ಕನ್ನಡಪ್ರಭ ವಾರ್ತೆ ಹನೂರು
ರಾಜ್ಯದ ಪ್ರತಿಷ್ಠಿತ ಕಂಪನಿಯಿಂದ ಉದ್ಯೋಗ ಮೇಳವನ್ನು ಪಟ್ಟಣದಲ್ಲಿ ತಾಲೂಕಿನ ವಿದ್ಯಾರ್ಥಿಗಳಿಗೆ ನಿರುದ್ಯೋಗವನ್ನು ನಿವಾರಿಸುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ಸೂಕ್ತ ದಾಖಲಾತಿಗಳನ್ನು ನೀಡಿ ಕಂಪನಿಯವರ ಜೊತೆ ಉದ್ಯೋಗ ಮೇಳದಲ್ಲಿ ಮಾಹಿತಿಯನ್ನು ಪಡೆದುಕೊಂಡು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಉತ್ತಮ ಕಾರ್ಯಕ್ರಮ ಹೀಗಾಗಿದೆ. ಕಡು ಬಡತನದಿಂದ ತಂದೆ ತಾಯಿಗಳು ಮಕ್ಕಳಿಗೆ ವಿದ್ಯಾಭ್ಯಾಸ ನೀಡಿರುವುದರಿಂದ ಅಂತಹ ವಿದ್ಯಾರ್ಥಿಗಳು ಉದ್ಯೋಗ ಪಡೆದುಕೊಳ್ಳಲು ಇದೊಂದು ಸುವರ್ಣ ಅವಕಾಶ ಸದ್ಬಳಕೆ ಮಾಡಿಕೊಂಡು ಮಕ್ಕಳು ಸಿಕ್ಕಿರುವ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಹೆಚ್ಚಾಗಿ ತಾಲೂಕಿನಿಂದ 18 ವರ್ಷಕ್ಕಿಂತ ಹೆಚ್ಚು ಮೇಲ್ಪಟ್ಟ ಅರ್ಹತೆ ಹೊಂದಿದ್ದ ವಿದ್ಯಾರ್ಥಿಗಳು ಈ ಉದ್ಯೋಗ ಮೇಳದಲ್ಲಿ ತಮ್ಮ ಯುವ ಪ್ರತಿಭೆಯನ್ನು ಗುರುತಿಸಿಕೊಂಡು ತಮ್ಮ ಆರ್ಥಿಕ ಭವಿಷ್ಯಕ್ಕಾಗಿ ಸದ್ಬಳಕೆ ಮಾಡಿಕೊಳ್ಳುವಂತೆ ಶಾಸಕರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ವಿವಿಧ ಕಡೆಯಿಂದ ಆಗಮಿಸಿದ್ದ ವಿದ್ಯಾರ್ಥಿಗಳು:ಪಟ್ಟಣದ ಸರ್ಕಾರಿ ಶಾಲಾ ಕೊಠಡಿಗಳಲ್ಲಿ ಆಯೋಜಿಸಲಾಗಿದ್ದ ಉದ್ಯೋಗ ಮೇಳದಲ್ಲಿ ಹೆಚ್ಚಾಗಿ ಹೆಣ್ಣು ಮಕ್ಕಳು ಸಹ ಹೆಚ್ಚಾಗಿ ಕಂಡುಬಂದಿರುವುದರಿಂದ ಉದ್ಯೋಗ ಮೇಳದಲ್ಲಿ ಕಾಣಿಸಿಕೊಂಡಿದ್ದು ಗಮನ ಸೆಳೆಯಿತು ಜೊತೆಗೆ ಇಲ್ಲಿನ ಪ್ರತಿಷ್ಠಿತ ಕಂಪನಿಯ ವ್ಯವಸ್ಥಾಪಕರು ಸಹ ವಿದ್ಯಾರ್ಥಿಗಳಿಗೆ ಉದ್ಯೋಗ ಮೇಳದ ಬಗ್ಗೆ ಸವಿಸ್ತಾರವಾಗಿ ಮಾಹಿತಿಯನ್ನು ನೀಡುವುದರ ಜೊತೆಗೆ ಗ್ರಾಮಾಂತರದ ಪ್ರದೇಶದ ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳುವಂತೆ ಕಂಪನಿ ಕಡೆಯಿಂದ ವಿದ್ಯಾರ್ಥಿಗಳಿಗೆ ಉತ್ತಮವಾಗಿ ತರಬೇತಿ ನೀಡಿ ನೀಡಲಾಗುವುದು ಎಂದರು.