ಹರಿಹರ: ನಾಳೆ ಎಸ್ ಜೆವಿಪಿ ಕಾಲೇಜಿನಲ್ಲಿ ಉದ್ಯೋಗ ಮೇಳ

KannadaprabhaNewsNetwork |  
Published : May 30, 2025, 12:45 AM ISTUpdated : May 30, 2025, 12:46 AM IST
೨೯ಎಚ್ ಆರ್ ಆರ್ ೦೩ಹರಿಹರದಲ್ಲಿ ನಡೆದ ಸುದ್ದಿಗೊಷ್ಠಿಯಲ್ಲಿ ಎಸ್ ಜೆ ವಿಪಿ ಕಾಲೇಜಿನ ಪ್ರಾಂಶುಪಾಲೆ ಡಾ. ಎನ್. ಎಚ್. ಶಿವಗಂಗಮ್ಮ ಮಾತನಾಡಿದರು. | Kannada Prabha

ಸಾರಾಂಶ

ನಗರದ ಎಸ್.ಜೆ.ವಿ.ಪಿ. ಪದವಿ ಕಾಲೇಜಿನಲ್ಲಿ ಮೇ ೩೧ರಂದು ಬೆಳಗ್ಗೆ ೯.೩೦ರಿಂದ ಉದ್ಯೋಗ ಮೇಳ ಆಯೋಜಿಸಲಾಗಿದೆ. ಆಸಕ್ತ ಉದ್ಯೋಗ ಆಕಾಂಕ್ಷಿಗಳು ಭಾಗವಹಿಸಬೇಕೆಂದು ಕಾಲೇಜಿನ ಪ್ರಾಂಶುಪಾಲೆ ಡಾ. ಎನ್.ಎಚ್. ಶಿವಗಂಗಮ್ಮ ಹರಿಹರದಲ್ಲಿ ಹೇಳಿದ್ದಾರೆ.

ಹರಿಹರ: ನಗರದ ಎಸ್.ಜೆ.ವಿ.ಪಿ. ಪದವಿ ಕಾಲೇಜಿನಲ್ಲಿ ಮೇ ೩೧ರಂದು ಬೆಳಗ್ಗೆ ೯.೩೦ರಿಂದ ಉದ್ಯೋಗ ಮೇಳ ಆಯೋಜಿಸಲಾಗಿದೆ. ಆಸಕ್ತ ಉದ್ಯೋಗ ಆಕಾಂಕ್ಷಿಗಳು ಭಾಗವಹಿಸಬೇಕೆಂದು ಕಾಲೇಜಿನ ಪ್ರಾಂಶುಪಾಲೆ ಡಾ. ಎನ್.ಎಚ್. ಶಿವಗಂಗಮ್ಮ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್.ಜೆ.ವಿ.ಪಿ. ಪದವಿ ಕಾಲೇಜು ಕಳೆದ ೫೪ ವರ್ಷಗಳಿಂದ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವುದರ ಜೊತೆಗೆ ಅನೇಕ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿದೆ. 2 ವರ್ಷಗಳಿಂದ ಉದ್ಯೋಗ ಮೇಳ ಯಶಸ್ವಿಯಾಗಿ ಆಯೋಜಿಸುತ್ತಿದೆ. ಹಲವಾರು ಮಂದಿ ಉಪಯೋಗ ಪಡೆದು ಜೀವನ ರೂಪಿಸಿಕೂಂಡಿದ್ದಾರೆ ಎಂದರು.

ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಕಾಲೇಜಿನ ವಿದ್ಯಾರ್ಥಿಗಳ ಜೊತೆಗೆ ಹರಿಹರ ತಾಲೂಕಿನ ಉದ್ಯೋಗ ಆಕಾಂಕ್ಷಿಗಳಿಗಾಗಿ ಈ ಉದ್ಯೋಗ ಮೇಳ ಏರ್ಪಡಿಸಲಾಗಿದೆ. ಮೇಳದಲ್ಲಿ ರಾಜ್ಯದ ಮತ್ತು ಜಿಲ್ಲೆಯ ವಿವಿಧ ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿವೆ. ಎಸ್ಸೆಸ್ಸೆಲ್ಸಿ, ಪಿಯುಸಿ, ಯಾವುದೇ ಡಿಗ್ರಿ, ಡಿಪ್ಲೊಮಾ, ಪಿಜಿ ಕೋರ್ಸ್‌ಗಳಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಉದ್ಯೋಗ ಅವಕಾಶವನ್ನು ಕಾಲೇಜು ಒದಗಿಸುತ್ತಿದೆ. ಮೇಳದಲ್ಲಿ ಭಾಗವಹಿಸುವವರು ವಿದ್ಯಾಭ್ಯಾಸದ ಅಗತ್ಯ ಮೂಲ ದಾಖಲಾತಿಗಳೊಂದಿಗೆ (ಜೆರಾಕ್ಸ್೩ ಸೆಟ್), 2 ಭಾವಚಿತ್ರ (ಪಾಸ್‌ಪೋರ್ಟ್ ಅಳತೆ) ಮತ್ತು ಆಧಾರ್ ಕಾರ್ಡ್‌ನೊಂದಿಗೆ ನಿಗದಿತ ಸಮಯಕ್ಕೆ ಆಗಮಿಸಬೆಕ. ಯಾವುದೇ ಪ್ರವೇಶ ಶುಲ್ಕ ಇರುವುದಿಲ್ಲ. ಹೆಚ್ಚಿನ ಮಾಹಿತಿಗೆ ಮೊ.೯೬೬೩೯೦೧೫೪೧, ೮೭೪೭೯೭೫೬೧೫ ಇಲ್ಲಿಗೆ ಸಂಪರ್ಕಿಸಲು ಕೋರಿದರು.

ಈ ಸಂದರ್ಭದಲ್ಲಿ ಉಪನ್ಯಾಸಕರಾದ ಡಾ. ರಮೇಶ್ ಕೆ. ಪರ್ವತಿ, ಡಾ. ವೀರಣ್ಣ ಶೆಟ್ಟರ್, ಭರ್ಮಪ್ಪ ಟಿ. ಉಪಸ್ಥಿತರಿದ್ದರು.

- - -

-೨೯ಎಚ್‌ಆರ್ ಆರ್೨೯:

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾಂಗ್ರೆಸ್‌ನವರಿಗೆ ಬಜೆಟ್ ಅರ್ಥವಾಗಲ್ಲ: ಜೋಶಿ ಚಾಟಿ
ರಾಜಕ್ಕೆ ಕೇಂದ್ರ ಬಜೆಟ್ಟಲ್ಲಿ ಚೊಂಬು : ಸಿಎಂ ಸಿಡಿಮಿಡಿ