- ''''''''ಜನರೊಂದಿಗೆ ಜನತಾದಳ'''''''' ಸಮಾವೇಶ ಆಯೋಜನೆ: ಮಾಜಿ ಶಾಸಕ ಶಿವಶಂಕರ್ ಮಾಹಿತಿ
- - -ಕನ್ನಡಪ್ರಭ ವಾರ್ತೆ ಹರಿಹರ
ಜೆಡಿಎಸ್ ರಾಜ್ಯ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆ.೧೨ರಂದು ಜೆಡಿಎಸ್ ಬಲಪಡಿಸುವ ನಿಟ್ಟಿನಲ್ಲಿ ''ಜನರೊಂದಿಗೆ ಜನತಾದಳ'' ಸಮಾವೇಶ ಕಾರ್ಯಕ್ರಮಕ್ಕಾಗಿ ಹರಿಹರಕ್ಕೆ ಆಗಮಿಸಲಿದ್ದಾರೆ ಎಂದು ಮಾಜಿ ಶಾಸಕ ಎಚ್.ಎಸ್. ಶಿವಶಂಕರ್ ಹೇಳಿದರು.ನಗರದ ಜೆಡಿಎಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಸಮಾವೇಶವನ್ನು ಆ.೧೨ರಂದು ಬೆಳಗ್ಗೆ ೧೧ ಗಂಟೆಗೆ ನಗರದ ಹಳೇ ಪಿ.ಬಿ. ರಸ್ತೆಯ ಭಾಗೀರಥಿ ಕನ್ವೆನ್ಷನ್ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ. ಜೆಡಿಎಸ್ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ತರುವ ಸಲುವಾಗಿ ನಿಖಿಲ್ ಕುಮಾರಸ್ವಾಮಿ ಈ ಸಮಾವೇಶ ಆಯೋಜಿಸಿದ್ದಾರೆ ಎಂದರು.
ಬೆಳಗ್ಗೆ ೧೦ ಗಂಟೆಗೆ ಬೆಂಗಳೂರಿನಿಂದ ಆಗಮಿಸಲಿರುವ ನಿಖಿಲ್ ಕುಮಾರಸ್ವಾಮಿ ಅವರನ್ನು ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಸಮೀಪದಲ್ಲಿ ಸ್ವಾಗತಿಸಿ, ಬೈಕ್ ರ‍್ಯಾಲಿ ಮೂಲಕ ಮೆರವಣಿಗೆ ಹೊರಟು, ಶ್ರೀ ಹರಿಹರೇಶ್ವರ ಸ್ವಾಮಿ ಸನ್ನಿಧಾನಕ್ಕೆ ಕರೆತರಲಾಗುವುದು. ಕ್ಷೇತ್ರನಾಥ ಶ್ರೀ ಹರಿಹರೇಶ್ವರ ಸ್ವಾಮಿಗೆ ಪೂಜಿ ಸಲ್ಲಿಸಿದ ನಂತರ ನಿಖಿಲ್ ಕುಮಾರಸ್ವಾಮಿ ಅವರನ್ನು ತೆರೆದ ವಾಹನದಲ್ಲಿ ಬೃಹತ್ ಮೆರವಣಿಗೆ ನಡೆಸಲಾಗುವುದು. ಬಳಿಕ ನಗರದ ಭಾಗೀರಥಿ ಕನ್ವೆನ್ಷನ್ ಹಾಲ್ ವೇದಿಕೆಗೆ ಆಗಮಿಸಲಾಗುವುದು ಎಂದರು.ಕಾರ್ಯಕ್ರಮದಲ್ಲಿ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಸಚಿವ ವೆಂಕಟರಾಮ್ ನಾಡಗೌಡ, ಮಾಜಿ ಸಚಿವರಾದ ಬಂಡೆಪ್ಪ ಕಾಶಪ್ಪನವರ್, ಅಲ್ಕೋಡ್ ಹನುಮಂತಪ್ಪ, ಶಾಸಕರಾದ ಶಾರದ ಪೂರ್ಯಾನಾಯ್ಕ್, ನೇಮಿರಾಜ್ ನಾಯ್ಕ್, ಭೋಜೆಗೌಡ, ಮಾಜಿ ಎಂ.ಎಲ್.ಎ.ಗಳಾದ ರಾಜಾ ವೆಂಕಟಪ್ಪ ನಾಯ್ಕ್, ಪಾವಗಡ ತಿಮ್ಮರಾಯಪ್ಪ, ಮಾಜಿ ಎಂ.ಎಲ್.ಸಿ.ಗಳಾದ ಚೌಡರಡ್ಡಿ, ಶಿವಮೊಗ್ಗ ಪ್ರಸನ್ನ ಕುಮಾರ್, ದಾವಣಗೆರೆ ಜಿಲ್ಲಾಧ್ಯಕ್ಷ ಬಿ.ಚಿದಾನಂದಪ್ಪ, ತುಮಕೂರು ಜಿಲ್ಲಾಧ್ಯಕ್ಷ ಆಂಜನಪ್ಪ, ಚಿತ್ರದುರ್ಗ ಜಿಲ್ಲಾಧ್ಯಕ್ಷ ಜಯಣ್ಣ, ಮಾಯಕೊಂಡ ಆನಂದಪ್ಪ, ಹರಿಹರ ತಾಲೂಕಿನ ಅಧ್ಯಕ್ಷ ಪರಮೇಶ್ವರಪ್ಪ ಹರಳಹಳ್ಳಿ ಭಾಗವಹಿಸುವರು ಎಂದರು.
