಿ ಕಾಡಾನೆ ಸಮಸ್ಯೆಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಮುಂದಾಗಬೇಕು. ಈ ಹಿಂದೆ ರೈತರು ಹಾಗೂ ಜಯ ಕರ್ನಾಟಕ ಸಂಘಟನೆಯಿಂದಲೂ ಹಲವಾರು ಹೋರಾಟ ಮಾಡಿದರು ಸರ್ಕಾರ ಗಮನಹರಿಸಿಲ್ಲ. ಆದ್ದರಿಂದ ಆನೆ ಹಾವಳಿಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿ ಧರಣಿ ಆರಂಭಿಸಿದ್ದಾರೆ.
ಜಿಲ್ಲೆಯಲ್ಲಿ ಹಲವಾರು ವರ್ಷಗಳಿಂದ ಆನೆ ಹಾವಳಿ ಹೆಚ್ಚಾಗಿದ್ದು ಬೆಳೆ ಹಾನಿ ಪ್ರಾಣ ಹಾನಿಯಾದಾಗ ಕೇವಲ ಇಂತಿಷ್ಟು ಪರಿಹಾರ ಕೊಟ್ಟು ಸರ್ಕಾರ ಕೈ ತೊಳೆದುಕೊಳ್ಳುತ್ತದೆ. ಆನೆ ಹಾವಳಿ ಇರುವ ಪ್ರದೇಶದಲ್ಲಿ ೪೦ ರಿಂದ ೫೦ ಆನೆಗಳು ಹಿಂಡು ಹಿಂಡಾಗಿ ಸಂಚರಿಸುತ್ತಿದ್ದು ಜೀವ ಭಯದಲ್ಲಿಯೇ ಇಲ್ಲಿನ ಗ್ರಾಮಸ್ಥರು ಕಾಲ ದೂಡುವಂತಾಗಿದೆ.ಜೈ ಕರ್ನಾಟಕ ಸಂಘಟನೆ ರೈತ ಪರ ಕೆಲಸ ಮಾಡುತ್ತಿದ್ದು ಜಿಲ್ಲಾಡಳಿತ ಧರಣಿ ಸ್ಥಳಕ್ಕೆ ಭೇಟಿ ನೀಡಿ ಆನೆ ಹಾವಳಿಗೆ ಶಾಶ್ವತ ಪರಿಹಾರ ಒದಗಿಸಿ ನಿಟ್ಟಿನಲ್ಲಿ ಭರವಸೆ ನೀಡುವ ಕೆಲಸ ಮಾಡಲಿ ಎಂದು ಒತ್ತಾಯಿಸಿದರು.
ಬೆಳಗಾವಿ ಅಧಿವೇಶನ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಬೇಲೂರು ಶಾಸಕ ಎಚ್ ಕೆ ಸುರೇಶ್ ಅವರು, ಕಾಡಾನೆಯ ಬಗ್ಗೆ ಪ್ರಸ್ತಾಪ ಮಾಡಿದ್ದು, ಇದಕ್ಕೆ ಅರಣ್ಯ ಸಚಿವರು ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿರುವುದು ಸ್ವಾಗತ ಕೇವಲ ಭರವಸೆಯ ಮಾತುಗಳನ್ನ ನೀಡದೆ ಇದು ಕಾರ್ಯಗತಕ್ಕೆ ಬರಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಂಘಟನೆಯ ತಾಲೂಕು ಘಟಕದ ಅಧ್ಯಕ್ಷರಾದ ರಾಜು, ಮಂಜುನಾಥ್, ಸಂದೇಶ್, ಸುಮಾ, ಲಕ್ಷ್ಮಿ, ಸುಧಾ ಸೇರಿದಂತೆ ಇತರರು ಭಾಗವಹಿಸಿದ್ದರು.----13ಎಚ್ಎಸ್ಎನ್15 : ಹೇಮಾವತಿ ಪ್ರತಿಮೆ ಎದುರು ಜಯ ಕರ್ನಾಟಕ ಸಂಘಟನೆಯಿಂದ ನಡೆಯುತ್ತಿರುವ ಪ್ರತಿಭಟನೆ.