ಜಯಪುರ ನಗರ ರಸ್ತೆ ಅಗಲೀಕರಣಕ್ಕೆ ಸಾರ್ವಜನಿಕ ಸಹಕಾರ ಅಗತ್ಯ: ಶಾಸಕ ಟಿ.ಡಿ. ರಾಜೇಗೌಡ

KannadaprabhaNewsNetwork |  
Published : Dec 27, 2023, 01:32 AM IST
ಶಾಸಕ ಟಿ.ಡಿ.ರಾಜೇಗೌಡ ಜಯಪುರ ಗಣಪತಿ ಸಮುದಾಯ ಭವನಕ್ಕೆ ಶಂಕುಸ್ಥಾಪನೆ ಹಾಗೂ ಅಂಗನವಾಡಿ ಕೇಂದ್ರ ಉದ್ಘಾಟನೆ ಮತ್ತು ಅಂಗನವಾಡಿ ಹೆಚ್ಚುವರಿ ಕಟ್ಟಡಕ್ಕೆ ಗುದ್ದಲಿ ಪೂಜೆ ಮಾಡಿದರು. | Kannada Prabha

ಸಾರಾಂಶ

ಸಾರ್ವಜನಿಕರ ಬೇಡಿಕೆಯಂತೆ ಸುಸಜ್ಜಿತ ಗಣಪತಿ ಸಮುದಾಯ ಭವನ ನಿರ್ಮಾಣಕ್ಕೆ ಸರ್ಕಾರದಿಂದ 1.25ಕೋಟಿ ಹಣ ಮಂಜೂರಾಗಿರುವ ಹಿನ್ನೆಲೆಯಲ್ಲಿ ಗುದ್ದಲಿ ಪೂಜೆ ನೆರವೇರಿಸಲಾಯಿತು ಎಂದು ಶಾಸಕ ಟಿ.ಡಿ. ರಾಜೇಗೌಡ ತಿಳಿಸಿದರು.

- ಜಯಪುರ ಗಣಪತಿ ಸಮುದಾಯ ಭವನಕ್ಕೆ ಶಂಕುಸ್ಥಾಪನೆ, ಅಂಗನವಾಡಿ ಕೇಂದ್ರ ಉದ್ಘಾಟನೆ

ಕನ್ನಡಪ್ರಭ ವಾರ್ತೆ, ಕೊಪ್ಪ

ಮೇಗುಂದಾ ಹೋಬಳಿ ಕೇಂದ್ರ ಬಿಂದು ಜಯಪುರದಲ್ಲಿ ಹಾಳಾಗಿರುವ ಗಣಪತಿ ಸಮುದಾಯ ಭವನವನ್ನು ಸುಸಜ್ಜಿತವಾಗಿ ನಿರ್ಮಾಣ ಮಾಡಲು ಸಾರ್ವಜನಿಕರು ಅನೇಕ ಸಮಯದಿಂದ ಬೇಡಿಕೆ ಇಟ್ಟಿದ್ದು, ಪ್ರಸ್ತುತ ಸರ್ಕಾರದಿಂದ 1.25ಕೋಟಿ ಹಣ ಮಂಜೂರಾಗಿರುವ ಹಿನ್ನೆಲೆಯಲ್ಲಿ ಈ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಲಾಯಿತು ಎಂದು ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ ತಿಳಿಸಿದರು.

ಜಯಪುರ ಗಣಪತಿ ಸಮುದಾಯ ಭವನಕ್ಕೆ ಶಂಕುಸ್ಥಾಪನೆ, ಅಂಗನವಾಡಿ ಕೇಂದ್ರ ಉದ್ಘಾಟನೆ ಮತ್ತು ಅಂಗನ ವಾಡಿ ಹೆಚ್ಚುವರಿ ಕಟ್ಟಡಕ್ಕೆ ಗುದ್ದಲಿ ಪೂಜೆ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಅಂಗನವಾಡಿ ಕೇಂದ್ರ ದುರಸ್ತಿಯನ್ನು 2.85 ಲಕ್ಷ ರು.ಗಳಲ್ಲಿ ಜಯಪುರ ಗ್ರಾಪಂನಿಂದ ಮಾಡಿಸಸಿದ್ದು, ಮಕ್ಕಳಿಗೆ ಅನುಕೂಲವಾಗಲಿ ಎಂದರು.

