ಕುರುಗೋಡು ತಾಲೂಕಿನಲಿ ಜೆಜೆಎಂ ಯೋಜನೆ ಕಳಪೆ: ಆರೋಪ

KannadaprabhaNewsNetwork |  
Published : Feb 27, 2026, 02:30 AM IST
ಕುರುಗೋಡು 01ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಡಲ ಅಧ್ಯಕ್ಷ ಮದಿರೆ ಕುಮಾರಸ್ವಾಮಿ ಆರೋಪಿಸಿದರು. | Kannada Prabha

ಸಾರಾಂಶ

ಬೇಸಿಗೆಯಲ್ಲಿ ಕುಡಿವ ನೀರಿನ ಅಭಾವ ಉಂಟಾಗಲಿದೆ. ಪಟ್ಟಣದಲ್ಲಿ ₹೭೦ ಕೋಟಿ ವೆಚ್ಚದಲ್ಲಿ ನಡೆಯುತ್ತಿರುವ ಜಲಜೀವನ್ ಮಿಷನ್ ಕಾಮಗಾರಿಯೂ ಕಳಪೆಯಾಗಿದೆ.

ಕುರುಗೋಡು: ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಲು ಕೇಂದ್ರ ಸರ್ಕಾರ ಜಾರಿಗೊಳಿಸಿರುವ ರಾಷ್ರೀಯ ಜಲಜೀವನ್ ಮಿಷನ್ ಯೋಜನೆ ತಾಲ್ಲೂಕಿನಲ್ಲಿ ಸಂಪೂರ್ಣ ಕಳಪೆಯಾಗಿದೆ ಎಂದು ಬಿಜೆಪಿ ಕುರುಗೋಡು ಮಂಡಲ ಅಧ್ಯಕ್ಷ ಮದಿರೆ ಕುಮಾರಸ್ವಾಮಿ ಆರೋಪಿಸಿದರು.

ಇಲ್ಲಿನ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೇಸಿಗೆಯಲ್ಲಿ ಕುಡಿವ ನೀರಿನ ಅಭಾವ ಉಂಟಾಗಲಿದೆ. ಪಟ್ಟಣದಲ್ಲಿ ₹೭೦ ಕೋಟಿ ವೆಚ್ಚದಲ್ಲಿ ನಡೆಯುತ್ತಿರುವ ಜಲಜೀವನ್ ಮಿಷನ್ ಕಾಮಗಾರಿಯೂ ಕಳಪೆಯಾಗಿದೆ. ಪೈಪ್ ಅಳವಡಿಸಲು ರಸ್ತೆಗಳಲ್ಲಿ ಗುಂಡಿ ತೋಡಿದ್ದಾರೆ. ಸರಿಯಾಗಿ ಮುಚ್ಚಿಲ್ಲ. ಇದರಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಇದಕ್ಕೆ ಗುತ್ತಿಗೆ ದಾರರಿಂದ ಜನಪ್ರತಿನಿಧಿಗಳು ಕಮಿಷನ್ ಪಡೆಯುತ್ತಿರುವುದೇ ಕಳಪೆ ಕಾಮಗಾರಿಗೆ ಪ್ರಮುಖ ಕಾರಣವಾಗಿದೆ ಎಂದು ಆರೋಪಿಸಿದರು.

ಕುರುಗೋಡು ಪುರಸಭೆಯಲ್ಲಿ ಹಣಕೊಟ್ಟರೆ ಮಾತ್ರ ಕೆಲಸ ಇಲ್ಲವಾದರೆ ಜನಸಾಮಾನ್ಯರು ನಿತ್ಯ ಕಚೇರಿಗೆ ಅಲೆಯುವ ಕಾಯಕ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು.

ತಾಲೂಕು ಕೇಂದ್ರದಲ್ಲಿ ತಾಪಂ ಕಚೇರಿ ಇದ್ದರೂ ಇಲ್ಲದಂತಾಗಿದೆ. ಯಾವುದೇ ಕಾರ್ಯ ಚಟುವಟಿಕೆಗಳು ಜರುಗುತ್ತಿಲ್ಲ. ಕಚೇರಿಗೆ ಖರೀದಿಸಿದ ಪೀಠೋಪಕರಣ ವೆಚ್ಚದ ಬಗ್ಗೆ ಮಾಹಿತಿ ನೀಡುವಂತೆ ಮಾಹಿತಿ ಹಕ್ಕಿನಲ್ಲಿ ಅರ್ಜಿಸಲ್ಲಿಸಿದರೂ ಮಾಹಿತಿ ನೀಡುತ್ತಿಲ್ಲ. ಇದರಿಂದ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎನ್ನುವುದು ತಿಳಿಯುತ್ತದೆ ಎಂದು ಆರೋಪಿಸಿದರು.

