ಕನ್ನಡಪ್ರಭ ವಾರ್ತೆ ಗೌರಿಬಿದನೂರು
ನಗರದ ಹೊರವಲಯದಲ್ಲಿರುವ ಸಮಾನತಾ ಸೌಧದಲ್ಲಿ ಹಮ್ಮಿಕೊಂಡಿದ್ದ ಉದ್ಯೋಗ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ದುಡಿಯುವ ಕೈಗಳಿಗೆ ಉದ್ಯೋಗ ಲಭಿಸುವಂತೆ ಮಾಡಿದಾಗಲೆ ದೇಶದ ಅಭಿವೃದ್ಧಿ ಸಾಧ್ಯ ಎಂದರು.
ಉದ್ಯೋಗ ಮೇಳ ಸಹಕಾರಿದೇಶದಲ್ಲಿ ನಿರುದ್ಯೋಗಿ ಪದವಿದರರ ಸಂಖ್ಯೆ ಹೆಚ್ಚುತ್ತಿದೆ. ಅವರಿಗೆ ಸ್ವಯಂ ಉದ್ಯೋಗ ಕೈ ಗೊಳ್ಳಲು ಬಂಡವಾಳವಾದ ಕೊರತೆ ಕಾಡುತ್ತಿದೆ. ಸರ್ಕಾರಿ ಉದ್ಯೋಗಗಳು ಗಗನ ಕುಸುಮವಾಗಿವೆ. ಆದ್ದರಿಂದ ಇಂತಹ ಉದ್ಯೋಗ ಮೇಳಗಳು ಪದವೀಧರರಿಗೆ ಸಹಾಯಕವಾಗುತ್ತದೆ. ಪ್ರತಿ ತಾಲೂಕಿನಲ್ಲಿ ಇಂತಹ ಮೇಳಗಳನ್ನು ಆಯೋಜಿಸುವುದರಿಂದ ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉದ್ಯೋಗ ದೊರೆಯುತ್ತದೆ ಎಂದರು.
ಮುಂದಿನ ದಿನಗಳಲ್ಲಿ ಬೃಹತ್ ಮೇಳ
ಈ ಸಂಸ್ಥೆಯ ಎಚ್.ಆರ್. ಮಾತನಾಡಿ ದೇವನಹಳ್ಳೀ ಏರ್ ಇಂಡಿಯಾ ಸ್ಯಾಟ್ಸಸ್ ಸರ್ವೀಸಸ್ ಪ್ರೈ.ಲಿ. ಕಂಪನಿಯವರು ಉದ್ಯೋಗ ಮೇಳದಲ್ಲಿ ಭಾಗವಹಿಸಿದ್ದು ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ ಉತ್ತೀರ್ಣ, ಅನುತ್ತೀರ್ಣ, ಡಿಪ್ಲೊಮೊ, ಐ.ಟಿ.ಐ ಮತ್ತು ಪದವಿ ವಿದ್ಯಾರ್ಥಿಗಳಿಗೆ ಅವರವರ ವಿದ್ಯಾರ್ಹತೆ ಮೇರೆಗೆ ಉದ್ಯೋಗವಕಾಶ ಕಲ್ಪಿಸಲಾಗುತ್ತಿದೆ. ಈ ಅವಕಾಶವನ್ನು ನಿರುದ್ಯೋಗ ಯುವಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಉದ್ಯೋಗಮೇಳದಲ್ಲಿ ಒಟ್ಟು 500 ಮಂದಿ ವಿದ್ಯಾರ್ಥಿಗಳು ಭಾಗವಹಿಸಿದ್ದು, ಅದರಲ್ಲಿ 200 ಮಂದಿಗೆ ದೇವನಹಳ್ಳಿ ಮತ್ತು ಬೆಂಗಳೂರು ಭಾಗಗಳಲ್ಲಿ ಕಾರ್ಖಾನೆಗಳವರು ಉದ್ಯೋಗ ಮೇಳದಲ್ಲಿ ಅರ್ಹ ಅಭ್ಯರ್ಥಿಗಳಿಗೆ ಉದ್ಯೋಗವಕಾಶದ ನೇಮಕಾತಿ ಪತ್ರಗಳನ್ನು ನೀಡಲಾಯತು.