ಕಾರ್ಕಳ: ಜ್ಞಾನಸುಧಾ ಪ್ರತಿಭಾ ಪುರಸ್ಕಾರ

KannadaprabhaNewsNetwork |  
Published : May 31, 2024, 02:15 AM IST
ಗಣಿತನಗರದ ಜ್ಞಾನಸುಧಾ ಆವರಣದಲ್ಲಿರುವ ಶ್ರೀ ಮಹಾಗಣಪತಿ ದೇವಸ್ಥಾನದ ೧೧ನೇ ಪ್ರತಿಷ್ಠಾ ಮಹೋತ್ಸವ ಕಾರ್ಯಕ್ರಮ ಹಾಗೂ ‘ಜ್ಞಾನಸುಧಾ ಪ್ರತಿಭಾ ಪುರಸ್ಕಾರ’ದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು. | Kannada Prabha

ಸಾರಾಂಶ

ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ ಬೆಳೆಸುತ್ತಿರುವ ಜ್ಞಾನಸುಧಾದ ಕಾರ್ಯವು ಸ್ತುತ್ಯಾರ್ಹವಾದುದು ಎಂದು ಉಡುಪಿಯ ಶ್ರೀಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ ಹೇಳಿದರು.

ಕನ್ನಡಪ್ರಭ ವಾರ್ತೆ ಕಾರ್ಕಳ

ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸಿ ಬೆಳೆಸುತ್ತಿರುವ ಜ್ಞಾನಸುಧಾದ ಕಾರ್ಯವು ಸ್ತುತ್ಯಾರ್ಹವಾದುದು. ಡಾ. ಸುಧಾಕರ್ ಶೆಟ್ಟಿ ಅವರ ಸಮಾಜಮುಖಿ ಕಾರ್ಯ ಶ್ಲಾಘನೀಯ ಎಂದು ಉಡುಪಿಯ ಶ್ರೀ ಕೃಷ್ಣಾಪುರ ಮಠದ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ ಹೇಳಿದರು.

ಗಣಿತನಗರದ ಜ್ಞಾನಸುಧಾ ಆವರಣದಲ್ಲಿರುವ ಶ್ರೀ ಮಹಾಗಣಪತಿ ದೇವಸ್ಥಾನದ 11ನೇ ಪ್ರತಿಷ್ಠಾ ಮಹೋತ್ಸವ ಕಾರ್ಯಕ್ರಮ ಹಾಗೂ ‘ಜ್ಞಾನಸುಧಾ ಪ್ರತಿಭಾ ಪುರಸ್ಕಾರ’ದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು. ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್‌ನ ಸಂಸ್ಥಾಪಕರಾದ ನಾಡೋಜ ಡಾ. ಜಿ. ಶಂಕರ್ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಮುಂದಿನ ಬದುಕಿನಲ್ಲಿ ಸೇವಾ ಮನೋಭಾವವನ್ನು ಬೆಳೆಸಿಕೊಂಡು ಜೀವನೋತ್ಸಾಹದ ಗಣಿಗಳಾಗ ಬೇಕು. ಆದರ್ಶ ನಡೆ ನುಡಿಯ ಮೂಲಕ ಸಮಾಜಮುಖಿಯಾಗಿ ಬೆಳೆಯ ಬೇಕು ಎಂದರು. ಡಾ. ಸುಧಾಕರ್ ಶೆಟ್ಟಿಯವರ ಮೂಲಕ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳು ಸಮಾಜಕ್ಕೆ ನೀಡುತ್ತಿರುವ ಕೊಡುಗೆಯು ಆದರ್ಶನೀಯ ಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ವಿ.ಸುನಿಲ್ ಕುಮಾರ್ ಮಾತನಾಡಿ, ಸಮಾಜ ಸಂತೃಪ್ತಗೊಳಿಸುವ ಜ್ಞಾನಸುಧಾದ ಉದಾತ್ತ ಕಲ್ಪನೆ ಆದರಣೀಯ. ಇಲ್ಲಿನ ಸಿಬ್ಬಂದಿ ಒಮ್ಮನಸ್ಸಿನ ದುಡಿಮೆಯು ಅನ್ಯ ಸಂಸ್ಥೆಗಳಿಗೂ ಮಾದರಿ ಎಂದರು. ಪ್ರತಿಭಾ ಪುರಸ್ಕಾರ : ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್‌ ವತಿಯಿಂದ ಕಾರ್ಯಕ್ರಮದಲ್ಲಿ 2023-24 ನೇ ಸಾಲಿನ ಎಸ್ಎಸ್ಎಲ್.ಸಿ., ಪ್ರಥಮ ಹಾಗೂ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಉನ್ನತ ಸಾಧನೆ ಮಾಡಿದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು 68.79 ಲಕ್ಷ ರು. ವಿದ್ಯಾರ್ಥಿ ವೇತನ ನೀಡಿ ಗೌರವಿಸಲಾಯಿತು.

