ಕನ್ನಡಪ್ರಭ ವಾರ್ತೆ ಮಳವಳ್ಳಿ
ಈಗಾಗಲೇ ಆರಂಭವಾಗಿರುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಆಜೀವಿಕ ಮಿಷನ್ ಗ್ರಾಮೀಣ(ವಿಬಿ ಜಿ ರಾಮ್ ಜಿ) ಯೋಜನೆಯಡಿ ನೋಂದಾಯಿತ ಹಾಗೂ ಇ-ಕೆವೈಸಿ ಪೂರ್ಣಗೊಂಡಿರುವ ಎಲ್ಲಾ ಕೂಲಿಕಾರರಿಗೆ ಕುಶಲ ಕೆಲಸಗಳನ್ನು ಒದಗಿಸಲಾಗುತ್ತಿದೆ ಮತ್ತು ಎಲ್ಲಾ ಕೂಲಿಕಾರರು ಇ-ಕೆವೈಸಿ ಮಾಡಿಸಿಕೊಳ್ಳಬೇಕು ಎಂದರು.
ಸಕ್ರಿಯ ಕುಟುಂಬಗಳ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಹಾಗೂ ಪ್ರತಿದಿನ ಪ್ರತಿ ಗ್ರಾಪಂನಲ್ಲಿ ಕನಿಷ್ಠ 100 ಮಾನವ ದಿನಗಳನ್ನು ಸೃಜಿಸುವ ಮೂಲಕ ನಿಗದಿತ ಗುರಿ ಸಾಧಿಸಲು ಈ ಅಭಿಯಾನ ರೂಪಿಸಲಾಗಿದೆ. ವಿಬಿ-ಜಿ ರಾಮ್ ಜಿ ಯೋಜನೆಯಡಿ ಲಭ್ಯವಿರುವ ಸಮುದಾಯ ಆಧಾರಿತ ಅಕುಶಲ ಕೆಲಸ ಹಾಗೂ ವೈಯಕ್ತಿಕ ಕಾಮಗಾರಿ ಬಗ್ಗೆ ವ್ಯಾಪಕ ಜಾಗೃತಿ ಮೂಡಿಸುವ ಮೂಲಕ ಗ್ರಾಮದ ಜನರ ಭಾಗವಹಿಸುವಿಕೆ ಹೆಚ್ಚಿಸುವಂತೆ ಸೂಚಿಸಿದರು.ಎಲ್ಲ ಗ್ರಾಪಂ ವ್ಯಾಪ್ತಿಯಲ್ಲಿ ಜಲಸಂರಕ್ಷಣೆ, ಅಂತರ್ಜಲ ಮರುಪೂರ್ಣ ಹಾಗೂ ದೀರ್ಘಕಾಲಿಕ ಜೀವನೋಪಾಯಕ್ಕೆ ನೆರವಾಗುವ ಕಾಮಗಾರಿಗಳಿಗೆ ಆದ್ಯತೆ ನೀಡಿ ಅನುಷ್ಠಾನಗೊಳಿಸುವುದು, ಸ್ಥಳೀಯವಾಗಿ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಮೂಲಕ ಗ್ರಾಮೀಣ ಪ್ರದೇಶದಿಂದ ನಗರಗಳಿಗೆ ಉದ್ಯೋಗ ಅರಸಿ ಹೋಗುವ ವಲಸೆಯನ್ನು ಪರಿಣಾಮಕಾರಿಯಾಗಿ ತಡೆಯುವುದು, ಗ್ರಾಮೀಣ ಭಾಗದ ಅರ್ಹ ಕುಟುಂಬಗಳು ಈ ಅಭಿಯಾನವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಜಾಬ್ ಕಾರ್ಡ್ ಇಲ್ಲದ ಕುಟುಂಬಗಳು ಗ್ರಾಪಂಗಳಲ್ಲಿ ನಮೂನೆ-1 ಪಡೆದು ಭರ್ತಿ ಮಾಡಿ, ಕಡ್ಡಾಯ ದಾಖಲೆಗಳಾಗಿ ಇ-ಕೆವೈಸಿ ಆದ ಬ್ಯಾಂಕ್ ಪುಸ್ತಕ, ಆಧಾರ್, ರೇಷನ್ ಕಾರ್ಡ್ ನಕಲು ಪ್ರತಿ ಹಾಗೂ ಎರಡು ಭಾವಚಿತ್ರ ನೀಡಿ ಹೊಸ ಗ್ರಾಮೀಣ ರೋಜ್ಗಾರ್ ಗ್ಯಾರಂಟಿ ಕಾರ್ಡ್ ಪಡೆಯಬಹುದು ಮತ್ತು ವಿಶೇಷಚೇತನರಿಗೆ ಹಾಗೂ ಲಿಂಗತ್ವ ಅಲ್ಪಸಂಖ್ಯಾತರಿಗೆ ಪ್ರತ್ಯೇಕ ರೋಜಾರ್ ಗ್ಯಾರಂಟಿ ಕಾರ್ಡ್ ಗ್ಯಾರಂಟಿ ಕಾರ್ಡ್ ವಿತರಣೆ ಮಾಡಲಾಗುತ್ತದೆ ಎಂದು ತಿಳಿಸಿದರು.