ಶೂ ಎಸೆದ ಆರೋಪಿ ದೇಶದಿಂದ ಗಡಿಪಾರು: ಜಯನ್‌ ಮಲ್ಪೆ ಆಗ್ರಹ

KannadaprabhaNewsNetwork |  
Published : Oct 11, 2025, 12:03 AM IST
09ಜಯನ್‌ಜ.ಗವಾಯಿ ಮೇಲೆ ಶೂ ದಾಳಿ ವಿರುದ್ಧ ಉಡುಪಿಯಲ್ಲಿ ಪ್ರತಿಭಚನೆ | Kannada Prabha

ಸಾರಾಂಶ

ಭಾರತದ ಆಡಳಿತ ವ್ಯವಸ್ಥೆ ಇರುವುದು ಧಾರ್ಮಿಕ ಗ್ರಂಥಗಳ ಆಧಾರದ ಮೇಲಲ್ಲ, ಬದಲಾಗಿ ಈ ದೇಶ ಸಂವಿಧಾನದ ಆಧಾರದ ಮೇಲೆ. ಸಂವಿಧಾನದ ಮುಖ್ಯ ಅಂಗವಾಗಿರುವ ನ್ಯಾಯಾಂಗ. ಈ ನ್ಯಾಯಾಂಗದ ನ್ಯಾಯಮೂರ್ತಿಗಳ ಮೇಲೆ ಶೂ ದಾಳಿ ಇದು ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಮಾಡಿದ ಘೋರ ಅವಮಾನ ಎಂದು ಜಯನ್ ಮಲ್ಪೆ ಹೇಳಿದ್ದಾರೆ.

ಉಡುಪಿ: ಅಂಬೇಡ್ಕರ್ ಆಶಯಗಳ ಪ್ರತಿಪಾದಕ, ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಬಿ. ಆರ್. ಗವಾಯಿ ಮೇಲೆ ಶೂ ಎಸೆದ ಸನಾತನಿ ವಕೀಲ ರಾಕೇಶ್ ಕಿಶೋರ್‌ರನ್ನು ಭಾರತದಿಂದ ತಕ್ಷಣ ಗಡಿಪಾರು ಮಾಡಬೇಕು ಎಂದು ದಲಿತ ನಾಯಕ ಜಯನ್ ಮಲ್ಪೆ ಆಗ್ರಹಿಸಿದ್ದಾರೆ.

ಗುರುವಾರ ನಗರದ ಅಜ್ಜರಕಾಡು ಹುತಾತ್ಮ ಯೋಧರ ಸ್ಮಾರಕ ಬಳಿ ಅಂಬೇಡ್ಕರ್ ಯುವಸೇನೆ ಆಯೋಜಿಸಿದ ವಕೀಲ ರಾಕೇಶ್‌ ಕಿಶೋರ್ ಅವರ ಪ್ರತಿಕೃತಿ ದಹಿಸಿ ನಡೆಸಲಾದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.

ಭಾರತದ ಆಡಳಿತ ವ್ಯವಸ್ಥೆ ಇರುವುದು ಧಾರ್ಮಿಕ ಗ್ರಂಥಗಳ ಆಧಾರದ ಮೇಲಲ್ಲ, ಬದಲಾಗಿ ಈ ದೇಶ ಸಂವಿಧಾನದ ಆಧಾರದ ಮೇಲೆ. ಸಂವಿಧಾನದ ಮುಖ್ಯ ಅಂಗವಾಗಿರುವ ನ್ಯಾಯಾಂಗ. ಈ ನ್ಯಾಯಾಂಗದ ನ್ಯಾಯಮೂರ್ತಿಗಳ ಮೇಲೆ ಶೂ ದಾಳಿ ಇದು ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಮಾಡಿದ ಘೋರ ಅವಮಾನ ಎಂದರು.

ಚಿಂತಕ ಗಣನಾಥ ಎಕ್ಕಾರು ಮಾತನಾಡಿ, ಇಂತಹ ಅವಮಾನಕರ ಘಟನೆ ಇಡೀ ಭಾರತವನ್ನೇ ಅವಮಾನಿಸಿದದ್ದಂತೆ. ನಾವು ಸಂವಿಧಾನದ ಆಶಯವನ್ನು ಉಳಿಸದೇ ಹೋದರೆ ದೇಶಕ್ಕೆ ಗಂಡಾಂತರ ತಪ್ಪಿದ್ದಲ್ಲ ಎಂದರು.

ದಲಿತ ಮುಖಂಡ ಶೇಖರ ಹೆಜಮಾಡಿ, ದಸಂಸ ಭೀಮವಾದದ ರಾಜ್ಯ ಸಂಘಟನಾ ಸಂಚಾಲಕ ಶೇಖರ ಹಾವಂಜೆ, ದಲಿತ ಹಕ್ಕುಗಳ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷ ಸಂಜೀವ ಬಳ್ಕೂರು, ಅಂಬೇಡ್ಕರ್ ಯುವಸೇನೆಯ ಜಿಲ್ಲಾಧ್ಯಕ್ಷ ಗಣೇಶ್ ನೆರ್ಗಿ ಮುಂತಾದವರು ಮಾತನಾಡಿದರು

ಕಾರ್ಯಕ್ರಮದಲ್ಲಿ ಪ್ರಮುಖರಾದ ಮಹಾಬಲ ಕುಂದರ್, ಚಾಲ್ಸ್ ಅಂಬ್ಲರ್, ಇದ್ರಿಸ್ ಹೂಡೆ, ಕೃಷ್ಣ ಬಂಗೇರ, ಲಕ್ಷ್ಮಣ ಬೈದೂರು, ರಾಮ ಮಯ್ಯಾಡಿ, ಹರೀಶ್ ಸಲ್ಯಾನ್, ಯುವರಾಜ್ ಪುತ್ತೂರು, ವಸಂತ ಪಾದೆಬೆಟ್ಟು, ದಯಾಕರ್ ಮಲ್ಪೆ, ಮಾಧವ ಕರ್ಕೇರ, ಸಾಧು ಚಿಟ್ಪಾಡಿ, ಧನಂಜಯ, ರವಿರಾಜ್ ಲಕ್ಷ್ಮಿನಗರ, ವಿಶ್ವನಾಥ ಹಾಳೇಕಟ್ಟೆ, ಶೋಭಾ ನಾಯ್ಕ್, ಶರತ್ ಶೆಟ್ಟಿ ತೆಂಕನಿಡಿಯೂರು, ಕಮಲ್ ಮಲ್ಪೆ, ಪುಷ್ಪ ಆಂಚನ್, ಸತೀಶ್ ಕಪ್ಪೆಟ್ಟು, ಸಂತೋಷ್ ಮೂಡುಬೆಟ್ಟು, ದಾಮೋದರ ನಾಯ್ಕ, ಧನಪಾಲ್, ವಿನಯ ಕೊಡಂಕೂರು ಮುಂತಾದವರು ಭಾಗವಹಿಸಿದ್ದರು.

PREV

Recommended Stories

ಸಂಪುಟ ಪುನರ್‌ ರಚನೆ ಸುಳಿವು : ದಲಿತ ಸಚಿವರ ಸಭೆ!
ಶೂದ್ರ ಶ್ರೀನಿವಾಸ್‌ ಸೇರಿ ಐವರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