ರಾಜ್ಯ ಸರ್ಕಾರದ ವಿರುದ್ಧ ಬೀದಿಗೆ ಇಳಿದು ಹೋರಾಟ ಅನಿವಾರ್ಯ

KannadaprabhaNewsNetwork |  
Published : Feb 03, 2026, 01:15 AM IST
53 | Kannada Prabha

ಸಾರಾಂಶ

ಮುಂದಿನ ದಿನಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಎದುರಾಗಿರುವ ಹಿನ್ನೆಲೆ ಈಗಾಗಲೇ ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಬೂತ್ ಮಟ್ಟದ ಸಮಿತಿಗಳನ್ನು ರಚಿಸಲಾಗಿದೆ.

ಕನ್ನಡಪ್ರಭ ವಾರ್ತೆ ಪಿರಿಯಾಪಟ್ಟಣರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ದುರಾಡಳಿತ ಹಾಗೂ ವೈಫಲ್ಯಗಳ ವಿರುದ್ಧ ಜೆಡಿಎಸ್ ಪಕ್ಷದ ಕಾರ್ಯಕರ್ತರು ಬೀದಿಗೆ ಇಳಿದು ಹೋರಾಟ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಮಾಜಿ ಶಾಸಕ ಕೆ. ಮಹದೇವ್ ಹೇಳಿದರು.ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಪಿರಿಯಾಪಟ್ಟಣಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮಂಜುನಾಥ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಜೆಡಿಎಸ್ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿ, ಪಕ್ಷವನ್ನು ಇನ್ನಷ್ಟು ಸದೃಢವಾಗಿ ಸಂಘಟಿಸುವ ಅಗತ್ಯವಿದೆ ಎಂದರು. ಯಾವುದೇ ಕಾರಣಕ್ಕೂ ಪಕ್ಷ ಸಂಘಟನೆಯಲ್ಲಿ ಹಿಂದೆ ಬೀಳಬಾರದು ಎಂಬ ಉದ್ದೇಶದಿಂದ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಕೈಗೊಂಡಿರುವ ಪಕ್ಷದ ಸದಸ್ಯತ್ವ ಅಭಿಯಾನ ಕಾರ್ಯಕ್ರಮಕ್ಕೆ ತಾಲೂಕಿನ ಎಲ್ಲಾ ಕಾರ್ಯಕರ್ತರು ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಅವರು ಮನವಿ ಮಾಡಿದರು.ಮುಂದಿನ ದಿನಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಎದುರಾಗಿರುವ ಹಿನ್ನೆಲೆ ಈಗಾಗಲೇ ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಬೂತ್ ಮಟ್ಟದ ಸಮಿತಿಗಳನ್ನು ರಚಿಸಲಾಗಿದೆ. ಸಮಿತಿಯ ಪ್ರತಿಯೊಬ್ಬ ಸದಸ್ಯರು ತಮ್ಮ ಜವಾಬ್ದಾರಿಯನ್ನು ಅರಿತು ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಬೇಕು ಎಂದು ಕರೆ ನೀಡಿದರು. ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಜನಸಾಮಾನ್ಯರಿಗೆ ಮುಟ್ಟಿಸುವ ಉದ್ದೇಶದಿಂದ ಮನೆ-ಮನೆ ಪ್ರಚಾರ ನಡೆಸುವ ಹೊಣೆಗಾರಿಕೆಯನ್ನು ಕಾರ್ಯಕರ್ತರು ನಿಭಾಯಿಸಬೇಕು ಎಂದರು.ಮಾಜಿ ಮೈಮುಲ್ ಅಧ್ಯಕ್ಷ ಪಿ.ಎಂ. ಪ್ರಸನ್ನ ಮಾತನಾಡಿ, ಜೆಡಿಎಸ್ ಪಕ್ಷದಂತಹ ನಿಷ್ಠಾವಂತ ಕಾರ್ಯಕರ್ತರು ಬೇರೆ ಯಾವ ಪಕ್ಷದಲ್ಲೂ ಸಿಗುವುದಿಲ್ಲ. ಇಂತಹ ಕಾರ್ಯಕರ್ತರನ್ನು ಹೊಂದಿರುವುದು ನಮ್ಮ ಭಾಗ್ಯ. ಪಕ್ಷದ ಅಧ್ಯಕ್ಷರು ಈ ಕಾರ್ಯಕ್ರಮದ ರೂಪರೇಷೆಯನ್ನು ಸಿದ್ಧಪಡಿಸಿದ್ದು, ಅವರು ತೆಗೆದುಕೊಳ್ಳುವ ತೀರ್ಮಾನಗಳಿಗೆ ಎಲ್ಲರೂ ಕೈಜೋಡಿಸಿ ಕೆಲಸ ಮಾಡಬೇಕು ಎಂದರು.ಪಕ್ಷದ ಅಧ್ಯಕ್ಷ ಅಣ್ಣಯ್ಯ ಶೆಟ್ಟಿ, ಮೈಮುಲ್ ಮಾಜಿ ನಿರ್ದೇಶಕ ರಾಜೇಂದ್ರ ಮಾತನಾಡಿದರು.ಮಾಜಿ ಪುರಸಭೆ ಪಿ.ಸಿ. ಕೃಷ್ಣ, ಮಾಜಿ ಪುರಸಭೆ ಅಧ್ಯಕ್ಷರಾದ ಪ್ರಕಾಶ್ ಸಿಂಗ್, ಮಂಜುನಾಥ್ ಸಿಂಗ್, ಮಾಜಿ ಸದಸ್ಯರಾದ ನಿರಂಜನ್, ಯೂನಿಯನ್ ಬ್ಯಾಂಕ್ ನಿರ್ದೇಶಕ ಹಾಗೂ ಮುಖಂಡರಾದ ಕುಮಾರ್, ಮಾಜಿ ಎಂಡಿಸಿಸಿ ಬ್ಯಾಂಕ್ ನಿರ್ದೇಶಕರಾದ ರವಿ, ನಾಗೇಂದ್ರ, ತಿಮ್ಮ ನಾಯ್ಕ, ರಘುನಾಥ್, ರಂಗಸ್ವಾಮಿ, ಮಲ್ಲಿಕಾರ್ಜುನ್, ರಾಜು, ಮೈಲಾರಪ್ಪ, ಶಂಕ್ರೇಗೌಡ, ಬಸವರಾಜ್ ಅರಸ್, ಜೆಡಿಎಸ್ ಕಾರ್ಯಕರ್ತರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

25 ವರ್ಷದಲ್ಲಿ ರೈತರಿಗೆ 111 ಲಕ್ಷ ಕೋಟಿ ನಷ್ಟ: ಶರ್ಮಾ
ಆಟೋ ಗ್ಲಾಸ್ ಒಡೆದಿದ್ದಕ್ಕೆಸ್ನೇಹಿತನ ಕೊಂದ ಚಾಲಕ