ಕನ್ನಡಪ್ರಭ ವಾರ್ತೆ ಹಾವೇರಿ
ನಗರದ ಹುಕ್ಕೇರಿಮಠ ಶ್ರೀ ಶಿವಲಿಂಗೇಶ್ವರ ಮಹಿಳಾ ಮಹಾವಿದ್ಯಾಲಯದಲ್ಲಿ ಭಾನುವಾರ ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಹಾವೇರಿ ಜಿಲ್ಲಾ ಉದ್ಯೋಗ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬೆಳೆಯುತ್ತಿರುವ ಜನಸಂಖ್ಯೆಯಿಂದಾಗಿ ನಿರುದ್ಯೋಗ ಸಮಸ್ಯೆ ಉಂಟಾಗಿದೆ. ಎಲ್ಲರಿಗೂ ಸರ್ಕಾರಿ ಉದ್ಯೋಗ ಸಿಗುವುದು ಕಷ್ಟ. ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ ನಿರುದ್ಯೋಗಿಗಳು ಉದ್ಯೋಗ ಗಿಟ್ಟಿಸಿಕೊಳ್ಳಬೇಕು. ಉದ್ಯೋಮ ಮೇಳಕ್ಕೆ ೨೬೦೦ ಜನ ನೋಂದಣಿ ಮಾಡಿಸಿಕೊಂಡಿದ್ದಾರೆ. ೮೦೦ ಜನರ ಸಂದರ್ಶನ ಆಗಿದೆ. ಅದರಲ್ಲಿ ೬೦ ಜನರಿಗೆ ಉದ್ಯೋಗದ ಪತ್ರ ಸಿದ್ಧವಾಗಿದೆ ಎಂದರು.ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ಗೌರಿಮಠದ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಸಂಪತ್ತು ಗಳಿಸಬೇಕಾದರೆ ಉದ್ಯೋಗದಲ್ಲಿ ತೊಡಗಿರಬೇಕು. ಕಾಯಕದಿಂದ ಹಣ ಸಂಪಾದನೆ ಮಾಡಬೇಕು. ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಉದ್ಯೋಗಿ ಆಗಬೇಕು. ಪ್ರಯತ್ನ ಬಿಡದೆ ನಿರಂತರವಾಗಿ ಕೆಲಸ ಮಾಡಬೇಕು. ದೇಶ ಅಭಿವೃದ್ಧಿ ಆಗಬೇಕು ಎಂದರೆ ನಿರುದ್ಯೋಗಿಯಾಗದೆ ಉದ್ಯೋಗಿಗಳಾಗಬೇಕು ಎಂದು ಕರೆ ನೀಡಿದರು.
ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಅಧಿಕಾರಿ ಹುಲಿರಾಜು ಸ್ವಾಗತಿಸಿದರು. ಕೃಷ್ಣ ಜವಳಿ ನಿರೂಪಿಸಿದರು.