ಜೆಡಿಎಸ್ ಸಂಪೂರ್ಣ ಅಸ್ತಿತ್ವ ಕಳೆದುಕೊಳ್ಳಲಿದೆ

KannadaprabhaNewsNetwork |  
Published : Apr 27, 2024, 01:01 AM IST
ಗುಬ್ಬಿ ತಾಲೂಕಿನ ಸಿಂಗೋನಳ್ಳಿ ಮತ ಕಟ್ಟೆಯಲ್ಲಿ ಸಾರಥಿ ಸಾಲಿನಲ್ಲಿ ನಿಂತು ಮತ ಚಲಾಯಿಸಿ ಮಹಿಳೆ ಸಂತೋಷದಿಂದ ಮನೆಗೆ ತೆರಳಿದಳು. | Kannada Prabha

ಸಾರಾಂಶ

ಲೋಕಸಭಾ ಚುನಾವಣೆಯು ತಾಲೂಕಿನಲ್ಲಿ ಶಾಂತಿಯುತವಾಗಿ ಪೂರ್ಣಗೊಂಡಿದೆ. ಸಂಜೆ 6 ಗಂಟೆ ವೇಳೆಗೆ ಶೇ. 81ರಷ್ಟು ಮತದಾನವಾಗುವ ಮೂಲಕ ಜಿಲ್ಲೆಯಲ್ಲಿಯೇ ಪ್ರಥಮ ಸ್ಥಾನ ಕಾಯ್ದುಕೊಂಡಿದೆ.

ಕನ್ನಡ ಪ್ರಭ ವಾರ್ತೆ ಗುಬ್ಬಿ

ಲೋಕಸಭಾ ಚುನಾವಣೆಯು ತಾಲೂಕಿನಲ್ಲಿ ಶಾಂತಿಯುತವಾಗಿ ಪೂರ್ಣಗೊಂಡಿದೆ. ಸಂಜೆ 6 ಗಂಟೆ ವೇಳೆಗೆ ಶೇ. 81ರಷ್ಟು ಮತದಾನವಾಗುವ ಮೂಲಕ ಜಿಲ್ಲೆಯಲ್ಲಿಯೇ ಪ್ರಥಮ ಸ್ಥಾನ ಕಾಯ್ದುಕೊಂಡಿದೆ.

ಗುಬ್ಬಿ ವಿಧಾನ ಸಭಾ ವ್ಯಾಪ್ತಿಯ ಅಂಕಸಂದ್ರ, ಗಂಗಸಂದ್ರ, ರಾಯವಾರ ಧೂಳನಹಳ್ಳಿ ಮತಗಟ್ಟೆಗಳಲ್ಲಿ ಮತಯಂತ್ರಗಳಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಅಧಿಕಾರಿಗಳು ತುರ್ತು ಕ್ರಮ ಕೈಗೊಂಡು ಸರಾಗ ಮತ ಚಲಾವಣೆಗೆ ಅವಕಾಶ ಮಾಡಿಕೊಟ್ಟಿದ್ದರು.

ಶಾಸಕ ಎಸ್. ಆರ್. ಶ್ರೀನಿವಾಸ್ ಮಾತನಾಡಿ, ಚುನಾವಣೆಯ ನಂತರ ಜೆಡಿಎಸ್ ಸಂಪೂರ್ಣವಾಗಿ ಎರಡು ಭಾಗವಾಗಲಿದೆ. ರೇವಣ್ಣ ಮತ್ತು ಕುಟುಂಬ ಕಾಂಗ್ರೆಸ್‌ ಕುಮಾರಸ್ವಾಮಿ ಮತ್ತು ಕುಟುಂಬ ಬಿಜೆಪಿಯಲ್ಲಿ ಲೀನವಾಗುವ ಮೂಲಕ ಜೆಡಿಎಸ್ ಸಂಪೂರ್ಣವಾಗಿ ಅಸ್ತಿತ್ವವನ್ನು ಕಳೆದುಕೊಳ್ಳಲಿದೆ ಎಂದರು.

ಮಾಜಿ ಶಾಸಕ ಮಸಾಲ ಜಯರಾಮ್ ಮಾತನಾಡಿ, ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಬಂದಾಗಲೆಲ್ಲ ರಾಜ್ಯಕ್ಕೆ ಭೀಕರ ಬರಗಾಲ ಬರುತ್ತದೆ. ಆದ್ದರಿಂದ ಜನ ಈ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯನ್ನು ಬೆಂಬಲಿಸಿದ್ದಾರೆ ಎಂದು ಹೇಳಿದರು. ಮೈತ್ರಿ ಪಕ್ಷಗಳ ಮುಖಂಡರು ಎಲ್ಲ ಮತಗಟ್ಟೆಗಳಿಗೂ ಭೇಟಿ ನೀಡಿ ಕಾರ್ಯಕರ್ತರನ್ನು ಹಾಗೂ ಮತದಾರರನ್ನು ಪ್ರೇರೇಪಿಸಿದ್ದಾರೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಾಸಕ ಎಂ.ಚಂದ್ರಪ್ಪರಿಂದ ಸರ್ಕಾರಿ ಗುಡ್ಡ ಕಬಳಿಕೆ
ಇಂದು ಸ್ತುತಿ ಶಂಕರ- ಸ್ತೋತ್ರ ಮಹಾ ಸಮರ್ಪಣೆ