ಮುಂದೊಮ್ಮೆ ಜೆಡಿಎಸ್-ಬಿಜೆಪಿ ಮೈತ್ರಿ ಸರ್ಕಾರ

KannadaprabhaNewsNetwork |  
Published : Oct 30, 2024, 12:37 AM IST
29ಕೆಆರ್ ಎಂಎನ್ 10.ಜೆಪಿಜಿಚನ್ನಪಟ್ಟಣ ಕ್ಷೇತ್ರದ ವಿಠ್ಠಲೇನಹಳ್ಳಿ ಗ್ರಾಮದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಚುನಾವಣಾ ಪ್ರಚಾರ ಭಾಷಣ ಮಾಡಿದರು. | Kannada Prabha

ಸಾರಾಂಶ

ಚನ್ನಪಟ್ಟಣ: ಮುಂದೊಂದು ದಿನ ರಾಜ್ಯದಲ್ಲಿ ಜೆಡಿಎಸ್ - ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದೇ ಬರುತ್ತದೆ. ಆಗ ರಾಮನಗರ ನಗರಸಭೆಯನ್ನು ಮಹಾ ನಗರಪಾಲಿಕೆಯನ್ನಾಗಿ ಮಾಡಲಾಗುವುದು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದರು.

ಚನ್ನಪಟ್ಟಣ: ಮುಂದೊಂದು ದಿನ ರಾಜ್ಯದಲ್ಲಿ ಜೆಡಿಎಸ್ - ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದೇ ಬರುತ್ತದೆ. ಆಗ ರಾಮನಗರ ನಗರಸಭೆಯನ್ನು ಮಹಾ ನಗರಪಾಲಿಕೆಯನ್ನಾಗಿ ಮಾಡಲಾಗುವುದು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದರು.

ಚನ್ನಪಟ್ಟಣ ಕ್ಷೇತ್ರದ ವಿಠ್ಠಲೇನಹಳ್ಳಿ ಗ್ರಾಮದಲ್ಲಿ ಚುನಾವಣಾ ಪ್ರಚಾರ ಭಾಷಣ ಮಾಡಿದ ಕುಮಾರಸ್ವಾಮಿ, ಚನ್ನಪಟ್ಟಣ ಹಾಗೂ ರಾಮನಗರಗಳನ್ನು ಅವಳಿ ನಗರಗಳನ್ನಾಗಿ ಹುಬ್ಬಳ್ಳಿ - ಧಾರವಾಡದಂತೆ ಅಭಿವೃದ್ಧಿ ಮಾಡಲಾಗುವುದು. ಚನ್ನಪಟ್ಟಣ ಮಾದರಿ ವಿಧಾನಸಭೆ ಕ್ಷೇತ್ರವನ್ನಾಗಿ ರೂಪಿಸಿ ಶೈಕ್ಷಣಿಕ, ಆರ್ಥಿಕ ಹಾಗೂ ಕೈಗಾರಿಕಾ ಹಬ್ ಅನ್ನಾಗಿ ಮಾಡಲಾಗುವುದು ಎಂದರು.

ಈ ಸರ್ಕಾರದ ಆಡಳಿತದ ಬಗ್ಗೆ ಜನರು ರೋಸಿ ಹೋಗಿದ್ದಾರೆ. ಈ ಭೂಮಿಗಳನ್ನು ಲೂಟಿ ಹೊಡೆಯುವುದಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆಗೆ ಸೇರಿಸುತ್ತೇವೆ ಎಂದು ಕೆಲವರು ಹೊರಟಿದ್ದಾರೆ. ನಾವೆಲ್ಲಾ ಈ ನೆಲದ ಮಕ್ಕಳು, ಮಣ್ಣು ನಂಬಿಕೊಂಡು ಜೀವನ ಮಾಡುವವರು. ಮಣ್ಣು ಮಾರಿಕೊಂಡು ಬದುಕುವ ಜನ ನಾವಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

ವಿಠ್ಠಲೇನಹಳ್ಳಿ ಗ್ರಾಮದ ಜತೆ ಮಾಜಿ ಪ್ರಧಾನಿಗಳಾದ ದೇವೇಗೌಡರು ಹೊಂದಿರುವ ಬಾಂಧವ್ಯವನ್ನು ಸ್ಮರಿಸಿದ ಕುಮಾರಸ್ವಾಮಿ ಅವರು, ವಿಶೇಷವಾಗಿ ಗ್ರಾಮಸ್ಥರಿಗೆ ಅಭಿವಂದನೆ ಸಲ್ಲಿಸಿದರು.

ಅಲ್ಲದೆ, ಈ ಗ್ರಾಮದಿಂದ ದೇವೆಗೌಡರು ಬೆಂಗಳೂರುವರೆಗೂ ನಡೆಸಿದ ಪಾದಯಾತ್ರೆಯನ್ನು ನೆನಪು ಮಾಡಿಕೊಂಡರು.

29ಕೆಆರ್ ಎಂಎನ್ 10.ಜೆಪಿಜಿ

ಚನ್ನಪಟ್ಟಣ ಕ್ಷೇತ್ರದ ವಿಠ್ಠಲೇನಹಳ್ಳಿ ಗ್ರಾಮದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಚುನಾವಣಾ ಪ್ರಚಾರ ಭಾಷಣ ಮಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