ಇಂದು ನಗರದಲ್ಲಿ ಜೆಡಿಎಸ್‌ ಬೃಹತ್ ಸಮಾವೇಶ

KannadaprabhaNewsNetwork |  
Published : Feb 27, 2026, 03:30 AM IST
ಇಂದು ನಗರದಲ್ಲಿ ಮೇಳೈಸಲಿದೆ ಜೆಡಿಎಸ್‌ ಬೃಹತ್ ಸಮಾವೇಶ | Kannada Prabha

ಸಾರಾಂಶ

ಹಳೆ ಮೈಸೂರು ಭಾಗದಲ್ಲಿ ಈಗಾಗಲೇ ಬೆಳ್ಳಿ ಹಬ್ಬದ ಸಂಭ್ರಮ ಆಚರಣೆ ಮಾಡಿಕೊಂಡಿರುವ ಜಾತ್ಯತೀತ ಜನತಾದಳವು ಈಗ ಕಿತ್ತೂರು ಕರ್ನಾಟಕ ಭಾಗದ ವಿಜಯಪುರದಲ್ಲಿ ಫೆ.27ರಂದು ಜನತಾ ಸಮಾವೇಶಕ್ಕೆ ಅಣಿಗೊಂಡಿದೆ. ಮುಂಬರಲಿರುವ ಸ್ಥಳೀಯ ಸಂಸ್ಥೆಯ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್‌ಗೆ 25 ವರ್ಷ ಸಂದಿರುವ ಹಿನ್ನೆಲೆಯಲ್ಲಿ ಬೆಳ್ಳಿ ಹಬ್ಬದ ಕಾರ್ಯಕ್ರಮ ಹೆಸರಿನಲ್ಲಿ ಕಿತ್ತೂರು ಕರ್ನಾಟಕ ಭಾಗದಲ್ಲಿ ಜನತಾ ಸಮಾವೇಶಕ್ಕೆ ಮುಂದಾಗಿದೆ.

ಕನ್ನಡಪ್ರಭ ವಾರ್ತೆ ವಿಜಯಪುರ

ಹಳೆ ಮೈಸೂರು ಭಾಗದಲ್ಲಿ ಈಗಾಗಲೇ ಬೆಳ್ಳಿ ಹಬ್ಬದ ಸಂಭ್ರಮ ಆಚರಣೆ ಮಾಡಿಕೊಂಡಿರುವ ಜಾತ್ಯತೀತ ಜನತಾದಳವು ಈಗ ಕಿತ್ತೂರು ಕರ್ನಾಟಕ ಭಾಗದ ವಿಜಯಪುರದಲ್ಲಿ ಫೆ.27ರಂದು ಜನತಾ ಸಮಾವೇಶಕ್ಕೆ ಅಣಿಗೊಂಡಿದೆ. ಮುಂಬರಲಿರುವ ಸ್ಥಳೀಯ ಸಂಸ್ಥೆಯ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್‌ಗೆ 25 ವರ್ಷ ಸಂದಿರುವ ಹಿನ್ನೆಲೆಯಲ್ಲಿ ಬೆಳ್ಳಿ ಹಬ್ಬದ ಕಾರ್ಯಕ್ರಮ ಹೆಸರಿನಲ್ಲಿ ಕಿತ್ತೂರು ಕರ್ನಾಟಕ ಭಾಗದಲ್ಲಿ ಜನತಾ ಸಮಾವೇಶಕ್ಕೆ ಮುಂದಾಗಿದೆ.