ಅಂಗನವಾಡಿಯ ಹೆಚ್ಚುವರಿ ಕಟ್ಟಡ ನಿರ್ಮಾಣಕ್ಕೆ ಶಾಸಕರ ಅನುದಾನದಿಂದ 2 ಲಕ್ಷ ಹಣ ನೀಡಲಾಗುವುದು ಎಂದರು. ಜಯಪುರ ಗ್ರಾಪಂ ವ್ಯಾಪ್ತಿಯ ಪ್ರಾಥಮಿಕ ಶಾಲೆಗಳ ದುರಸ್ತಿಗೆ 4 ಲಕ್ಷ ಹಣ ಬಿಡುಗಡೆಯಾಗಿದೆ. ಮೇಗುಂದಾ ಹೋಬಳಿ ಕೇಂದ್ರ ಬಿಂದು ಜಯಪುರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 14 ಕೋಟಿ ಬಿಡುಗಡೆಯಾಗಿದ್ದು, ಕಟ್ಟಡ ಕೆಲಸದ ಕಾಮಗಾರಿ ಪ್ರಗತಿಯಲ್ಲಿದೆ. ಆಸ್ಪತ್ರೆಯ ತಾತ್ಕಾಲಿಕ ಕಟ್ಟಡಕ್ಕೆ ಶಾಸಕರ ಅನುದಾನದಿಂದ 4 ಲಕ್ಷ ನೀಡಲಾಗಿದೆ. ಜಯಪುರ ನಗರದ ಒಳ ರಸ್ತೆಗಳ ದುರಸ್ತಿ ಕಾಮಗಾರಿ ಪ್ರಾರಂಭವಾಗಲಿದ್ದು, ನಗರದ ಮುಖ್ಯ ರಸ್ತೆ ಅಗಲೀಕರಣಕ್ಕೆ ಈಗಾಗಲೇ ಯೋಜನೆ ರೂಪು ಗೊಂಡಿದ್ದು, ರಸ್ತೆ ಅಗಲೀಕರಣಕ್ಕೆ ರಸ್ತೆಯ ಎರಡು ಬದಿಯ ಸಾರ್ವಜನಿಕರು ಸಹಕರಿಸಬೇಕೆಂದು ಮನವಿ ಮಾಡಿದರು. ಜಯಪುರ-ಅಲಗೇಶ್ವರ-ಕೋಡಿಹಿತ್ತಲು ಸಂಪರ್ಕ ರಸ್ತೆಗೆ ಈಗಾಗಲೇ ಎರಡುವರೆ ಕೋಟಿ ಮಂಜೂರಾಗಿದ್ದು, ರಸ್ತೆ ಕಾಮಗಾರಿ ಮುಗಿಸಲು ಇನ್ನೂ ಸುಮಾರು ಐದು ಕೋಟಿ ಅವಶ್ಯಕತೆ ಇದ್ದು, ಸರ್ಕಾರದಿಂದ ಭರಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ವಕ್ತಾರ ಎಚ್.ಎಂ.ನಟರಾಜ್, ಜಯಪುರ ಗ್ರಾಪಂ ಅಧ್ಯಕ್ಷ ಸಂಪತ್ ಕುಮಾರ್, ಉಪಾಧ್ಯಕ್ಷೆ ಜಯ ಮುರುಗೇಶ್, ಪಟ್ಟಣದ ಸದಸ್ಯರಾದ ಪಣಿರಾಜ್, ಅಶ್ವಿನಿ, ಚಿಕ್ಕಮಗಳೂರು ಜಿಪಂ ಮಾಜಿ ಅಧ್ಯಕ್ಷ ಎಚ್.ಎಂ.ಸತೀಶ್, ವಿ.ಎಸ್.ಎಸ್.ಎನ್ ಸೊಸೈಟಿ ಅಧ್ಯಕ್ಷ ಡಿ.ಬಿ.ರಾಜೇಂದ್ರ, ಹಿರಿಯರಾದ ಜಯವಂತ ಭಟ್, ಶಾಂತಕುಮಾರ್ ಜೈನ್, ವಜ್ರಪ್ಪ, ಸುಬ್ಬರಾಜು, ಮೋಹನ್, ರಾಮಣ್ಣ, ಕಬೀರ್, ಲಕ್ಷ್ಮಿನಾರಾಯಣ(ಮುದ್ದಣ್ಣ) ಮುಂತಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪ್ರಾಮಾಣಿಕ, ನಿಷ್ಠೆಯ ಕಾರ್ಯಕ್ಕೆ ಕಾಂಗ್ರೆಸ್‌ನಲ್ಲಿ ಉತ್ತಮ ಅವಕಾಶ: ಶಾಸಕ ಎಚ್.ಡಿ.ತಮ್ಮಯ್ಯ
ಲೀಡ್.. ಇಂದು ವಿವಿಧೆಡೆ ಎಂ.ಕೆ. ಸೋಮಶೇಖರ್ ಹುಟ್ಟುಹಬ್ಬ ಆಚರಣೆ