ಜೆಡಿಎಸ್, ಬಿಜೆಪಿ ನಾಯಕರಿಂದ ಧರ್ಮಸ್ಥಳ ಯಾತ್ರೆ ರಾಜಕಾರಣ: ಶಿವರಾಮೇಗೌಡ

KannadaprabhaNewsNetwork |  
Published : Sep 06, 2025, 01:00 AM IST
5ಕೆಎಂಎನ್ ಡಿ29 | Kannada Prabha

ಸಾರಾಂಶ

ಧರ್ಮಸ್ಥಳ ಪ್ರಕರಣದಲ್ಲಿ ರಾಜ್ಯದ ಜನತೆಗೆ ಏನೆಲ್ಲಾ ಸತ್ಯಾಂಶ ತಿಳಿಸಬೇಕೋ ಆ ಕೆಲಸವನ್ನು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪ್ರಾಮಾಣಿಕವಾಗಿ ಮಾಡಿದ್ದಾರೆ. ಎಸ್‌ಐಟಿ ಅಧಿಕಾರಿಗಳು ಪ್ರಾಮಾಣಿಕ ಮತ್ತು ಪಾರದರ್ಶಕವಾಗಿ ತನಿಖೆ ನಡೆಸಿ ಸತ್ಯಾಂಶವನ್ನು ಹೊರಹಾಕುವ ಕೆಲಸ ಮಾಡುತ್ತಿದ್ದಾರೆ.

ಕನ್ನಡಪ್ರಭ ವಾರ್ತೆ ನಾಗಮಂಗಲ

ಧರ್ಮಸ್ಥಳ ವಿರುದ್ಧ ಬಂದಿದ್ದ ಆರೋಪವನ್ನು ಎಸ್‌ಐಟಿ ರಚಿಸಿ ಸರ್ಕಾರ ಸತ್ಯಾಂಶ ಹೊರಹಾಕಿದ ನಂತರ ಜೆಡಿಎಸ್ ಮತ್ತು ಬಿಜೆಪಿ ನಾಯಕರು ಯಾತ್ರೆ ಮೂಲಕ ರಾಜಕಾರಣ ಮಾಡಲು ಹೋಗಿದ್ದಾರೆ ಎಂದು ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ದೂರಿದರು.

ಪಟ್ಟಣಕ್ಕೆ ಭೇಟಿ ನೀಡಿದ ವೇಳೆ ಕನ್ನಡಪ್ರಭದೊಂದಿಗೆ ಮಾತನಾಡಿದ ಶಿವರಾಮೇಗೌಡರು, ರಾಜ್ಯದಲ್ಲಿ ಈ ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ಅವಧಿಯಲ್ಲಿ ಧರ್ಮಸ್ಥಳದಲ್ಲಿ ಹಲವು ಚಿತ್ರಣಗಳು ಬಂದಿದ್ದವು. ಅಂದು ಸರ್ಕಾರ ಬಿಗಿ ಇದ್ದಿದ್ದರೆ ಈ ಎಲ್ಲಾ ಬೆಳವಣಿಗೆಗಳು ನಡೆಯುತ್ತಿರಲಿಲ್ಲ ಎಂದರು.

ಧರ್ಮಸ್ಥಳ ಪ್ರಕರಣದಲ್ಲಿ ರಾಜ್ಯದ ಜನತೆಗೆ ಏನೆಲ್ಲಾ ಸತ್ಯಾಂಶ ತಿಳಿಸಬೇಕೋ ಆ ಕೆಲಸವನ್ನು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪ್ರಾಮಾಣಿಕವಾಗಿ ಮಾಡಿದ್ದಾರೆ. ಎಸ್‌ಐಟಿ ಅಧಿಕಾರಿಗಳು ಪ್ರಾಮಾಣಿಕ ಮತ್ತು ಪಾರದರ್ಶಕವಾಗಿ ತನಿಖೆ ನಡೆಸಿ ಸತ್ಯಾಂಶವನ್ನು ಹೊರಹಾಕುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

ತನಿಖೆ ಪೂರ್ಣಗೊಂಡು ಸತ್ಯಾಸತ್ಯತೆ ಬಯಲಾದ ನಂತರ ಧರ್ಮಕ್ಷೇತ್ರದ ಹೆಸರಿಗೆ ಕಳಂಕ ತರುವ ಉದ್ದೇಶದಿಂದ ಇಲ್ಲಸಲ್ಲದ ಅಪಪ್ರಚಾರ ನಡೆಸಿ ಭಕ್ತರು ಮತ್ತು ಸಾರ್ವಜನಿಕರಿಗೆ ಸುಳ್ಳು ಮಾಹಿತಿ ನೀಡುತ್ತಿದ್ದವರಿಗೆ ತಕ್ಕ ಶಿಕ್ಷೆಯಾಗುವುದಂತೂ ನಿಶ್ಚಿತ ಎಂದರು.

ಧರ್ಮಸ್ಥಳ ಕೇವಲ ಒಂದು ಧಾರ್ಮಿಕ ಕ್ಷೇತ್ರವಾಗಿಲ್ಲ. ಗ್ರಾಮೀಣ ಪ್ರದೇಶದ ಎಲ್ಲ ವರ್ಗಗಳ ಜನಸಾಮಾನ್ಯರ ಆರ್ಥಿಕ, ಸಾಮಾಜಿಕ ಅಭಿವೃದ್ಧಿ ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರು ಬಹಳಷ್ಟು ಜನಪರ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದಾರೆ. ಇದರಿಂದ ಬಹಳಷ್ಟು ಕುಟುಂಬಗಳು ಶಾಂತಿ, ನೆಮ್ಮದಿಯ ಬದುಕು ನಡೆಸುತ್ತಿದ್ದಾರೆ ಎಂದು ಹೇಳಿದರು.

ಈ ವೇಳೆ ಮುಖಂಡರಾದ ಬಿದರಕೆರೆ ಮಂಜೇಗೌಡ, ಬಿ.ವಿ.ಸತ್ಯನ್, ತಾಪಂ ಮಾಜಿ ಸದಸ್ಯ ಚಿಣ್ಯ ಕರಿಯಣ್ಣ, ಸೋಮಶೇಖರ್ ಸೇರಿದಂತೆ ಹಲವರು ಇದ್ದರು.

-------

5ಕೆಎಂಎನ್ ಡಿ29

ನಾಗಮಂಗಲದಲ್ಲಿ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುದುರೆಗಳಲ್ಲಿ ಗ್ಲ್ಯಾಂಡರ್ಸ್ ರೋಗ ಪತ್ತೆ: ಟರ್ಫ್ ಕ್ಲಬ್‌ ಸುತ್ತ ಪ್ರಾಣಿ ಸಂಚಾರ ನಿರ್ಬಂಧ
ಮುಸ್ಲಿಮರು ಸೂರ್‍ಯನಮಸ್ಕಾರ ಮಾಡ್ಬೇಕು : ಹೊಸಬಾಳೆ ಕರೆ