ಅವಿಭಜಿತ ದ.ಕ. ಜಿಲ್ಲೆಯಲ್ಲಿ ಸೌಹಾರ್ದತೆ ಹಾಗೂ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಜಯಶ್ರೀಕೃಷ್ಣ ಪರಿಸರ ಪ್ರೇಮ ಸಮಿತಿ ಪ್ರತಿ ತಾಲೂಕಿನಲ್ಲಿ 8 ರಿಂದ 10 ಮಂದಿ ಸದಸ್ಯರನ್ನು ಒಳಗೊಂಡ ಸಮಿತಿಯನ್ನು ರಚಿಸಿ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಲಿದೆ ಎಂದು ಜಯಶ್ರೀಕೃಷ್ಣ ಪರಿಸರ ಪ್ರೇಮ ಸಮಿತಿ ಸಂಸ್ಥಾಪಕ ತೋನ್ಸೆ ಜಯಕೃಷ್ಣ ಎ. ಶೆಟ್ಟಿ ತಿಳಿಸಿದರು.
ಕನ್ನಡಪ್ರಭ ವಾರ್ತೆ ಮಂಗಳೂರು
ಅವಿಭಜಿತ ದ.ಕ. ಜಿಲ್ಲೆಯಲ್ಲಿ ಸೌಹಾರ್ದತೆ ಹಾಗೂ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಜಯಶ್ರೀಕೃಷ್ಣ ಪರಿಸರ ಪ್ರೇಮ ಸಮಿತಿ ಪ್ರತಿ ತಾಲೂಕಿನಲ್ಲಿ 8 ರಿಂದ 10 ಮಂದಿ ಸದಸ್ಯರನ್ನು ಒಳಗೊಂಡ ಸಮಿತಿಯನ್ನು ರಚಿಸಿ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಲಿದೆ ಎಂದು ಜಯಶ್ರೀಕೃಷ್ಣ ಪರಿಸರ ಪ್ರೇಮ ಸಮಿತಿ ಸಂಸ್ಥಾಪಕ ತೋನ್ಸೆ ಜಯಕೃಷ್ಣ ಎ. ಶೆಟ್ಟಿ ತಿಳಿಸಿದರು.ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ತಾಲೂಕಿನಿಂದ ಸಮಾನ ಮನಸ್ಕರ 8 ರಿಂದ 10 ಮಂದಿ ಸದಸ್ಯರನ್ನು ಒಳಗೊಂಡು ಸಮಿತಿ ರಚಿಸಿ ಶಾಂತಿಗೆ ಭಂಗ ಉಂಟು ಮಾಡುವವರ ವಿರುದ್ಧ ನಿಗಾ ಇಡುವ ಜತೆಗೆ ಶಾಂತಿಗೆ ಪೂರಕವಾದ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಿದೆ. ಗೃಹ ಸಚಿವ ಜಿ. ಪರಮೇಶ್ವರ್ ಅವರಿಂದ ಅಧ್ಯಕ್ಷತೆಯಲ್ಲಿ ಮೂರು ದಿನಗಳ ಹಿಂದೆ ಸ್ಪೆಷಲ್ ಆ್ಯಕ್ಷನ್ ಪೋರ್ಸ್ (ಎಸ್‌ಎಎಫ್) ಸ್ಥಾಪನೆ ಮಾಡಿರುವ ನಿರ್ಧಾರ ಶ್ಲಾಘನೀಯವಾಗಿದ್ದು, ಇದನ್ನು ಸಮಿತಿ ಸ್ವಾಗತಿಸುವುದಾಗಿ ಹೇಳಿದರು.
ಸಮಿತಿಯ ರಾಜ್ಯ ಸಂಯೋಜಕ ಕೆ.ಪಿ. ಜಗದೀಶ್ ಅಧಿಕಾರಿ ಮಾತನಾಡಿ, ಜಿಲ್ಲೆಯಲ್ಲಿ ಕೇವಲ 20 ರಿಂದ 25 ಜನರಷ್ಟು ಕೆಲವು ವ್ಯಕ್ತಿಗಳು ಅಥವಾ ಪ್ರಮುಖರಿಂದ ಮಾತ್ರವೇ ಸೌಹಾರ್ದತೆಗೆ ಭಂಗ ಉಂಟಾಗುತ್ತಿದೆ. ನಮ್ಮ ರಾಜಕೀಯೇತರ ಸಂಘಟನೆಯ ಮೂಲಕ ಶಾಂತಿ ಸ್ಥಾಪಿಸಲು ಕ್ರಮ ವಹಿಸಲಾಗುವುದು ಎಂದು ಅವರು ಹೇಳಿದರು.ಸಮಿತಿಯ ಜಿಲ್ಲಾ ಅಧ್ಯಕ್ಷ ಹರೀಶ್ ಕುಮಾರ್ ಎಂ. ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷರಾದ ಅನುಪ್ರಕಾಶ್ ಶೆಟ್ಟಿ, ನಾಗೇಶ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿಗಳಾದ ಸುರೇಂದ್ರ ಮೆಂಡನ್, ಜಿ.ಟಿ. ಆಚಾರ್ಯ, ಸದಸ್ಯ ಶಂಕರ್ ಸುವರ್ಣ ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.