ವಿಜಯಪುರದ ನಗರ ಹೊರವಲಯದಲ್ಲಿರುವ ಸಿಂದಗಿ ಬೈಪಾಸ್ ಬಳಿ ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ಆಯೋಜನೆಗೊಂಡಿದ್ದು, ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಎಚ್‌.ಡಿ.ದೇವೇಗೌಡ, ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ ಕುಮಾರಸ್ವಾಮಿ, ಜೆಡಿಎಸ್ ಕೋರ್‌ಕಮಿಟಿ ಅಧ್ಯಕ್ಷ ಎಂ.ಕೃಷ್ಣಾರೆಡ್ಡಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶಬಾಬು, ದೇವರಹಿಪ್ಪರಿಗೆ ಶಾಸಕ ರಾಜುಗೌಡ ಪಾಟೀಲ ಸೇರಿದಂತೆ ಪಕ್ಷದ ಎಲ್ಲ ಹಿರಿಯ ನಾಯಕರು, ಕಿತ್ತೂರು ಕರ್ನಾಟಕದ ಪ್ರಮುಖರು ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಜೊತೆಗೆ ಪಕ್ಷದ ಸಂಸದರು, ಮಾಜಿ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾಧ್ಯಕ್ಷರು ಸೇರಿದಂತೆ ಕಿತ್ತೂರು ಕರ್ನಾಟಕದ ಎಲ್ಲಾ ಜಿಲ್ಲೆಗಳಿಂದ ಅಸಂಖ್ಯಾತ ಕಾರ್ಯಕರ್ತರು, ಮುಖಂಡರು ಸೇರಿದಂತೆ ಅಂದಾಜು 2 ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ.ಜೆಡಿಎಸ್ ಪಕ್ಷ ಸ್ಥಾಪನೆಯಾಗಿ 25 ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಕಿತ್ತೂರು ಕರ್ನಾಟಕ ಭಾಗದಲ್ಲಿ ಜನತಾ ಸಮಾವೇಶದ ಬೆಳ್ಳಿಹಬ್ಬ ಆಚರಿಸಲಾಗುತ್ತಿದೆ. ವಿಜಯಪುರ, ಬಾಗಲಕೋಟೆ, ಬೆಳಗಾವಿ ಸೇರಿದಂತೆ ಕಿತ್ತೂರು ಕರ್ನಾಟಕ ಭಾಗದ ಜಿಲ್ಲೆಗಳಿಂದ ಕಾರ್ಯಕರ್ತರು ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಸಮಾವೇಶದಲ್ಲಿ ಅಂದಾಜು ಸುಮಾರು 2 ಲಕ್ಷ ಜನ ಸೇರಲಿದ್ದಾರೆ ಎಂದು ಪಕ್ಷದ ರಾಜ್ಯಾಧ್ಯಕ್ಷರು ಆಗಿರುವ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವುದು, ನಿಖಿಲ ಕುಮಾರಸ್ವಾಮಿ ಅವರು ಈಗಾಗಲೇ ಅರವತ್ತು ಕ್ಷೇತ್ರಗಳಲ್ಲಿ ಜನರೊಂದಿಗೆ ಜನತಾದಳ ಅಭಿಯಾನ ನಡೆಸಿ ಸದಸ್ಯತ್ವ ನೋಂದಣಿಗೆ ದೊಡ್ಡ ಪ್ರಮಾಣದಲ್ಲಿ ಚಾಲನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪಕ್ಷವನ್ನು ತಳಮಟ್ಟದಿಂದ ಬಲಿಷ್ಠಗೊಳಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.ರಾಜ್ಯದ ಎಲ್ಲ ಭಾಗದಲ್ಲಿಯೂ ಸಂಘಟನೆಯನ್ನು ಗಟ್ಟಿ ಮಾಡುವುದು ನಮ್ಮ ಉದ್ದೇಶ. ಮುಖ್ಯವಾಗಿ ಕಿತ್ತೂರು ಭಾಗಕ್ಕೂ ನಮ್ಮ ಪಕ್ಷಕ್ಕೂ ಅವಿನಾಭಾವ ಸಂಬಂಧ ಇದೆ. ವಿಶೇಷವಾಗಿ ದೇವೇಗೌಡರಿಗೆ ಈ ಭಾಗದ ಜತೆ ಕರುಳಬಳ್ಳಿಯ ಬಾಂಧವ್ಯ ಇದೆ. ಕೃಷ್ಣ ಮೇಲ್ದಂಡೆ ಯೋಜನೆ ಸಾಕಾರದಲ್ಲಿ ಅವರ ಪಾತ್ರ ಬಹಳ ದೊಡ್ಡದು.

- ಎಚ್.ಡಿ. ಕುಮಾರಸ್ವಾಮಿ, ಕೇಂದ್ರ ಸಚಿವರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಳೆರಾಜೇಂದ್ರಸ್ವಾಮಿ ವೈಭವದ ಮಹಾರಥೋತ್ಸವ
ಕಾಮಗಾರಿ ಅಪೂರ್ಣಕ್ಕೆ ಸಿಡಿದೆದ್ದ ನಾಗರಿಕರು