ಕುಶಾಲನಗರ: ಯುವ ಜನತೆಗೆ ಸ್ಥಳದಲ್ಲೇ ಉದ್ಯೋಗ ಸೃಷ್ಟಿಸುವ ಹಿನ್ನೆಲೆಯಲ್ಲಿ ಕುಶಾಲನಗರದಲ್ಲಿ ಉದ್ಯೋಗ ಮೇಳ ಆಯೋಜನೆ ಮಾಡುವ ಚಿಂತನೆ ಹಮ್ಮಿಕೊಳ್ಳಲಾಗಿದೆ ಎಂದು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ತಿಳಿಸಿದ್ದಾರೆ.
ಕೊಡಗು ವಿವಿ ಕುಲಪತಿ ಡಾ. ಅಶೋಕ್ ಸಂಗಪ್ಪ ಅಲೂರ ಮಾತನಾಡಿ, ವಿದ್ಯಾವಂತ ನಿರುದ್ಯೋಗಿ ಯುವಜನರು ಉದ್ಯೋಗ ಹುಡುಕಿಕೊಂಡು ಅಲೆಯುವ ಬದಲು ಉದ್ಯೋಗಗಳನ್ನು ಸೃಷ್ಟಿಸುವಂತ ಸೃಷ್ಟಿಕರ್ತ ಆಗಬೇಕು ಎಂದರು.
ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್ ಮಾತನಾಡಿ, ನಿರುದ್ಯೋಗ ವಿದ್ಯಾವಂತ ಯುವಜನರಿಗೆ ಉದ್ಯೋಗ ಕಲ್ಪಿಸಿಕೊಡಬೇಕು. ಜೊತೆಗೆ ಅರ್ಥಪೂರ್ಣ ಬದುಕು ಕಟ್ಟಿಕೊಡಬೇಕು ಎಂಬ ಉದ್ದೇಶದಿಂದ ಕೌಶಲ್ಯ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬಹುತೇಕ ಫಲಾನುಭವಿಗಳಿಗೆ ಮಾರ್ಗದರ್ಶನದ ಕೊರತೆ ಎದುರಾಗಿದ್ದು, ಈ ನಿಟ್ಟಿನಲ್ಲಿ ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸ ಕೊಡಿಸುವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.ಶಿಕ್ಷಣ ತಜ್ಞ ಬೆಂಗಳೂರಿನ ಎ.ಎಚ್. ಸಾಗರ್ ಅವರು ವಿದ್ಯಾರ್ಥಿಗಳಲ್ಲಿ ವಿಮರ್ಶಾತ್ಮಕ ಚಿಂತನೆ ಮತ್ತು ತಾರ್ಕಿಕ ಉದ್ಯಮ ಶೀಲತೆ ಅಭಿವೃದ್ಧಿ ಕುರಿತು ಯುವ ಜನರೊಂದಿಗೆ ಸಂವಾದ ನಡೆಸಿದರು.ಸಂಪನ್ಮೂಲ ವ್ಯಕ್ತಿ ಡಿ.ಕೆ. ಮಹೇಶ್ ಕುಮಾರ್ ಪದವಿಧರರಿಗೆ ವೃತ್ತಿ ಜೀವನ. ಉದ್ಯೋಗಾವಕಾಶಗಳು, ಉದ್ಯಮಶೀಲತೆ ಮತ್ತು ಉನ್ನತ ಶಿಕ್ಷಣ ಕುರಿತು ವಿಶೇಷ ಉಪನ್ಯಾಸ ನೀಡಿದರು.ಕೊಡಗು ವಿವಿ ಪರೀಕ್ಷಾಂಗ ಕುಲಸಚಿವ ಪೊ. ಎಂ. ಸುರೇಶ್, ತಾಪಂ ಕಾರ್ಯನಿರ್ವಾಣಾಧಿಕಾರಿ ಕೆ.ಸಿ. ಅಪ್ಪಣ್ಣ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಕೆ.ಸಿ. ಭೀಮಯ್ಯ,ಕೆಪಿಸಿಸಿ ಸದಸ್ಯ ಎಚ್.ಕೆ. ನಟೇಶ್ ಗೌಡ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಜಿಲ್ಲಾ ಅಧಿಕಾರಿ ಸಿ.ಬಿ. ಮಂಜುನಾಥ್, ಸಹಾಯಕ ಅಧಿಕಾರಿ ಮದನ್, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಸದಸ್ಯ ಮಲ್ಲಿಕಾರ್ಜುನ, ಎಂ. ಕಿಶೋರ್, ರಫಿಕ್, ಕೃಷ್ಣೇಗೌಡ, ರಾಜಶೇಖರ್, ಅಬ್ದುಲ್ ರಜಾಕ್, ಶ್ರೀನಿವಾಸ್, ವಿವೇಕಾನಂದ, ಎಂ.ಎ. ಆದಂ, ಪ್ರಮುಖರಾದ ನಟೇಶ್ ಗೌಡ ಮತ್ತಿತರರು ಇದ್ದರು.