ಕನ್ನಡಪ್ರಭ ವಾರ್ತೆ ಮಂಡ್ಯ
ಇಂದಿನ ಸ್ಪರ್ಧಾತ್ಮಕ ಉದ್ಯೋಗ ಮಾರುಕಟ್ಟೆಯಲ್ಲಿ ವಿದ್ಯಾರ್ಥಿಗಳಿಗೆ ಸೂಕ್ತ ಉದ್ಯೋಗವಕಾಶಗಳನ್ನು ಒದಗಿಸುವುದು, ಕೈಗಾರಿಕೆಗಳ ಅಗತ್ಯಗಳಿಗೆ ಅನುಗುಣವಾಗಿ ತಾಂತ್ರಿಕ ಮತ್ತು ವೃತ್ತಿಪರ ಕೌಶಲ್ಯಗಳನ್ನು ಬೆಳೆಸುವುದು, ಶಿಕ್ಷಣ ಸಂಸ್ಥೆಗಳು, ಕೈಗಾರಿಕೆಗಳ ನಡುವಿನ ಸಂಪರ್ಕವನ್ನು ಬಲಪಡಿಸುವುದು ಉದ್ಯೋಗ ಮೇಳದ ಪ್ರಮುಖ ಉದ್ದೇಶವಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಉದ್ಯೋಗ ಮೇಳದಲ್ಲಿ ವಿವಿಧ ಕ್ಷೇತ್ರಗಳಿಗೆ ಸೇರಿದ ೩೦ಕ್ಕೂ ಹೆಚ್ಚು ಕಂಪನಿಗಳು ಮತ್ತು ಪ್ರತಿಷ್ಠಿತ ಕೈಗಾರಿಕಾ ಸಂಸ್ಥೆಗಳು ಭಾಗವಹಿಸಲಿವೆ. ಇದರಿಂದ ವಿವಿಧ ಶೈಕ್ಷಣಿಕ ಅರ್ಹತೆ ಮತ್ತು ಕೌಶಲ್ಯಗಳನ್ನು ಹೊಂದಿರುವ ಉದ್ಯೋಗಾಕಾಂಕ್ಷಿಗಳಿಗೆ ತಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ಉದ್ಯೋಗ ಮತ್ತು ಅಪ್ರೆಂಟಿಸ್‌ಶಿಪ್ ಅವಕಾಶಗಳನ್ನು ಪಡೆಯಲು ಉತ್ತಮ ವೇದಿಕೆ ದೊರೆಯಲಿದೆ ಎಂದರು.ಈ ಉದ್ಯೋಗ ಮೇಳದಲ್ಲಿ ಬಿಇ, ಬಿಎ, ಬಿಎಸ್ಸಿ, ಬಿಕಾಂ, ಬಿಸಿಎ, ಬಿಬಿಎ ಹಾಗೂ ಇತರೆ ಪದವೀಧರರು, ಡಿಪ್ಲೋಮಾ, ಐಟಿಐ ಪದವೀಧರರೂ ಭಾಗವಹಿಸಬಹುದು. ಅಪ್ರೆಂಟಿಸ್‌ಶಿಪ್ ತರಬೇತಿಯು ಅಭ್ಯರ್ಥಿಗಳಿಗೆ ಕೈಗಾರಿಕೆಗಳಲ್ಲಿ ಪ್ರಾಯೋಗಿಕ ಅನುಭವವನ್ನು ಪಡೆಯಲು, ಕಾರ್ಯಕ್ಷೇತ್ರದ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಳ್ಳಲು ಮತ್ತು ಭವಿಷ್ಯದ ಉದ್ಯೋಗವಕಾಶಗಳಿಗೆ ಸಿದ್ಧರಾಗಲು ಸಹಕಾರಿಯಾಗುತ್ತದೆ. ಉದ್ಯೋಗಮೇಳದ ಮೂಲಕ ಅಭ್ಯರ್ಥಿಗಳು ವಿವಿಧ ಸಂಸ್ಥೆಗಳ ನೇಮಕಾತಿ ಪ್ರತಿನಿಧಿಗಳನ್ನು ನೇರವಾಗಿ ಸಂಪರ್ಕಿಸಿ ತಮ್ಮ ವಿದ್ಯಾರ್ಹತೆ, ಕೌಶಲ್ಯ ಮತ್ತು ಸಾಮರ್ಥ್ಯವನ್ನು ಪರಿಚಯಿಸಿಕೊಳ್ಳಬಹುದು ಎಂದರು.
ವಾಲಿಬಾಲ್ ಟೂರ್ನಿಯಲ್ಲಿ ಮಂಡ್ಯ ಜಿಲ್ಲೆಯ ಆಟಗಾರರು ಮಾತ್ರ ಭಾಗವಹಿಸಬಹುದು. ಪ್ರಥಮ ಬಹುಮಾನ 50 ಸಾವಿರ, ದ್ವಿತೀಯ ಬಹುಮಾನ 25 ಸಾವಿರ ಹಾಗೂ ತೃತೀಯ ಬಹುಮಾನ 10 ಸಾವಿರ ನಗದು ಮತ್ತು ಟ್ರೋಫಿ ನೀಡಲಾಗುತ್ತದೆ.ಪ್ರವೇಶ ಶುಲ್ಕ 2001 ರೂ. ನಿಗಧಿ ಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಶಿವಕುಮಾರ್-೭೩೩೭೭೯೦೩೭೪, ಪ್ರವೀಣ್-೭೨೫೯೫೭೩೪೩೫, ಶ್ರೀಕಾಂತ್-೯೭೪೦೨೯೬೯೭೬, ಸುಮಂತ್-೯೫೯೧೫೫೪೦೨೯ ಸಂಪರ್ಕಿಸಲು ಆಯೋಜಕರು ತಿಳಿಸಿದ್ದಾರೆ.