ಜೊತೆಗೆ ಉಪನ್ಯಾಸಕ ಹಾಗೂ ಶಿಕ್ಷಕರನ್ನು ಗುರುತಿಸಲಾಯಿತು. ಈ ಮೊದಲು 20 ಲಕ್ಷ ರು. ದಷ್ಟು ಪ್ರೋತ್ಸಾಹ ಧನವನ್ನು ನೀಡಿದ್ದು ಇಲ್ಲಿಯವರೆಗೆ ಒಟ್ಟು 90 ಲಕ್ಷ ರು. ದಷ್ಟು ವಿದ್ಯಾರ್ಥಿ ವೇತನ ನೀಡಿದಂತಾಗುತ್ತದೆ. ಎರಡನೇ ಹಂತದ ವಿದ್ಯಾರ್ಥಿ ವೇತನವನ್ನು ರಾಜ್ಯ ಹಾಗೂ ರಾಷ್ಟ್ರಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ 22 ಡಿಸೆಂಬರ್ 2024 ರ ಸಂಸ್ಥಾಪಕರ ದಿನಾಚರಣೆಯಂದು ವಿತರಿಸಲಾಗುವುದು. ಸಂಸ್ಥೆಯಲ್ಲಿ ಹತ್ತು ವರ್ಷದ ಸೇವೆ ಸಲ್ಲಿಸಿದ ಆಂಗ್ಲಭಾಷಾ ವಿಭಾಗದ ಮುಖ್ಯಸ್ಥೆ ಸಂಗೀತಾ ಕುಲಾಲ್‌ ಅವರನ್ನು, ಮೈಂಟೆನೆನ್ಸ್ ವಿಭಾಗದ ಹಿರಿಯ ಮೇಲ್ವಿಚಾರಕ ಶ್ರೀಕಾಂತ್ ಸುವರ್ಣ ಸನ್ಮಾನಿಸಲಾಯಿತು.

ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಸನ್ ಟ್ರಸ್ಟ್ನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಪ್ರಜ್ವಲ್ ಕುಲಾಲ್ ನಿರೂಪಿಸಿ, ಪಿ.ಆರ್.ಒ. ಜ್ಯೋತಿ ಪದ್ಮನಾಭ ಭಂಡಿ ವಂದಿಸಿದರು. ಜ್ಞಾನಭಾರತ್ ಬಾಲವೃಂದ ಬಾಲೆಯರು ಪ್ರಾರ್ಥಿಸಿದರು. ಕಾರ್ಯಕ್ರಮದಲ್ಲಿ ಟ್ರಸ್ಟಿಗಳಾದ ವಿದ್ಯಾವತಿ.ಎಸ್.ಶೆಟ್ಟಿ, ಅನಿಲ್ ಕುಮಾರ್ ಜೈನ್, ಸಿಎ ನಿತ್ಯಾನಂದ ಪ್ರಭು, ಆಡಳಿತ ಮಂಡಳಿ ಸದಸ್ಯ ಶಾಂತಿರಾಜ್ ಹೆಗ್ಡೆ, ಕಾರ್ಕಳ ಜ್ಞಾನಸುಧಾ ಸಿ.ಇ.ಒ ಹಾಗೂ ಪ್ರಾಂಶುಪಾಲರಾದ ದಿನೇಶ್ ಎಂ. ಕೊಡವೂರ್, ತ್ರಿವಳಿ ಸಂಸ್ಥೆಗಳ ಪ್ರಾಂಶುಪಾಲರು, ಉಪಪ್ರಾಂಶುಪಾಲರು ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಬ್ಬಳ್ಳಿ ವಿವಸ್ತ್ರ ಕೇಸ್‌ನಲ್ಲಿ ತಲೆದಂಡಕ್ಕೆ ಬಿಜೆಪಿ ಗಡುವು
ಶೀಘ್ರ ‘ಬಾಕಿ ಲಕ್ಷ್ಮಿ’ ಬಿಡುಗಡೆ - ಬಿಪಿಎಲ್‌ ರದ್ದಾದವರಿಗೆ ಇಲ್ಲ ಗೃಹಲಕ್ಷ್ಮಿ ಹಣ