12 ರಿಂದ ಡಾ.ಬಾಲಗಂಗಾಧರನಾಥ ಶ್ರೀಗಳ ಜಯಂತ್ಯುತ್ಸವ

KannadaprabhaNewsNetwork |  
Published : Jan 12, 2024, 01:45 AM IST
11ಕೆಎಂಎನ್ ಡಿ23 ಭೈರವೈಕ್ಯ ಶ್ರೀ ಡಾ.ಬಾಲಗಂಗಾಧರನಾಥ ಸ್ವಾಮೀಜಿಯವರ ಭಾವಚಿತ್ರ ಬಳಸುವುದು. | Kannada Prabha

ಸಾರಾಂಶ

ಶ್ರೀ ಕ್ಷೇತ್ರದ ಬಿಜಿಎಸ್ ಸಭಾಂಗಣದಲ್ಲಿ ಏಳು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳ ದಿವ್ಯ ಸಾನಿಧ್ಯವನ್ನು ಶ್ರೀ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ವಹಿಸುವರು.

ನಾಗಮಂಗಲ; ತಾಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಜ.12 ರಿಂದ 18 ರವರೆಗೆ ಭೈರವೈಕ್ಯ ಶ್ರೀ ಡಾ.ಬಾಲಗಂಗಾಧರನಾಥ ಸ್ವಾಮೀಜಿಯವರ 79ನೇ ಜಯಂತ್ಯುತ್ಸವ ಹಾಗೂ 11ನೇ ವರ್ಷದ ಸಂಸ್ಮರಣಾ ಮಹೋತ್ಸವ ನಡೆಯಲಿದೆ.

ಶ್ರೀ ಕ್ಷೇತ್ರದ ಬಿಜಿಎಸ್ ಸಭಾಂಗಣದಲ್ಲಿ ಏಳು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳ ದಿವ್ಯ ಸಾನಿಧ್ಯವನ್ನು ಶ್ರೀ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ವಹಿಸುವರು.

ಜ.12ರ ಬೆಳಗ್ಗೆ 10 ಗಂಟೆಗೆ ಕೃಷಿ ಮೇಳ, ವಸ್ತು ಪ್ರದರ್ಶನ ಹಾಗೂ ರೈತ ಸಂಗಮ ಸಮಾರಂಭವನ್ನು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಉದ್ಘಾಟಿಸುವರು. ಶ್ರೀ ಮಠದ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ, ಜಿಲ್ಲೆಯ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿರುವರು.

ಜ.13ರಂದು ಹೋಮ, ಹವನಾದಿ ಧಾರ್ಮಿಕ ಕಾರ್ಯಕ್ರಮಗಳು ನೆರೆವೇರಲಿದೆ. ಜ.14 ರಂದು ಯುವ ಸಂಗಮ ಕಾರ್ಯಕ್ರಮ ನಡೆಯಲಿದೆ. ರಾಜ್ಯಾದ್ಯಂತ ಆದಿಚುಂಚನಗಿರಿ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿರುವ ಯುವ ಸಮೂಹ ಸಂಗಮಗೊಳಲಿದೆ.

ಜ.15 ರಂದು ಹಿರಿಯ ವಿದ್ಯಾರ್ಥಿಗಳ ಸಂಗಮ, ಜ.16 ರಂದು ಯೋಗಿ ಜೋಗಿ ಸಂಗಮ ಕಾರ್ಯಕ್ರಮ ನಡೆಯಲಿದೆ. ಜ.17 ರಂದು ಮಾತೃ ಸಂಗಮ, ಜ.18 ರಂದು ಭೈರವೈಕ್ಯ ಶ್ರೀ ಡಾ.ಬಾಲಗಂಗಾಧರನಾಥ ಸ್ವಾಮೀಜಿಯವರ 79ನೇ ಜಯಂತ್ಯುತ್ಸವ ಹಾಗೂ 11ನೇ ವರ್ಷದ ಸಂಸ್ಮರಣಾ ಮಹೋತ್ಸವ ನಡೆಯಲಿದೆ, ನಾಡಿನ ಹಿರಿಯ ರಾಜಕಾರಣಿಗಳು ಹಾಗೂ ಗಣ್ಯರು ಭಾಗವಹಿಸಲಿದ್ದಾರೆ ಎಂದು ಶ್ರೀ ಮಠದ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಾಂತಿಗೆ ಹೆಚ್ಚಿನ ಪ್ರಾಮುಖ್ಯತೆ ಅಗತ್ಯ: ಡಾ.ಅನಿಲ್‌ ಆನಂದ್‌
ನಮ್ಮನ್ನು ನಾವು ಕಂಡುಕೊಳ್ಳುವುದೇ ಬದುಕು: ಆದಿಶ್ರೀ