ಸಂಗೀತದ ಮೂಲಕ ದೈವಿಕ ಆನಂದ: ಸ್ವಾಮಿ ಜಿತಕಾಮನಂದಜಿ

KannadaprabhaNewsNetwork |  
Published : Sep 14, 2026, 03:00 AM IST
ರಾದಾ ಸುಧಾ ಸಂಗೀತ ಕಾರ್ಯಕ್ರಮದಲ್ಲಿ ಕಲಾವಿದರನ್ನು ಸನ್ಮಾನಿಸಲಾಯಿತು  | Kannada Prabha

ಸಾರಾಂಶ

ಕಲಾಸಾಧನ ಸಂಸ್ಥೆಯ ಆಶ್ರಯದಲ್ಲಿ ರಾಮಕೃಷ್ಣ ಮಿಷನ್ ಸಹಯೋಗದಲ್ಲಿ ಭಾನುವಾರ ನಗರದ ರಾಮಕೃಷ್ಣ ಮಠದಲ್ಲಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸಂಭ್ರಮ ‘ರಾಗ ಸುಧಾ’ಕ್ಕೆ ಚಾಲನೆ

ಮಂಗಳೂರು: ಸಂಗೀತದ ಮೂಲಕ ದೈವಿಕ ಆನಂದ ಹೊಂದಲು ಸಾಧ್ಯ. ಸ್ವಾಮಿ ವಿವೇಕಾನಂದರು ಸಂಗೀತದ ಬಗ್ಗೆ ಅಭ್ಯಾಸ ಮಾಡಿದ್ದರು ಮತ್ತು ಪ್ರೇಮಿಯಾಗಿದ್ದರು ಎಂದು ಮಂಗಳೂರಿನ ರಾಮ ಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮನಂದ ಜಿ ಹೇಳಿದರು.

ಅವರು ಕಲಾಸಾಧನ ಸಂಸ್ಥೆಯ ಆಶ್ರಯದಲ್ಲಿ ರಾಮಕೃಷ್ಣ ಮಿಷನ್ ಸಹಯೋಗದಲ್ಲಿ ಭಾನುವಾರ ನಗರದ ರಾಮಕೃಷ್ಣ ಮಠದಲ್ಲಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸಂಭ್ರಮ ‘ರಾಗ ಸುಧಾ’ಕ್ಕೆ ಚಾಲನೆ ನೀಡಿ ಮಾತನಾಡಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್, ಅದಾನಿ ಸಮೂಹ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ, ದ.ಕ. ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮರೆಡ್ಡಿ, ಖ್ಯಾತ ಹೃದ್ರೋಗ ತಜ್ಞ ಡಾ. ಕಸ್ತೂರಿ ಮೋಹನ್ ಪೈ, ಎಂಆರ್‌ಪಿಎಲ್‌ ನಿವೃತ್ತ ಗ್ರೂಪ್ ಜನರಲ್ ಮ್ಯಾನೇಜರ್ ಕೃಷ್ಣ ಹೆಗ್ಡೆ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರಶಾಂತ್ ಪೈ, ಶಕ್ತಿನಗರದ ಶಕ್ತಿ ಕಾಲೇಜು ಆಡಳಿತಾಧಿಕಾರಿ ರಮೇಶ್, ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್., ಮಂಗಳೂರು ರೋಟರಿ ಸೆಂಟ್ರಲ್ ನಿಕಟ ಪೂರ್ವ ಅಧ್ಯಕ್ಷ ಭಾಸ್ಕರ ರೈ ಕಟ್ಟ ಮತ್ತಿತರರು ಇದ್ದರು.

ಕಲಾ ಸಾಧನ ಸಂಸ್ಥೆ ನಿರ್ದೇಶಕಿ ವಿಭಾ ಶ್ರೀನಿವಾಸ್ ನಾಯಕ್ ಸ್ವಾಗತಿಸಿದರು. ಪಾಂಡುರಂಗ ಆಚಾರ್ಯ ವಂದಿಸಿದರು. ಶ್ರೀನಿವಾಸ್ ನಾಯಕ್ ಇಂದಾಜೆ ನಿರೂಪಿಸಿದರು. ಸ್ಮಿತಾ ಕಲಾವಿದರ ಪರಿಚಯಿಸಿದರು.

ಖ್ಯಾತ ಹಿಂದೂಸ್ತಾನಿ ಗಾಯಕ ಪುಣೆಯ ಆದಿತ್ಯ ಮೋದಕ್ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ತಬಲಾದಲ್ಲಿ ಬೆಂಗಳೂರಿನ ಅಕ್ಷಯ್ ಜೋಷಿ, ಹಾರ್ಮೋನಿಯಂನಲ್ಲಿ ಯಲ್ಲಾಪುರದ ಸತೀಶ್ ಭಟ್ ಹೆಗ್ಗಾರ್, ತಾನ್ಪುರದಲ್ಲಿ ಮಂಗಳೂರಿನ ಕಾರ್ತಿಕ್ ಹಾಗೂ ಪ್ರದಯ್ ಸಾಥ್ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಂಗಳೂರು ಸಚಿವ ಸಂಪುಟ ಸಭೆಗೆ ಬಿಜೆಪಿ ದ.ಕ.ದ 44 ಬೇಡಿಕೆಗಳ ಪಟ್ಟಿ ಸಲ್ಲಿಕೆ
ಜನತೆಗೆ ಪ್ರಜಾ ಸೇವೆಯಡಿ ನ್ಯಾಯ ದೊರೆಯಲು ಅವಕಾಶ: ಅಶೋಕ್ ರೈ