ಜೆಡಿಎಸ್ -ಬಿಜೆಪಿ ಯುಗ ಮಂಡ್ಯದಲ್ಲಿ ಆರಂಭ: ಸಿ.ಎಸ್.ಪುಟ್ಟರಾಜು

KannadaprabhaNewsNetwork |  
Published : Jun 05, 2024, 12:31 AM ISTUpdated : Jun 05, 2024, 12:50 PM IST
CS Puttaraju

ಸಾರಾಂಶ

ಇಂದಿನಿಂದ ಮಂಡ್ಯದಲ್ಲಿ ಜೆಡಿಎಸ್-ಬಿಜೆಪಿ ಹೊಸ ಯುಗ ಮಂಡ್ಯದಲ್ಲಿ ಆರಂಭವಾಗಿದೆ. ಮುಂದಿನ ದಿನಗಳಲ್ಲಿ ನಡೆಯುವ ಎಲ್ಲಾ ಚುನಾವಣೆಗಳಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. 

 ಮಂಡ್ಯ  ಜಿಲ್ಲೆಯ ಮತದಾರರು ಪ್ರಬುದ್ಧರು. ಯಾರಿಗೆ ಯಾವಾಗ ಬುದ್ಧಿ ಕಲಿಸಬೇಕೆನ್ನುವುದು ಅವರಿಗೆ ಚೆನ್ನಾಗಿ ಗೊತ್ತಿದೆ. ಇದೇ ಕಾರಣಕ್ಕೆ ಮಂಡ್ಯ ಎಂದರೆ ಇಂಡಿಯಾ ಎಂದು ಕರೆಯುವುದು ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಹೇಳಿದರು.

ಇಂದಿನಿಂದ ಮಂಡ್ಯದಲ್ಲಿ ಜೆಡಿಎಸ್-ಬಿಜೆಪಿ ಹೊಸ ಯುಗ ಮಂಡ್ಯದಲ್ಲಿ ಆರಂಭವಾಗಿದೆ. ಮುಂದಿನ ದಿನಗಳಲ್ಲಿ ನಡೆಯುವ ಎಲ್ಲಾ ಚುನಾವಣೆಗಳಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಜಾರಿಗೊಳಿಸಿದ ಹಲವು ಜನಪರ ಯೋಜನೆಗಳು, ಕಾರ್ಯಕ್ರಮಗಳು ಅವರ ಗೆಲುವಿಗೆ ಪ್ರಮುಖ ಕಾರಣವಾಗಿವೆ ಎಂದು ಎಂದು ಫಲಿತಾಂಶದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಿಳಿಸಿದರು.

ಸಂಕಷ್ಟದ ಸಂದರ್ಭದಲ್ಲಿದ್ದ ದೇವೇಗೌಡರ ಕುಟುಂಬಕ್ಕೆ ಮಂಡ್ಯ ಜನ ಶಕ್ತಿ ತುಂಬಿದ್ದಾರೆ. ಕಾಂಗ್ರೆಸ್ ಬಂಡವಾಳ ಈ ಚುನಾವಣೆಯಲ್ಲಿ ಗೊತ್ತಾಗಿದೆ. ಮುಂದಿನ ದಿನಗಳಲ್ಲಿ ಈ ಸರ್ಕಾರದ ಮುಂದುವರೆಯುವುದು ಕಷ್ಟವಿದೆ. ಮುಂದೆ ಏನೆಲ್ಲಾ ಬೆಳವಣಿಗೆಗಳು ಆಗಲಿದೆ ನೀವೇ ನೋಡುವಿರಿ ಎಂದರು.

ಸುಳ್ಳು ಭರವಸೆಗಳಿಂದ ಜನರ ಹೊಟ್ಟೆ ತುಂಬಿಸಲು ಆಗುವುದಿಲ್ಲ. ಗ್ಯಾರಂಟಿ ಯೋಜನೆಗಳಿಂದ ಜನರು ಬೇಸತ್ತಿದ್ದಾರೆ. ಉಚಿತ ಬಸ್ ಪ್ರಯಾಣದಿಂದ ಶಾಲಾ-ಕಾಲೇಜು ಮಕ್ಕಳು ಬೀದಿಯಲ್ಲಿ ನಿಲ್ಲುತ್ತಿದ್ದಾರೆ. ಎರಡು ಸಾವಿರ ರು. ಆಸೆ ತೋರಿಸಿ ಗಂಡಂದಿಂರ ಆದಾಯಕ್ಕೆ ಕತ್ತರಿ ಹಾಕಿದ್ದಾರೆ. ಎಂಪಿ ಚುನಾವಣೆ ಬಳಿಕ ಗ್ಯಾರಂಟಿ ನಿಲ್ಲಿಸುವುದು ಸರ್ಕಾರದ ಅಜೆಂಡಾ ಎಂದರು.

ಮೋದಿ ಸಂಪುಟದಲ್ಲಿ ಕುಮಾರಸ್ವಾಮಿ ಸಚಿವರಾಗುವುದು ನೂರಕ್ಕೆ ನೂರರಷ್ಟು ಸತ್ಯ. ಕೃಷಿ ಖಾತೆ ಸಿಕ್ಕಿದರೆ ಜನಪರ ಕೆಲಸ ಮಾಡಲು ಸಹಕಾರಿಯಾಗಲಿದೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚೈತ್ರ ‌ನವರಾತ್ರಿ ನಿಮಿತ್ತ ಕನ್ನಡ ಗೀತೆ ಜತೆ ಮೋದಿ ಶುಭಾಶಯ -ದಿನಕ್ಕೊಂದು ಭಾಷೆಯ ಗೀತೆ ಪೋಸ್ಟ್‌
ಸೌದೆ ಒಲೆಗೆ ಖಾನಾವಳಿ ಮೊರೆ-ಒಂದು ಕ್ವಿಂಟಲ್ ಕಟ್ಟಿಗೆಗೆ 900 ರು. ವೆಚ್ಚ