ಜೆಡಿಎಸ್-ಬಿಜೆಪಿ ಮೈತ್ರಿ ಧರ್ಮ ಪಾಲಿಸಲಿವೆ

KannadaprabhaNewsNetwork |  
Published : Mar 27, 2024, 01:00 AM ISTUpdated : Mar 27, 2024, 02:48 PM IST
26ಎಚ್ಎಸ್ಎನ್17 :    ಶ್ರೀಹೊಯ್ಸಳೇಶ್ವರ ದೇವಾಲಯಕ್ಕೆ ಬಿಜೆಪಿ ರಾಜ್ಯ ಚುನಾವಣೆ ಉಸ್ತುವಾರಿಗಳಾದ  ರಾಧ ಮೋಹನ್ ದಾಸ್ ಅಗರ್‌ವಾಲ್ ಕುಟುಂಬ ಮಂಗಳವಾರ ಭೇಟಿ ನೀಡಿತ್ತು. | Kannada Prabha

ಸಾರಾಂಶ

ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಎರಡೂ ಪಕ್ಷದವರು ಮೈತ್ರಿ ಧರ್ಮ ಪಾಲಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಚುನಾವಣೆ ಉಸ್ತುವಾರಿ ಡಾ.ರಾಧಮೋಹನ್ ದಾಸ್ ಅಗರ್‌ವಾಲ್ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಹಳೇಬೀಡು

ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಎರಡೂ ಪಕ್ಷದವರು ಮೈತ್ರಿ ಧರ್ಮ ಪಾಲಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಚುನಾವಣೆ ಉಸ್ತುವಾರಿ ಡಾ.ರಾಧಮೋಹನ್ ದಾಸ್ ಅಗರ್‌ವಾಲ್ ತಿಳಿಸಿದ್ದಾರೆ.

ಶ್ರೀ ಹೊಯ್ಸಳೇಶ್ವರ ದೇವಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಪಕ್ಷ ಇನ್ನು ಅಭ್ಯರ್ಥಿಗಳನ್ನುಘೋಷಣೆ ಮಾಡಿಲ್ಲ. 

ಘೋಷಣೆ ಮಾಡಿದ ತಕ್ಷಣ ಎಲ್ಲರೂ ಒಟ್ಟಾಗಿ ಕೆಲಸ ಮಾಡಿ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಮಾಡಲು ಹಗಲಿರುಳು ಶ್ರಮಿಸುತ್ತಾರೆ ಎಂದು ಹೇಳಿದರು.ಅಭ್ಯರ್ಥಿಗಳು ಘೋಷಣೆ ಆಗುವವರೆಗೂ ಆಡುವ ಮಾತುಗಳಿಗೆ ಮಹತ್ವಕೊಡಬೇಕಾಗಿಲ್ಲ. 

ಜೆಡಿಎಸ್ ಪಕ್ಷ ಯಾರನ್ನೆಅಭ್ಯರ್ಥಿ ಎಂದು ಘೋಷಿಸಿದರೂ ಬಿಜೆಪಿ ಪಕ್ಷದ ಕಾರ್ಯಕರ್ತರು ಮುಖಂಡರು ಅವರ ಗೆಲುವಿಗಾಗಿ ಶ್ರಮಿಸುತ್ತಾರೆ . ಅದೇ ರೀತಿ ಉಳಿದ ಕಡೆಗಳಲ್ಲೂ ಜೆಡಿಎಸ್ ಪಕ್ಷದವರು ಬಿಜೆಪಿ ಅಭ್ಯರ್ಥಿ ಗೆಲುವಿಗೆ ಸಂಪೂರ್ಣ ಸಹಕಾರ ಬೆಂಬಲನೀಡುವ ಭರವಸೆ ನಮಗಿದೆ ಎಂದರು.

ಮಾಜಿ ಶಾಸಕ ,ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಇದುವರೆಗೂ ಕಣಿಸಿಕೊಂಡಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರೀತಂಗೌಡರು ರಾಜ್ಯದ ಅಭಿವೃದ್ಧಿ ಮತ್ತು ದೇಶದ ಹಿತಾಸಕ್ತಿಗಾಗಿ ದುಡಿಯುವ ಮನುಷ್ಯ. ಮೋದಿ ಪ್ರಧಾನಿ ಮಾಡಲು ಕೆಲಸ ಮಾಡುತ್ತಾರೆ.

ಕರ್ನಾಟಕದಲ್ಲಿ ೨೮ ಕ್ಷೇತ್ರಗಳಲ್ಲಿ ೨೫ ಕ್ಷೇತ್ರಗಳಲ್ಲೂ ಬಿಜೆಪಿ ಮತ್ತು ೩ ಕ್ಷೇತ್ರಗಳಲ್ಲಿ ಜೆಡಿಎಸ್ ಗೆಲುವು ಸಾಧಿಸಲಿದ್ದು, ಕಾಂಗ್ರೇಸ್ ಪಕ್ಷದವರೂ ಒಂದೇ ಒಂದು ಸೀಟು ಕೂಡ ಗೆಲ್ಲಲು ಸಾಧಿಸುವುದಿಲ್ಲ ಎಂದು ತಿಳಿಸಿದರು. 

ಈ ವೇಳೆ ಶಾಸಕ ಹುಲ್ಲಳ್ಳಿ ಸುರೇಶ್, ಕೇಂದ್ರ ತೆಂಗು ಅಭಿವೃದ್ಧಿ ನಿಗಮ ಮಂಡಳಿಯ ಉಪಾಧ್ಯಕ್ಷ ರೇಣುಕುಮಾರ್, ತಾಲೂಕು ಬಿಜೆಪಿ ಅಧ್ಯಕ್ಷ ಅಡಗೂರು ಆನಂದ, ಗ್ರಾಪಂ ಅಧ್ಯಕ್ಷ ನಿತ್ಯಾನಂದ , ಮುಖಂಡರಾದ ಪರಮೇಶ್, ಪ್ರಸನ್ನ, ಶಂಕರ್‌ನಾಗ್, ರಮೇಶ್, ರಂಜಿತ್, ಮುಂತಾದವರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!