ಶೃಂಗೇರಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಸೋಮವಾರ ಶ್ರೀ ಶಾರದಾ ಪೀಠಕ್ಕೆ ಭೇಟಿ ನೀಡಿ ಶ್ರೀ ಶಾರದಾಂಬೆ ದರ್ಶನ ಪಡೆದರು.
ಬೆಳಿಗ್ಗೆ ಶ್ರೀ ಮಠಕ್ಕೆ ಆಗಮಿಸಿ ಶ್ರೀ ಶಾರದಾಂಬಾ ದೇವಾಲಯಕ್ಕೆ ತೆರಳಿ ಶ್ರೀ ಶಾರದಾಂಬೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ನಂತರ ಶ್ರೀ ಶಂಕರಾಚಾರ್ಯ, ಶ್ರೀ ತೋರಣಗಣಪತಿ, ಶ್ರೀ ವಿದ್ಯಾಶಂಕರ ದೇವಾಲಯಗಳಿಗೆ ತೆರಳಿ ದರ್ಶನ ಪಡೆದರು. ನಂತರ ಶ್ರೀ ತೋರಣಗಣಪತಿ ದೇವಾಲಯದ ಎದುರು ಈಡುಗಾಯಿ ಒಡೆದರು. ಈ ಸಂದರ್ಭದಲ್ಲಿ ಶಾಸಕ ಟಿ.ಡಿ.ರಾಜೇಗೌಡ, ಕಾಂಗ್ರೇಸ್ ಮುಖಂಡರಾದ ರವಿಶಂಕರ್, ರಮೇಶ್, ಸಂತೋಷ್, ಶ್ರೀಧರ್ ಮತ್ತಿತರರು ಇದ್ದರು.