ರಾಜ್ಯದಲ್ಲಿ ಜೆಡಿಎಸ್ ಬಿಜೆಪಿ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ

KannadaprabhaNewsNetwork |  
Published : Jul 21, 2026, 02:00 AM IST
19ಎಚ್ಎಸ್ಎನ್8 : ಬಾಗೂರು  ಹೋಬಳಿಯ ಕಾರೇಹಳ್ಳಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ  ಆಯೋಜಿಸಿದ ಜೆಡಿಎಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಶಾಸಕ ಸಿಎನ್ ಬಾಲಕೃಷ್ಣ ಸಮ್ಮುಖದಲ್ಲಿ  ಕಾಂಗ್ರೆಸ್ ಪಕ್ಷವನ್ನು ತೊರೆದು ಅನೇಕ ಮುಖಂಡರು ಕಾರ್ಯಕರ್ತರು ಜೆಡಿಎಸ್ ಸೇರ್ಪಡೆಗೊಂಡರು. | Kannada Prabha

ಸಾರಾಂಶ

ರಾಜ್ಯದಲ್ಲಿ ಮುಂಬರುವ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆ ಸೇರಿದಂತೆ 2028ರ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಂಘಟಿಸುವ ಸಲುವಾಗಿ ಮಾಜಿ ಪ್ರಧಾನಿಗಳಾದ ಎಚ್ ಡಿ ದೇವೇಗೌಡರ ಮಾರ್ಗದರ್ಶನದಲ್ಲಿ ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಅವರು ಹಾಗೂ ಮಾಜಿ ಸಚಿವರಾದ ಎಚ್‍ ಡಿ ರೇವಣ್ಣನವರು ಮತ್ತು ನಿಖಿಲ್ ಕುಮಾರಸ್ವಾಮಿಯವರ ನಾಯಕತ್ವದಲ್ಲಿ ರಾಜ್ಯಾದ್ಯಂತ ಪಕ್ಷ ಸಂಘಟಿಸಲಾಗುತ್ತಿದೆ. ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಸದೃಢವಾಗಿದ್ದು ಮುಂಬರುವ ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಗಳು ಜಯಗಳಿಸುವ ಮೂಲಕ ಮುಂದಿನ ರಾಜ್ಯ ವಿಧಾನಸಭಾ ಚುನಾವಣೆಗೆ ಚುನಾವಣೆ ಫಲಿತಾಂಶ ದಿಕ್ಸೂಚಿಯಾಗಲಿದೆ ಎಂದರು.

ಕನ್ನಡಪ್ರಭ ವಾರ್ತೆ ನುಗ್ಗೇಹಳ್ಳಿ

ಜೆಡಿಎಸ್ ಪಕ್ಷಕ್ಕೆ ಕಾರ್ಯಕರ್ತರೇ ಶಕ್ತಿ ಇದ್ದಂತೆ. ಕಾಂಗ್ರೆಸ್ ಆಡಳಿತಕ್ಕೆ ಬೇಸತ್ತಿರುವ ಮತದಾರರು 2028 ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಶಾಸಕ ಸಿ ಎನ್ ಬಾಲಕೃಷ್ಣ ವಿಶ್ವಾಸ ವ್ಯಕ್ತಪಡಿಸಿದ್ದರು.ಹೋಬಳಿಯ ಕಾರೇಹಳ್ಳಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆಯೋಜಿಸಿದ ಜೆಡಿಎಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ರಾಜ್ಯದಲ್ಲಿ ಮುಂಬರುವ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆ ಸೇರಿದಂತೆ 2028ರ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಂಘಟಿಸುವ ಸಲುವಾಗಿ ಮಾಜಿ ಪ್ರಧಾನಿಗಳಾದ ಎಚ್ ಡಿ ದೇವೇಗೌಡರ ಮಾರ್ಗದರ್ಶನದಲ್ಲಿ ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಅವರು ಹಾಗೂ ಮಾಜಿ ಸಚಿವರಾದ ಎಚ್‍ ಡಿ ರೇವಣ್ಣನವರು ಮತ್ತು ನಿಖಿಲ್ ಕುಮಾರಸ್ವಾಮಿಯವರ ನಾಯಕತ್ವದಲ್ಲಿ ರಾಜ್ಯಾದ್ಯಂತ ಪಕ್ಷ ಸಂಘಟಿಸಲಾಗುತ್ತಿದೆ. ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಸದೃಢವಾಗಿದ್ದು ಮುಂಬರುವ ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಗಳು ಜಯಗಳಿಸುವ ಮೂಲಕ ಮುಂದಿನ ರಾಜ್ಯ ವಿಧಾನಸಭಾ ಚುನಾವಣೆಗೆ ಚುನಾವಣೆ ಫಲಿತಾಂಶ ದಿಕ್ಸೂಚಿಯಾಗಲಿದೆ ಎಂದರು.ತಾಲೂಕಿನಲ್ಲಿ ನಲ್ಲಿ ಆಗಿರುವ ಅಭಿವೃದ್ಧಿ ಕೆಲಸಗಳು ಹಾಗೂ ಈ ಭಾಗದಲ್ಲಿ ರಸ್ತೆ ಏತ ನೀರಾವರಿ ಯೋಜನೆ ಸಹಕಾರಿ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಆಗಿರುವ ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿ ಕಾಂಗ್ರೆಸ್ ಪಕ್ಷವನ್ನು ತೊರೆದು ಈ ಭಾಗದ ಮುಖಂಡರು ಕಾರ್ಯಕರ್ತರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ ಮುಂಬರುವ ದಿನಗಳಲ್ಲೂ ಈ ಭಾಗದ ಅಭಿವೃದ್ಧಿಗೆ ಇನ್ನು ಹೆಚ್ಚಿನ ಒತ್ತು ನೀಡುವುದಾಗಿ ಭರವಸೆ ನೀಡಿದರು.

ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರುಗಳಾದ ಗಂಗಣ್ಣ, ಕುಮಾರ್ ತಿಮ್ಲಾಪುರ, ಗಂಗಾಧರ್‌ ( ಬೇಬಿ), ಪ್ಯಾರ್‌ ಬೇಗ್, ನಂಜುಡೇಗೌಡ, ಕುಮಾರ್‌, ಮಲ್ಲಣ್ಣ, ಸೇರಿದಂತೆ ಮುಂತಾದವರು ಶಾಸಕ ಬಾಲಕೃಷ್ಣ ಅವರ ಸಮ್ಮುಖದಲ್ಲಿ ಸೇರ್ಪಡೆಗೊಂಡರು.ಈ ಸಂದರ್ಭದಲ್ಲಿ ಮುಖಂಡರಾದ ನ್ಯಾಯಬೆಲೆ ಅಂಗಡಿ ಶಿವಣ್ಣ ಬಸವಣ್ಣ ಹುಮಾಯ್ ರಾಮಣ್ಣ ಪುಟ್ಟಸ್ವಾಮಿ ಕೆ ಟಿ ನಟೇಶ್ ಕೆ.ಎ. ಸತೀಶ್, ಬ್ಯಾಂಕ್ ಚಂದ್ರಣ್ಣ, ನಟೇಶ್, ಮಮ್ತಾಜ್ ಉಮಾನ್, ಗೋಪಾಲ್, ಅನಂತ್ , ಧನಂಜಯ್, ವಸಂತ್, ನಾಗೇಶ್, ದೇವರಾಜ್, ಗಣೇಶ್, ಚಟ್ನಳ್ಳಿ ನಾಗೇಶ್, ಸುರೇಶ, ಬೆಳ್ಳಿಯಪ್ಪ, ರೇವಣ್ಣ , ಚೆನ್ನೆನಹಳ್ಳಿ ಸಿ ಜಿ ಕುಮಾರ್, ಧನಂಜಯ್, ಗೋಪಾಲ್, ನಾಗೇಶ್, ಕಾಂತರಾಜ್, ಉಮಾ ಹಿನ್, ನ್ಯಾಯ ಬೆಲೆ ಅಂಗಡಿ ಜಗದೀಶ್, ಪುನೀತ್, ಲೋಹಿತ್, ರಕ್ಷಿತ್, ಸುತ್ತಮುತ್ತಲಿನ ಗ್ರಾಮಸ್ಥರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಖೋಟಾ ನೋಟು ಮುದ್ರಿಸುತ್ತಿದ್ದ ಇಬ್ಬರ ಸೆರೆ: 338 ನೋಟು ಜಪ್ತಿ
337 ಕೋಟಿ ರು.ಕ್ರಿಪ್ಟೋ ಅಕ್ರಮ: ಇ.ಡಿ. ತಲಾಶ್