೧೦೦ ಹಾಸಿಗೆ ಆಸ್ಪತ್ರೆ ಕಟ್ಟಡ, ಮಿನಿ ವಿಧಾನಸೌಧ ಕಟ್ಟಡ ನಿರ್ಮಾಣ ಪೂರ್ಣಗೊಂಡರೂ ಶಾಸಕರು ಉದ್ಘಾಟನೆಗೆ ಆಸಕ್ತಿ ತೋರುತ್ತಿಲ್ಲ. ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆಯಿಂದ ಚಿಕಿತ್ಸೆ ದೊರೆಯುತ್ತಿಲ್ಲ. ಡಯಾಲಿಸಿಸ್ ಕೇಂದ್ರ ಘಟಕ ಶಾಸಕರು ಉದ್ಘಾಟಿಸಿದ್ದಾರೆ. ಆದರೂ ಕಾರ್ಯನಿರ್ವಹಿಸುತ್ತಿಲ್ಲ. ರೋಗಿಗಳಿಗೆ ರಕ್ತ ಶುದ್ಧೀಕರಣಕ್ಕಾಗಿ ದೂರದ ಬಳ್ಳಾರಿಗೆ ಹೋಗಿ ಚಿಕಿತ್ಸೆ ಪಡೆಯಬೇಕಿದೆ ಎಂದು ಆರೋಪಿಸಿದರು.

ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರದಂತ ಘಟನೆಗಳು ಜರುಗುತ್ತಿವೆ. ಶಿಕ್ಷಣ ಇಲಾಖೆಯ ಆಡಳಿತ ವೈಫಲ್ಯ ಕಾರಣವಾಗಿದೆ ಎಂದು ಆರೋಪಿಸಿದರು.

ಇದೇ ಪರಿಸ್ಥಿತಿ ಮುಂದುವರೆದರೆ ಮುಂದಿನ ದಿನಗಳಲ್ಲಿ ಬಿಜೆಪಿ ಯಿಂದ ಹೋರಾಟದ ದಾರಿ ತುಳಿಯಬೇಕಾಗುತ್ತದೆ ಎಂದು ಎಚ್ಚರಿಸಿದರು.

ಎಸ್.ಸಿ. ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಹನುಮಂತಪ್ಪ, ಮಾತನಾಡಿ, ವಿವಿಧ ಅಭಿವೃದ್ಧಿ ನಿಗಮದಲ್ಲಿ ಹಣ ಇಲ್ಲದ ಪರಿಣಾಮ ಗಂಗಾ ಕಲ್ಯಾಣ ಸೇರಿ ಇತರ ಯೋಜನೆ ಜನರಿಗೆ ದೊರೆಯುತ್ತಿಲ್ಲ. ಅದರಲ್ಲೂ ವಾಕ್ಮೀಕಿ ಹಗರಣದಿಂದ ಆ ಸಮುದಾಯಕ್ಕೆ ಯಾವುದೇ ಯೋಜನೆ ತಲುಪುತ್ತಿಲ್ಲ ಎಂದರು.

ಜೆ. ಸೋಮಶೇಖರ ಗೌಡ, ವೀರಭದ್ರ ಗೌಡ, ಪುರಸಭೆ ಸದಸ್ಯ ವೀರೇಶ್, ಮಾಜಿ ಸದಸ್ಯ ಕೌಡೆಕಾಯಿ ವೆಂಕಟೇಶ್, ಎಸ್.ಶರತ್ ಗೌಡ, ವಿ.ಗುರು, ಮತ್ತು ತಿಪ್ಪೇರುದ್ರ ಗೌಡ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಧರ್ಮದ ದಾರಿಯಲ್ಲಿ ನಡೆದರೆ ಮಾತ್ರ ಸುಖಿ ಜೀವನ: ದೊಡ್ಡನಗೌಡ ಪಾಟೀಲ
ಪೊಲೀಸರು, ಜೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