ನಾಳೆ ಜೆಡಿಎಸ್ ಧರ್ಮಸ್ಥಳ ಸತ್ಯ ಯಾತ್ರೆ

KannadaprabhaNewsNetwork |  
Published : Aug 30, 2025, 01:00 AM IST

ಸಾರಾಂಶ

ಜಿಲ್ಲೆ ಸೇರಿದಂತೆ ನೆರೆ ಜಿಲ್ಲೆಗಳಿಂದ ಸುಮಾರು ೫ರಿಂದ ೬ ಸಾವಿರ ಜೆಡಿಎಸ್ ಕಾರ್ಯಕರ್ತರು ಹಾಗೂ ಮುಖಂಡರು ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು. ನಗರದ ಹೊರವಲಯದ ಕಂದಲಿ ಗ್ರಾಮದ ಯಗಚಿ ಇನ್‌ಸ್ಟಿಟ್ಯೂಟ್ ಆವರಣದಲ್ಲಿ ಉಪಹಾರ ವ್ಯವಸ್ಥೆ ಮಾಡಲಾಗಿದ್ದು, ಅಲ್ಲಿಂದ ಪ್ರತ್ಯೇಕ ವಾಹನಗಳಲ್ಲಿ ಧರ್ಮಸ್ಥಳಕ್ಕೆ ತೆರಳಲಾಗುವುದು. ವೀರೇಂದ್ರ ಹೆಗ್ಗಡೆ ಅವರಿಗೆ ಬೆಂಬಲ ಸೂಚಿಸಲು ಈ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರ ನಿರ್ದೇಶನದಂತೆ ಆಗಸ್ಟ್ ೩೧ರ ಭಾನುವಾರ ಜೆಡಿಎಸ್ ಪಕ್ಷದ ವತಿಯಿಂದ ಧರ್ಮಸ್ಥಳ ಸತ್ಯ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಮತ್ತು ಶಾಸಕ ಸ್ವರೂಪ ಪ್ರಕಾಶ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆ ಸೇರಿದಂತೆ ನೆರೆ ಜಿಲ್ಲೆಗಳಿಂದ ಸುಮಾರು ೫ರಿಂದ ೬ ಸಾವಿರ ಜೆಡಿಎಸ್ ಕಾರ್ಯಕರ್ತರು ಹಾಗೂ ಮುಖಂಡರು ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು. ನಗರದ ಹೊರವಲಯದ ಕಂದಲಿ ಗ್ರಾಮದ ಯಗಚಿ ಇನ್‌ಸ್ಟಿಟ್ಯೂಟ್ ಆವರಣದಲ್ಲಿ ಉಪಹಾರ ವ್ಯವಸ್ಥೆ ಮಾಡಲಾಗಿದ್ದು, ಅಲ್ಲಿಂದ ಪ್ರತ್ಯೇಕ ವಾಹನಗಳಲ್ಲಿ ಧರ್ಮಸ್ಥಳಕ್ಕೆ ತೆರಳಲಾಗುವುದು ಎಂದರು. ಧರ್ಮಸ್ಥಳ ಕ್ಷೇತ್ರಕ್ಕೆ ಕಪ್ಪು ಚುಕ್ಕಿ ತರುವ ಕಾರ್ಯಗಳ ವಿರುದ್ಧ ಹಾಗೂ ವೀರೇಂದ್ರ ಹೆಗ್ಗಡೆ ಅವರಿಗೆ ಬೆಂಬಲ ಸೂಚಿಸಲು ಈ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದರು. ಧರ್ಮಸ್ಥಳ ಕ್ಷೇತ್ರವು ಗ್ರಾಮೀಣಾಭಿವೃದ್ಧಿಗೆ ಅಪಾರ ನೆರವು ನೀಡಿದೆ. ಹೈನುಗಾರಿಕೆ, ದೇವಸ್ಥಾನ ಅಭಿವೃದ್ಧಿ ಹಾಗೂ ಅತಿವೃಷ್ಠಿ ಸಂದರ್ಭಗಳಲ್ಲಿ ಸರ್ಕಾರಕ್ಕೆ ೨೫ ಕೋಟಿ ರುಪಾಯಿ ವರೆಗೆ ಧನಸಹಾಯ ನೀಡಿದೆ. ಇಂತಹ ಸೇವಾ ಕ್ಷೇತ್ರದ ವಿರುದ್ಧ ಅಪಪ್ರಚಾರ ನಡೆಸಿದವರಿಗೆ ತಕ್ಕ ಶಿಕ್ಷೆ ಆಗಲಿದೆ. ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಧರ್ಮಯಾತ್ರೆಯನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು. ಆಗಸ್ಟ್ ೩೧ರಂದು ಬೆಳಿಗ್ಗೆ ೭ ಗಂಟೆಗೆ ಬಿಳಿ ವಸ್ತ್ರ ಧರಿಸಿ ನಗರಕ್ಕೆ ಬರಬೇಕು. ಉಪಹಾರದ ನಂತರ ಯಾತ್ರೆ ಹೊರಡಲಿದೆ. ವಾಹನಗಳ ಆರ್.ಸಿ. ಮತ್ತು ಡಿ.ಎಲ್. ದಾಖಲೆ ವಾಹನಗಳ ಜೊತೆಗೆ ತರಬೇಕು. ನೇತ್ರಾವತಿ ಬಳಿ ವಾಹನದ ನಿಲುಗಡೆಗೆ ಅವಕಾಶ ಇರುತ್ತದೆ. ಮಧ್ಯಾಹ್ನ ೧ ಗಂಟೆಗೆ ಅಮೃತವರ್ಷಿಣಿ ಸಭಾಂಗಣದಲ್ಲಿ ಕಾರ್ಯಕ್ರಮ ಜರುಗಲಿದೆ. ನಂತರ ಶ್ರೀ ಮಂಜುನಾಥ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ ವಾಪಸ್ ನಗರಕ್ಕೆ ಬರುವುದಾಗಿ ಹೇಳಿದರು.

PREV

Recommended Stories

ಜಿಎಸ್ಟಿ ಸ್ಲ್ಯಾಬ್‌ ಕಡಿತದಿಂದ 2.5 ಲಕ್ಷ ಕೋಟಿ ರು. ನಷ್ಟ
ಯುದ್ಧಪೀಡಿತ ಉಕ್ರೇನಿಯರಿಗೆ ಆರ್ಟ್ ಆಫ್ ಲಿವಿಂಗ್ ಆಸರೆ