ಜಯಕುಮಾರ್ ಸಜೀವ ದಹನ ಪ್ರಕರಣ: ನ್ಯಾಯಾಂಗ ತನಿಖೆಗೆ ರೈತ ಸಂಘ ಆಗ್ರಹ

KannadaprabhaNewsNetwork |  
Published : Jun 04, 2025, 12:46 AM IST
3ಕೆಎಂಎನ್ ಡಿ24 | Kannada Prabha

ಸಾರಾಂಶ

ಪೊಲೀಸರು ಮೃತ ಪತ್ನಿ ನೀಡಿದ ದೂರನ್ನು ತಿರುಚಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಆರೋಪಿಸಿದ್ದು, ಈ ಬಗ್ಗೆಯೂ ಸಮಗ್ರ ತನಿಖೆಯಾಗಬೇಕು. ಜಯಕುಮಾರ್ ಕುಟುಂಬಕ್ಕೆ ಸರ್ಕಾರ ಸೂಕ್ತ ಪರಿಹಾರ ಕೊಡಬೇಕು. ಪತ್ನಿಗೆ ಸರ್ಕಾರಿ ಉದ್ಯೋಗ ನೀಡಬೇಕು. ಅವರ ಮಕ್ಕಳ ಶಿಕ್ಷಣದ ಖರ್ಚನ್ನು ಸರ್ಕಾರವೇ ನೀಡಬೇಕು.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ತಾಲೂಕಿನ ಕತ್ತರಘಟ್ಟ ಗ್ರಾಮದಲ್ಲಿ ಜಯಕುಮಾರ್ ಸಜೀವ ದಹನ ನಡೆದ ಸ್ಥಳಕ್ಕೆ ರೈತಸಂಘ (ರೈತಬಣ) ರಾಜ್ಯಾಧ್ಯಕ್ಷ ಇಂಗಲಗುಪ್ಪೆ ಕೃಷ್ಣೇಗೌಡ ಭೇಟಿ ನೀಡಿ ಘಟನೆ ಕುರಿತು ನ್ಯಾಯಾಂಗ ತನಿಖೆ ನಡೆಸುವಂತೆ ಸರ್ಕಾರವನ್ನು ಆಗ್ರಹಿಸಿದರು.

ಕಾರ್ಯಕರ್ತರೊಂದಿಗೆ ಗ್ರಾಮಕ್ಕೆ ಭೇಟಿ ನೀಡಿ ಮೃತ ಜಯಕುಮಾರ್ ಪತ್ನಿ ಲಕ್ಷ್ಮಿ ಅವರಿಗೆ ಧೈರ್ಯ ತುಂಬಿದರು. ನಂತರ ಜಯಕುಮಾರ್ ಅವರ ಸಜೀವ ದಹನ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.

ಪೊಲೀಸರು ಮೃತ ಪತ್ನಿ ನೀಡಿದ ದೂರನ್ನು ತಿರುಚಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಆರೋಪಿಸಿದ್ದು, ಈ ಬಗ್ಗೆಯೂ ಸಮಗ್ರ ತನಿಖೆಯಾಗಬೇಕು. ಜಯಕುಮಾರ್ ಕುಟುಂಬಕ್ಕೆ ಸರ್ಕಾರ ಸೂಕ್ತ ಪರಿಹಾರ ಕೊಡಬೇಕು. ಪತ್ನಿಗೆ ಸರ್ಕಾರಿ ಉದ್ಯೋಗ ನೀಡಬೇಕು. ಅವರ ಮಕ್ಕಳ ಶಿಕ್ಷಣದ ಖರ್ಚನ್ನು ಸರ್ಕಾರವೇ ನೀಡಬೇಕು ಎಂದು ಆಗ್ರಹಿಸಿದರು.

ಈ ವೇಳೆ ಕರವೇ ಪ್ರವೀಣ್‌ ಶೆಟ್ಟಿ ಬಣದ ಮಂಡ್ಯ ಜಿಲ್ಲಾಧ್ಯಕ್ಷ ಡಿ.ಅಶೋಕ್, ಹರಳಹಳ್ಳಿ ಶಿವರಾಂ, ಕರವೇ ಕಾಂತರಾಜು, ಡಿ.ಎಸ್.ಎಸ್ ಅಧ್ಯಕ್ಷ ದೇವರಾಜು ಅರಳಕುಪ್ಪೆ, ರೈತಸಂಘ (ರೈತಬಣ) ಗೌರವಾಧ್ಯಕ್ಷ ಬಿಡದಿ ಪಿ.ಎಂ.ರವಿಕುಮಾರ್, ಮೈಸೂರು ಜಿಲ್ಲಾಧ್ಯಕ್ಷ ಮಾಲೀಕ್ ಅವರ್ತಿ, ಅಲ್ಪಸಂಖ್ಯಾತರ ವಿಭಾಗದ ರಾಜ್ಯಾಧ್ಯಕ್ಷ ತನ್ವಿರ್ ಮುಜಾದ್, ಜಿಲ್ಲಾಧ್ಯಕ್ಷ ಕೆ.ಎಚ್ ಕಂಠೀವ ಕಾರಸವಾಡಿ, ವಿಜಯನಗರ ಜಿಲ್ಲಾಧ್ಯಕ್ಷ ಹರಪನಹಳ್ಳಿ ಲೋಕೇಶ್‌ನಾಯಕ್, ಬಂಜಾರ ಸಮಾಜದ ರಾಜ್ಯಾಧ್ಯಕ್ಷದ ಸುರೇಶ ನಾಯಕ್, ಚಾಮುಂಡೇಶ್ವರಿ ಕ್ಷೇತ್ರದ ಅಧ್ಯಕ್ಷ ಕೆಂಪರಾಜು, ಕೆ.ಆರ್.ಪೇಟೆ ತಾಲೂಕು ಅಧ್ಯಕ್ಷ ದೊದ್ದನಕಟ್ಟೆ ಹರೀಶ್‌ಕುಮಾರ್, ಹಾಸನ ಜಿಲ್ಲಾ ಅಧ್ಯಕ್ಷ ದಯಾನಂದ್ ಬೆಳಗುಂಬ, ಮುಖಂಡರಾದ ಕಾಳಪ್ಪ ಜಯಪುರ, ಮಂಜು ಪಾಳ್ಯ, ಪುಟ್ಟಸ್ವಾಮಿ ನಾಯಕ, ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ
ಪುಷ್ಪಗಿರಿ ಜೇಸಿಗೆ 50 ವರ್ಷ: ಸಂಭ್ರಮ ಆಚರಣೆ