ಜಯಂತಿಗಳು ಆಚರಣೆಗೆ ಸೀಮಿತ ಬೇಡ: ಜಿಲ್ಲಾಧಿಕಾರಿ ಶ್ರೀಧರ್ ನಿರ್ದೇಶನ

KannadaprabhaNewsNetwork |  
Published : Mar 23, 2026, 03:00 AM IST
ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಉದ್ಘಾಟಿಸಿದರು. | Kannada Prabha

ಸಾರಾಂಶ

ಏ. 5ರಂದು ಡಾ. ಬಾಬು ಜಗಜೀವನರಾಂ ಅವರ ಜಯಂತಿಯನ್ನು ಜಿಲ್ಲಾಡಳಿತದಿಂದ ಸಾಂಕೇತಿಕವಾಗಿ ಆಡಿಟೋರಿಯಂ ಹಾಲ್‌ನಲ್ಲಿ ಆಚರಿಸಲಾಗುವುದು. ಏ. 14ರಂದು ಜಿಲ್ಲಾಡಳಿತದಿಂದ ವಿವಿಧ ಸಂಘಟನೆಗಳೊಂದಿಗೆ ನಗರದ ಅಂಬೇಡ್ಕರ್ ಸಮುದಾಯ ಭವನದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಡಾ. ಬಾಬು ಜಗಜೀವನರಾಂ ಅವರ ಜಯಂತಿಯನ್ನು ಆಚರಿಸಲಾಗುವುದು.

ಗದಗ: ಮಹನೀಯರ ಜಯಂತಿಯನ್ನು ಕೇವಲ ಆಚರಣೆಗೆ ಸೀಮಿತಗೊಳಿಸದೇ, ಸಮಾಜಕ್ಕೆ ಪ್ರೇರಣೆ ನೀಡುವ ಕಾರ್ಯಕ್ರಮಗಳಾಗಿ ರೂಪಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.

ಜಿಲ್ಲಾಡಳಿತ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಂ ಅವರ ಜಯಂತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಏ. 5ರಂದು ಡಾ. ಬಾಬು ಜಗಜೀವನರಾಂ ಅವರ ಜಯಂತಿಯನ್ನು ಜಿಲ್ಲಾಡಳಿತದಿಂದ ಸಾಂಕೇತಿಕವಾಗಿ ಆಡಿಟೋರಿಯಂ ಹಾಲ್‌ನಲ್ಲಿ ಆಚರಿಸಲಾಗುವುದು. ಏ. 14ರಂದು ಜಿಲ್ಲಾಡಳಿತದಿಂದ ವಿವಿಧ ಸಂಘಟನೆಗಳೊಂದಿಗೆ ನಗರದ ಅಂಬೇಡ್ಕರ್ ಸಮುದಾಯ ಭವನದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಡಾ. ಬಾಬು ಜಗಜೀವನರಾಂ ಅವರ ಜಯಂತಿಯನ್ನು ಆಚರಿಸಲಾಗುವುದು. ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಯಾವುದೇ ಲೋಪದೋಷಗಳಿಲ್ಲದಂತೆ ಎಲ್ಲ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ, ಕಾರ್ಯಕ್ರಮ ಯಶಸ್ವಿಯಾಗುವಂತೆ ಕ್ರಮ ಕೈಗೊಳ್ಳಬೇಕು ಎಂದರು.

ಸಮಾಜದ ಮುಖಂಡರು ಹಲವು ಮಹತ್ವದ ಸಲಹೆಗಳನ್ನು ನೀಡಿದರು. ಏ. 5ರಂದು ನಡೆಯುವ ಬಾಬು ಜಗಜೀವನರಾಂ ಜಯಂತಿಯಂದು ರಕ್ತದಾನ ಶಿಬಿರವನ್ನು ಆಯೋಜಿಸುವ ಮೂಲಕ ಸಮಾಜಮುಖಿ ಕಾರ್ಯಕ್ರಮಕ್ಕೆ ಉತ್ತೇಜನ ನೀಡಬೇಕು. ಇದರಿಂದ ಯುವಜನರಲ್ಲಿ ಸಾಮಾಜಿಕ ಹೊಣೆಗಾರಿಕೆ ಮೂಡುವುದರ ಜತೆಗೆ ಅಗತ್ಯವಿರುವವರಿಗೆ ರಕ್ತ ಲಭ್ಯವಾಗಲು ಸಹಕಾರಿ ಆಗಲಿದೆ ಎಂದು ಅಭಿಪ್ರಾಯಪಟ್ಟರು.

ಇದೇ ವೇಳೆ ಜಯಂತಿ ದಿನ ಉಪನ್ಯಾಸ ಕಾರ್ಯಕ್ರಮಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಸಮಾಜದ ಗಣ್ಯರು, ಚಿಂತಕರು, ಉಪನ್ಯಾಸಕರು ತಮ್ಮ ವಿಚಾರಗಳನ್ನು ಹಂಚಿಕೊಳ್ಳಲು ಮುಂಚಿತವಾಗಿ ಅವಕಾಶ ಕಲ್ಪಿಸಬೇಕು ಎಂದು ಸಲಹೆ ನೀಡಿದರು. ಮಹನೀಯರ ಜೀವನ ಚರಿತ್ರೆ, ಸಾಧನೆಗಳು ಮತ್ತು ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ಜನರಿಗೆ ತಲುಪಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಸಭೆಯಲ್ಲಿ ಜಿಪಂ ಡಿಎಸ್ ಸಿ.ಆರ್. ಮುಂಡರಗಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಡಿವೈಎಸ್ಪಿ ಮಹಾಂತೇಶ್ ಸಜ್ಜನರ, ಸಹಾಯಕ ಆಯುಕ್ತ ಗಂಗಪ್ಪ ಎಂ., ಸಮಾಜಕಲ್ಯಾಣ ಅಧಿಕಾರಿ ಡಾ. ನಂದಾ ಹಣಬರಟ್ಟಿ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಡಾ. ಬಸವರಾಜ್ ಬಳ್ಳಾರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೂಡಿಕೆ ನೆಪದಲ್ಲಿ ಮಹಿಳೆಗೆ 11.75 ಲಕ್ಷ ರು. ವಂಚನೆ
110 ಐನ್ ಮನೆಗಳ ಅಭಿವೃದ್ಧಿಗೆ 4.50 ಕೋಟಿ ರು. ಮೀಸಲು: ಶಾಸಕ ಪೊನ್ನಣ್ಣ