ಕನ್ನಡಪ್ರಭ ವಾರ್ತೆ ಕುಮಟಾ
ಪಟ್ಟಣದ ನಾದಶ್ರೀ ಕಲಾಕೇಂದ್ರದಲ್ಲಿ ಜಿಲ್ಲಾಮಟ್ಟದ ಪಕ್ಷದ ಪ್ರಮುಖರ ಸಭೆ ನಡೆಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘಟನಾ ಪರ್ವದ ಬಳಿಕ ಪದಗ್ರಹಣ ಸಮಾರಂಭ ಆಯೋಜಿಸಲಾಗುವುದು ಎಂದರು.
ಜೆಡಿಎಸ್ ರಜತ ಸಂಭ್ರಮ ವರ್ಷದಲ್ಲಿ ಉತ್ತರ ಕನ್ನಡ ಜಿಲ್ಲಾಧ್ಯಕ್ಷನಾಗಿ ನೇಮಕಗೊಂಡಿದ್ದು ವಿಶೇಷ. ಜಿಲ್ಲೆಯಲ್ಲಿ ಕಾರವಾರ, ಕುಮಟಾ, ಭಟ್ಕಳ, ಶಿರಸಿ, ಹಳಿಯಾಳ ಮುಂತಾದ ಕ್ಷೇತ್ರಗಳಲ್ಲಿ ಜೆಡಿಎಸ್ ಗೆಲುವಿನ ಹತ್ತಿರ ಬಂದು ಅಲ್ಪ ಅಂತರದಿಂದ ಸೋತಿದೆ ಅಷ್ಟೇ. ೨೦೨೮ರ ರಾಜ್ಯ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಗೆಲ್ಲಬೇಕು. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಗೆಲುವು ಹೆಚ್ಚಿಸಿಕೊಂಡು ಕಾರ್ಯಕರ್ತರಲ್ಲಿ ಶಕ್ತಿ ತುಂಬಬೇಕಿದೆ.ಉಳಿದಂತೆ ಜಿಲ್ಲೆಯ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಹೋರಾಟ, ಶರಾವತಿ ಪಂಪ್ಡ್ ಸ್ಟೋರೇಜ್, ಅಘನಾಶಿನಿ-ಬೇಡ್ತಿ ನದಿ ತಿರುವು ಯೋಜನೆ ಅನುಷ್ಠಾನದ ವಿರುದ್ಧ, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಹೆದ್ದಾರಿ ಸಮಸ್ಯೆಗಳ ಕುರಿತು ಹೋರಾಟ ನಡೆಸಲಾಗುವುದು. ಪರಿಸರ ಪೂರಕ ಯೋಜನೆ, ಉದ್ಯಮ ಬರಬೇಕು ಎಂಬ ನಿಟ್ಟಿನಲ್ಲಿ ಹೋರಾಡಲಿದ್ದೇವೆ. ಜಿಲ್ಲೆಯಲ್ಲಿ ಜೆಡಿಎಸ್ ಶಕ್ತಿ ತೋರಿಸುತ್ತೇವೆ. ರೈತರು, ಮೀನುಗಾರರು, ಯುವಜನತೆಯ ಸಬಲೀಕರಣಕ್ಕೆ ಕೆಲಸ ಮಾಡುತ್ತೇವೆ. ಜೆಡಿಎಸ್‌ನ್ನು ಸಮೃದ್ಧವಾಗಿ ಬೆಳೆಸಲು ಮತ್ತು ಎನ್‌ಡಿಎ ಅಧಿಕಾರಕ್ಕೆ ತರಲು ಪಕ್ಷ ಕಟ್ಟುತ್ತೇವೆ ಎಂದರು.