ಸೆಪ್ಟೆಂಬರ್‌ ಹದಿನೈದರವರೆಗೆ ಜಾಬ್‌ ಕಾರ್ಡ್‌ ಮೇಳ

KannadaprabhaNewsNetwork |  
Published : Aug 24, 2026, 01:45 AM IST
23ಎಚ್ಎಸ್ಎನ್6 : ಬೇಲೂರು  ತಾಲೂಕು ಅಂದಲೆ ಗ್ರಾಮ ಪಂಚಾಯಿತಿಯಲ್ಲಿ ವಿಬಿಜಿ ರಾಮ್ ಜಿ ಗ್ರಾಮೀಣ ಯೋಜನೆಯ ಪ್ರಚಾರ ಕಾರ್ಯಕ್ರಮ ಹಾಗೂ  ಜಾಬ್ ಕಾರ್ಡ್ ಮೇಳ ಅಭಿಯಾನ ನಡೆಸಲಾಯಿತು. | Kannada Prabha

ಸಾರಾಂಶ

ಪ್ರತಿಯೊಬ್ಬ ಕೂಲಿ ಕಾರ್ಮಿಕರಿಗೂ ವಿಬಿಜಿ ರಾಮ್ ಜಿ ಗ್ಯಾರಂಟಿ ಕಾರ್ಡ್ ಗಳನ್ನು ವಿತರಿಸಲಾಗುತ್ತದೆ. ಅವುಗಳನ್ನು ಹೊಂದಿದ ಗ್ರಾಮೀಣ ಕುಟುಂಬಗಳು ವಾರ್ಷಿಕ ೧೨೫ ದಿನಗಳ ಕೂಲಿ ಪಡೆಯಬಹುದು. ಹಾಗೂ 60 ದಿನಗಳ ರಜಾ ಸೌಲಭ್ಯವನ್ನು ತಮ್ಮ ಸ್ವಂತ ಕೃಷಿ ಚಟುವಟಿಕೆಗಳ ಕಾಲದಲ್ಲಿ ಬಳಸಿಕೊಳ್ಳಬಹುದು. ಅಲ್ಲದೆ ಸಾಮುದಾಯಿಕ ಅಭಿವೃದ್ಧಿ ಕಾಮಗಾರಿಗಳು ಹಾಗೂ ವೈಯಕ್ತಿಕ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿಕೊಳ್ಳಲು ಈ ಒಂದು ಜಾಬ್ ಕಾರ್ಡ್ ತುಂಬಾ ಪ್ರಮುಖವಾಗಿರುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಕೂಡ ಈ ಒಂದು ಜಾಬ್ ಕಾರ್ಡ್ ಮೇಳ ಅಭಿಯಾನದಲ್ಲಿ ಭಾಗವಹಿಸುವ ಮೂಲಕ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಕನ್ನಡಪ್ರಭ ವಾರ್ತೆ ಬೇಲೂರು

ಪಂಚಾಯಿತಿ ವ್ಯಾಪ್ತಿಯ ಹಳ್ಳಿಯಲ್ಲಿ ಯಾವುದೇ ಕುಟುಂಬ ಜಾಬ್ ಕಾರ್ಡ್ ಹೊಂದಿಲ್ಲದವರಿಗೆ ಆಗಸ್ಟ್ 15ರಿಂದ ಸೆಪ್ಟೆಂಬರ್ 15ರವರೆಗೆ ಜಾಬ್ ಕಾರ್ಡ್‌ ಮೇಳ ಅಭಿಯಾನವನ್ನು ಆಯೋಜಿಸಿದ್ದು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸುವ ಅವಕಾಶವಿದೆ ಎಂದು ತಾಲೂಕು ಐಇಸಿ ಸಂಯೋಜಕರಾದ ಎಂ ಸಿ ದಿನೇಶ್ ಅವರು ಸಾರ್ವಜನಿಕರಿಗೆ ಮಾಹಿತಿ ನೀಡಿದರು.