ದಾವಣಗೆರೆ ಉತ್ತರ ಅಧ್ಯಕ್ಷ ಬಾತಿ ಶಂಕರ್, ದಕ್ಷಿಣ ಅಜ್ಗರ್ ಅಲಿ, ಮಾಯಕೊಂಡ ಗಂಗಾಧರಪ್ಪ, ಜಗಳೂರು ಸಿದ್ದೇಶ್, ನ್ಯಾಮತಿ ವಿಜಯ ನಾಯ್ಕ, ದಾವಣಗೆರೆ ಮುಖಂಡರಾದ ಅಮಾನುಲ್ಲಾ ಖಾನ್, ಗಣೇಶ್ ದಾಸಕರಿಯಪ್ಪ, ಮಹಿಳಾ ಜಿಲ್ಲಾ ಘಟಕದ ಅಧ್ಯಕ್ಷೆ ಗಾಯಿತ್ರಮ್ಮ ಸೇರಿದಂತೆ ಹಲವಾರು ಮುಖಂಡರು ಭಾಗವಹಿಸಲಿರುವ ಈ ಕಾರ್ಯಕ್ರಮಕ್ಕೆ ತಾಲೂಕಿನ ಜೆಡಿಎಸ್ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಪಾಲ್ಗೊಂಡು ಅಂದು ನಡೆಯುವಂತ ವಿಚಾರಗಳ ಸಂದೇಶಗಳನ್ನು ಮನೆ ಮನೆಗೆ ತಲುಪವ ನಿಟ್ಟಿನಲ್ಲಿ ಯಶಸ್ವಿಯಾಗಿಸಲು ಕೋರಿದರು.ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಚಿದಾನಂದಪ್ಪ, ನಗರಸಭೆ ಅಧ್ಯಕ್ಷೆ ಕವಿತಾ ಮಾರುತಿ ಬೇಡರ್, ಸದಸ್ಯರಾದ ಜಂಬಣ್ಣ ಗುತ್ತೂರು, ಆರ್.ಸಿ. ಜಾವೇದ್, ಬಿ.ಅಲ್ತಾಫ್, ಮುಖಂಡರಾದ ಸಿರಿಗೆರಿ ಪರಮೇಶ್ವರ ಗೌಡ, ದುರಗೋಜಿ ಮೋಹನ ಇತರರು ಇದ್ದರು.
- - -(ಬಾಕ್ಸ್) * ಪಂಚಾಯಿತಿ ಚುನಾವಣೆಗೆ ಜೆಡಿಎಸ್ ಸಜ್ಜು ಗುರಿ
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ್ ಸ್ವಾಮಿ ಅವರು ನಾಡಿನ ಜನತೆ ಒಳಿತಿಗಾಗಿ ಹಲವಾರು ಯೋಜನೆಗಳನ್ನು ರೂಪಿಸಿ, ಆ ಮೂಲಕ ರಾಜ್ಯಾದ್ಯಂತ ಉತ್ತಮ ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಜನ್ನಮನ್ನಣೆ ಗಳಿಸಿದರು. ಅವರು ನೀಡಿದ ಕೊಡುಗೆಗಳು ಸ್ಮರಣೀಯ. ಆದ್ದರಿಂದ ಮುಂಬರುವ ದಿನಗಳಲ್ಲಿ ಜಿಪಂ, ತಾಪಂ, ಗ್ರಾಪಂ ಚುನಾವಣೆಗೆ ಸಜ್ಜುಗೊಳಿಸುವ ಗುರಿ ಪಕ್ಷ ಹೊಂದಿದೆ ಎಂದು ಶಿವಶಂಕರ್ ಹೇಳಿದರು. ನಿಖಿಲ್ ಕುಮಾರಸ್ವಾಮಿ ಅವರು ಈಗಾಗಲೇ ೨೦ಕ್ಕೂ ಹೆಚ್ಚು ಜಿಲ್ಲಾಮಟ್ಟ, ತಾಲೂಕು ಮಟ್ಟದಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರ ನೇತೃತ್ವದಲ್ಲಿ ಸಭೆ, ಸಮಾರಂಭ ಆಯೋಜಿಸಿದ್ದಾರೆ. ಆ ಮೂಲಕ ಪಕ್ಷದ ಬಲವರ್ಧನೆಗೆ ಮುಂದಾಗಿದ್ದಾರೆ ಎಂದು ಹೇಳಿದರು.- - -
-08ಎಚ್‌ಆರ್‌ಆರ್03:ಹರಿಹರ ಜೆಡಿಎಸ್ ಕಚೇರಿಯಲ್ಲಿ ಮಾಜಿ ಶಾಸಕ ಎಚ್.ಎಸ್. ಶಿವಶಂಕರ್ ಪತ್ರಿಕಾಗೋಷ್ಠಿ ಮಾತನಾಡಿದರು.