ಜಯಪ್ರಕಾಶ್ ಹೆಗ್ಡೆ ಗೆಲವು ನಿಶ್ಚಿತ: ಶ್ರೀನಿವಾಸ್

KannadaprabhaNewsNetwork | Published : Mar 29, 2024 12:50 AM
ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರ ಶ್ರಮದಿಂದ ಜಯಪ್ರಕಾಶ ಹೆಗ್ಡೆ  ಗೆಲುವು ನಿಶ್ಚಿತಃ ಶಾಸಕ ಜಿ.ಹೆಚ್.ಶ್ರೀನಿವಾಸ್  | Kannada Prabha

ತರೀಕೆರೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಶಾಸಕ ಜಿ.ಹೆಚ್.ಶ್ರೀನಿವಾಸ್ ಅವರು ಮಾತನಾಡಿ, ಕಾಂಗ್ರೆಸ್‌ ಅಭ್ಯರ್ಥಿ ಜಯಪ್ರಕಾಶ್‌ ಹೆಗ್ಡೆ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ತರೀಕೆರೆ

ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರ ಶ್ರಮದಿಂದ ಪಕ್ಷದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರ ಗೆಲವು ನಿಶ್ಚಿತ ಎಂದು ಶಾಸಕ ಜಿ.ಹೆಚ್.ಶ್ರೀನಿವಾಸ್ ಹೇಳಿದ್ದಾರೆ.

ಅವರು ಗುರುವಾರ ಪಟ್ಟಣದ ಅರಮನೆ ಹೋಟೆಲ್‌ನಲ್ಲಿ ಏರಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಾ.31 ರಂದು ಪಕ್ಷದ ಅಭ್ಯರ್ಥಿ ಜಯಪ್ರಕಾಶ ಹೆಗ್ಡೆ ಅವರು ತರೀಕೆರೆಗೆ ಆಗಮಿಸಲಿದ್ದು, ಪಟ್ಟಣದ ಅರಮನೆ ಹೋಟೆಲ್ ಸಭಾಂಗಣದಲ್ಲಿ ಪಕ್ಷದ ಕಾರ್ಯಕರ್ತರ ಸಭೆಯನ್ನು ಏರ್ಪಡಿಸಲಾಗಿದೆ. ಅಂದು ಬೆಳಿಗ್ಗೆ 10 ಗಂಟೆಗೆ ಅರಮನೆ ಹೋಟೆಲ್‌ನಲ್ಲಿ ಪತ್ರಿಕಾಗೋಷ್ಠಿ ಆಯೋಜಿಸಲಾಗಿದ್ದು, ಮಧ್ಯಾಹ್ನ 2 ಗಂಟೆಗೆ ಅಜ್ಜಂಪುರದಲ್ಲಿ ಪಕ್ಷದ ಕಾರ್ಯಕರ್ತರ ಸಭೆ ಏರ್ಪಡಿಸಲಾಗಿದೆ. ಜಯಪ್ರಕಾಶ್ ಹೆಗ್ಡೆ ಅವರು ಏ.2 ರಂದು ಉಡುಪಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದರಲ್ಲದೆ, ಮಲ್ಲಿಕಾರ್ಜುನ ಖರ್ಗೆ ಅವರು ಅಂದಿನ ರೈಲ್ವೆ ಸಚಿವರಾಗಿದ್ದಾಗ ಚಿಕ್ಕಮಗಳೂರಿಗೆ ರೈಲ್ವೆ ಮಾರ್ಗ ಕಲ್ಪಿಸಿದರು ಎಂದು ಸ್ಮರಿಸಿದರು.

ಕೆ.ಪಿ.ಸಿ.ಸಿ.ಸದಸ್ಯ ಹೆಚ್.ವಿಶ್ವನಾಥ್ ಮಾತನಾಡಿ, ಜಯಪ್ರಕಾಶ್ ಹೆಗ್ಡೆ ಅವರು ಈ ಹಿಂದೆ ಸಂಸತ್ ಸದಸ್ಯರಾಗಿದ್ದಾಗ ಅಡಿಕೆ ಬೆಲೆ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ

ವಹಿಸಿದ್ದಾರೆ, ಅವರು ಗೆಲುವು ನಿಶ್ಚಿತ ಎಂದು ಅವರು ಹೇಳಿದರು.

ತರೀಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹೆಚ್.ಯು.ಫಾರೂಕ್ ಮಾತನಾಡಿ, ಮಾ.31ರ ಸಭೆಯಲ್ಲಿ ಪಕ್ಷದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರು ಸಭೆಯಲ್ಲಿ ಭಾಗವಹಿಸಲಿದ್ದು, ಮಾಜಿ ಸಭಾಪತಿ ಬಿ.ಎಲ್.ಶಂಕರ್. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಡಾ.ಅಂಶುಮಂತ್ ಮತ್ತು ಜಿಲ್ಲಾ ಮುಖಂಡರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು. ಅಜ್ಜಂಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ದಯಾನಂದ್ ಅವರು ಮಾತನಾಡಿದರು.

ಕೆ.ಪಿಸಿಸಿ.ಸದಸ್ಯರಾದ ನಟರಾಜ್, ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರಾದ ರವಿಕಿಶೋರ್, ಮುಖಂಡರಾದ ಜಿ.ರಂಗಪ್ಪ, ಕಾಂಗ್ರಸ್ ಸಮಿತಿ ನಗರಾಧ್ಯಕ್ಷರು ಟಿ.ಎಸ್.ಪ್ರಕಾಶ್ ವರ್ಮ ಮತ್ತಿತರರು ಭಾಗವಹಿಸಿದ್ದರು.