ತಾಲೂಕು ಅಂದಲೆ ಗ್ರಾಮ ಪಂಚಾಯಿತಿಯಲ್ಲಿ ವಿಬಿಜಿ ರಾಮ್ ಜಿ ಗ್ರಾಮೀಣ ಯೋಜನೆಯ ಪ್ರಚಾರ ಕಾರ್ಯಕ್ರಮ ಹಾಗೂ ಜಾಬ್ ಕಾರ್ಡ್ ಮೇಳ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ನಿಗದಿತ ನಮೂನೆಯಲ್ಲಿ ಆನ್ಲೈನ್‌ನಲ್ಲಿ ಅರ್ಜಿ ಸಲ್ಲಿಸಿದವರಿಗೆ ಜಾಬ್ ಕಾರ್ಡ್ ಒದಗಿಸಿ ಕೊಡಲಾಗುವುದು. ಇನ್ನು ಮುಂದೆ ಪ್ರತಿಯೊಬ್ಬ ಕೂಲಿ ಕಾರ್ಮಿಕರಿಗೂ ವಿಬಿಜಿ ರಾಮ್ ಜಿ ಗ್ಯಾರಂಟಿ ಕಾರ್ಡ್ ಗಳನ್ನು ವಿತರಿಸಲಾಗುತ್ತದೆ. ಅವುಗಳನ್ನು ಹೊಂದಿದ ಗ್ರಾಮೀಣ ಕುಟುಂಬಗಳು ವಾರ್ಷಿಕ ೧೨೫ ದಿನಗಳ ಕೂಲಿ ಪಡೆಯಬಹುದು. ಹಾಗೂ 60 ದಿನಗಳ ರಜಾ ಸೌಲಭ್ಯವನ್ನು ತಮ್ಮ ಸ್ವಂತ ಕೃಷಿ ಚಟುವಟಿಕೆಗಳ ಕಾಲದಲ್ಲಿ ಬಳಸಿಕೊಳ್ಳಬಹುದು. ಅಲ್ಲದೆ ಸಾಮುದಾಯಿಕ ಅಭಿವೃದ್ಧಿ ಕಾಮಗಾರಿಗಳು ಹಾಗೂ ವೈಯಕ್ತಿಕ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿಕೊಳ್ಳಲು ಈ ಒಂದು ಜಾಬ್ ಕಾರ್ಡ್ ತುಂಬಾ ಪ್ರಮುಖವಾಗಿರುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಕೂಡ ಈ ಒಂದು ಜಾಬ್ ಕಾರ್ಡ್ ಮೇಳ ಅಭಿಯಾನದಲ್ಲಿ ಭಾಗವಹಿಸುವ ಮೂಲಕ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದರು. ಇದೇ ಸಂದರ್ಭದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿ ಟಿ ಪರಮೇಶ್ ಮಾತನಾಡಿ ಸಾರ್ವಜನಿಕರಿಗೆ ಭಾರತ್ ಜೋಡೋ ಸಂಘಟನೆಯ ಬಗ್ಗೆ ಮಾಹಿತಿ ನೀಡುತ್ತಾ ನಮ್ಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಹಳ್ಳಿಯ 16ರಿಂದ 35 ವರ್ಷ ವಯಸ್ಸಿನ ಎಲ್ಲ ಯುವಕ ಯುವತಿಯರು ನಮ್ಮ ಪಂಚಾಯಿತಿಗೆ ಭೇಟಿ ನೀಡಿ 10 ರು. ನೋಂದಣಿ ಶುಲ್ಕದೊಂದಿಗೆ ಸಂಘದ ಸದಸ್ಯತ್ವವನ್ನು ಪಡೆದು ಸಂಘದ ಸದಸ್ಯರಾಗುವ ಮೂಲಕ ನಾಯಕತ್ವದ ಗುಣಗಳನ್ನು ಬೆಳೆಸಿಕೊಂಡು ತಮ್ಮ ಹಳ್ಳಿಯ ಅಭಿವೃದ್ಧಿ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು.ಈ ಸಂದರ್ಭದಲ್ಲಿ ಗ್ರಾಪಂ ಕಾರ್ಯದರ್ಶಿ ಕುಮಾರ್‌, ಮಹಿಳಾ ಒಕ್ಕೂಟದ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು, ನೌಕರರು ಹಾಗೂ ಗ್ರಾಮದ ಸಾರ್ವಜನಿಕರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೇಮಾವತಿ ಜಲಾಶಯದಿಂದ ಕೆರೆಕಟ್ಟೆಗಳಿಗೆ ನೀರು: ಶಾಸಕ ಎಚ್.ಟಿ.ಮಂಜು ಪರಿಶೀಲನೆ
ಎಚ್ಡಿಕೆಯಿಂದ ಶ್ರೀಅಭಯ ಆಂಜನೇಯಸ್ವಾಮಿ ದೇಗುಲ ಲೋಕಾರ್ಪಣೆ