- ಚನ್ನಗಿರಿ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಪಕ್ಷಗಳು ಬೆಂಬಲ ನೀಡಬೇಕು ಎಂದು ಹೇಳಿಕೆ
ಕನ್ನಡಪ್ರಭ ವಾರ್ತೆ ಚನ್ನಗಿರಿ
2028ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಚನ್ನಗಿರಿ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಪಕ್ಷಗಳು ಬೆಂಬಲ ನೀಡಿದರೆ ಜೆಡಿಯು ಪಕ್ಷದಿಂದ ಸ್ಪರ್ಧಿಸುತ್ತೇನೆ ಎಂದು ಜೆಡಿಯು ರಾಜ್ಯಾಧ್ಯಕ್ಷ ಮಾಜಿ ಶಾಸಕ ಮಹಿಮಾ ಜೆ. ಪಟೇಲ್ ಹೇಳಿದರು.ಮಂಗಳವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜೆಡಿಯು ಮತ್ತು ಜೆಡಿಎಸ್ ಪಕ್ಷಗಳ ವತಿಯಿಂದ ಮುಂಬರಲಿರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗಳ ಪೂರ್ವಸಿದ್ಧತಾ ಸಭೆಯಲ್ಲಿ ಅವರು ಹೇಳಿದರು.
ನಾವು ಸಮಾಜವಾದ ಹಿನ್ನಲೆಯಿಂದ ಬಂದವರಾಗಿದ್ದೇವೆ. ಕೇಂದ್ರ ಮತ್ತು ರಾಜ್ಯದಲ್ಲಿ ನಡೆಯುತ್ತಿರುವ ರಾಜಕಾರಣ ಮನಸ್ಸಿಗೆ ಒಪ್ಪುತ್ತಿಲ್ಲ. ನನ್ನ ಮನಸ್ಸಿಗೆ ಒಪ್ಪುವ ಕೆಲಸ ಮಾಡುವವನು ನಾನಾಗಿದ್ದೇನೆ. ಮುಂದೆ ಬರಲಿರುವ ಜಿ.ಪಂ., ತಾ.ಪಂ. ಚುನಾವಣೆಯಲ್ಲಿ ಜೆಡಿಯು-ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡು ಅಭ್ಯರ್ಥಿಗಳನ್ನು ಆಯ್ಕೆಮಾಡೋಣ ಎಂದರು.
ಈ ಸಂದರ್ಭ ಜೆಡಿಎಸ್ ತಾಲೂಕು ಅಧ್ಯಕ್ಷ ಜಾವೀದ್ ಬಾಷಾ, ಜೆಡಿಯು ಅಧ್ಯಕ್ಷ ಮಲ್ಲಿಕ್, ಲಿಯಾಕತ್ ಅಲಿಖಾನ್, ಉಸ್ಮಾನ್ ಷರೀಫ್, ಮುನ್ನಾಸಾಬ್, ಸುರೇಶ್, ರುದ್ರೇಶ್, ಸುಮಿತ್ರಮ್ಮ, ನವಾಜ್, ವೀರಭದ್ರಪ್ಪ, ರೇಖಾ, ಶೈಲಜಾ, ಕಾರ್ಯಕರ್ತರು ಹಾಜರಿದ್ದರು.
-3ಕೆಸಿಎನ್‌ಜಿ2: ಜೆಡಿಯು ರಾಜ್ಯಾಧ್ಯಕ್ಷ, ಮಾಜಿ ಶಾಸಕ ಮಹಿಮಾ ಜೆ. ಪಟೇಲ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.