ಡಿಎಫ್‌ಒ ಕಚೇರಿ ಎದುರು ಜೆಡಿಎಸ್ ಪ್ರತಿಭಟನೆ

KannadaprabhaNewsNetwork |  
Published : Feb 22, 2025, 12:47 AM IST
ಅರಣ್ಯ ಇಲಾಖೆ ವತಿಯಿಂದ ರೈತರನ್ನು ಒಕ್ಕಲೆಬ್ಬಿಸುವುದನ್ನು ವಿರೋಧಿಸಿ ಭದ್ರಾವತಿಯಲ್ಲಿ ಜಾತ್ಯತೀತ ಜನತಾದಳ ತಾಲೂಕು ಶಾಖೆ ವತಿಯಿಂದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ ಮುಂಭಾಗ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು. | Kannada Prabha

ಸಾರಾಂಶ

ಭದ್ರಾವತಿ: ಅರಣ್ಯ ಇಲಾಖೆಯಿಂದ ರೈತರನ್ನು ಒಕ್ಕಲೆಬ್ಬಿಸುವುದನ್ನು ವಿರೋಧಿಸಿ ಜೆಡಿಎಸ್‌ ತಾಲೂಕು ಶಾಖೆ ವತಿಯಿಂದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ಭದ್ರಾವತಿ: ಅರಣ್ಯ ಇಲಾಖೆಯಿಂದ ರೈತರನ್ನು ಒಕ್ಕಲೆಬ್ಬಿಸುವುದನ್ನು ವಿರೋಧಿಸಿ ಜೆಡಿಎಸ್‌ ತಾಲೂಕು ಶಾಖೆ ವತಿಯಿಂದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ತಾಲೂಕಿನ ರೈತರು ಕಳೆದ ಸುಮಾರು ೫೦-೬೦ ವರ್ಷಗಳಿಂದ ಎಲ್ಲಾ ದಾಖಲೆಗಳನ್ನು ಹೊಂದಿ ಸಾಗುವಳಿ ಮಾಡಿಕೊಂಡು ಬರುತ್ತಿದ್ದು, ಇದೀಗ ಅರಣ್ಯ ಇಲಾಖೆಯವರು ನೋಟಿಸ್ ನೀಡುವ ಮೂಲಕ ವಿನಾಕಾರಣ ಉಪವಿಭಾಗೀಯ ದಂಡಾಧಿಕಾರಿಗಳ ನ್ಯಾಯಾಲಯಕ್ಕೆ ಅಲೆದಾಡುವಂತೆ ಮಾಡಿದ್ದು, ಇದರಿಂದ ರೈತರು ಆತಂಕಗೊಂಡಿದ್ದಾರೆ. ತಕ್ಷಣ ರೈತರಿಗೆ ನೀಡಿರುವ ನೋಟಿಸ್ ಹಿಂಪಡೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಸರ್ವೋಚ್ಚ ನ್ಯಾಯಾಲಯವೇ ರೈತರಿಗೆ ಯಾವುದೇ ತೊಂದರೆ ಕೊಡಬಾರದು ಎಂದು ಹೇಳಿದೆ. ಹೀಗಿರುವಾಗ ೫೦ ವರ್ಷಗಳಿಂದ ಸುಮ್ಮನೆ ಇದ್ದು, ಇದೀಗ ಏಕಾಏಕಿ ನೋಟಿಸ್ ನೀಡುವ ಮೂಲಕ ಒಕ್ಕಲೆಬ್ಬಿಸಲು ಯತ್ನಿಸುತ್ತಿರುವುದು ಸರಿಯಲ್ಲ. ಅರಣ್ಯ ಮತ್ತು ಕಂದಾಯ ಇಲಾಖೆಗಳ ಜಾಣ ಕುರುಡುತನಕ್ಕೆ ರೈತರೇ ತಕ್ಕ ಪಾಠ ಕಲಿಸಲಿದ್ದಾರೆ. ಅಧಿಕಾರಿಗಳು ತಕ್ಷಣ ಎಚ್ಚೆತ್ತುಕೊಂಡು ರೈತರಿಗೆ ನೀಡಿರುವ ನೋಟಿಸ್ ಹಿಂಪಡೆದು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.ಪ್ರತಿಭಟನೆಯಲ್ಲಿ ಪ್ರಮುಖರಾದ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದ ಅಪ್ಪಾಜಿ, ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕಿ ಶಾರದ ಪೂರ್‍ಯಾನಾಯ್ಕ, ಪಕ್ಷದ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಗೀತಾ ಸತೀಶ್, ನಗರ ಅಧ್ಯಕ್ಷ ಆರ್.ಕರುಣಾಮೂರ್ತಿ, ಗ್ರಾಮಾಂತರ ಅಧ್ಯಕ್ಷ ಧರ್ಮಕುಮಾರ್, ಮುಖಂಡರಾದ ಟಿ.ಚಂದ್ರೇಗೌಡ, ಸುರೇಶ್, ಜಯರಾಮ್, ಡಿ.ಆನಂದ್, ಎಂ.ಎ.ಅಜಿತ್, ಗೊಂದಿ ಜಯರಾಮ್ ಸೇರಿದಂತೆ ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು, ರೈತರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನುವಾದಕರು ಸಾಂಸ್ಕೃತಿಕ ರಾಯಭಾರಿಗಳಿದ್ದಂತೆ:ಎಸ್.ಜಿ.ಎಸ್‌
9.5 ಲಕ್ಷ ಲಂಚ ಪಡೆದ ಕೇಂದ್ರ ವಿದ್ಯುತ್‌ಸಂಸ್ಥೆ ಜಂಟಿ ನಿರ್ದೇಶಕ ಸಿಬಿಐ ಬಲೆಗೆ